ಜಸ್ಟ್ 9,999 ರೂ.! 50MP ಸೋನಿ ಕ್ಯಾಮೆರಾ.. 5160mAh ಬ್ಯಾಟರಿ.. ಭಾರತದಲ್ಲಿ POCO M7 5G ಲಾಂಚ್
ಪೊಕೊ ಕಂಪನಿಯು ಹೊಸ 5G ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಕಂಪನಿಯು ಇದನ್ನು ಬಜೆಟ್ ವಿಭಾಗದಲ್ಲಿ ಪರಿಚಯಿಸಲಾಗಿದೆ. ಹೌದು, ಪೊಕೊ M7 5G (POCO M7 5G) ಸ್ಮಾರ್ಟ್‌ಫೋನ್ ಅಧಿಕೃತವಾಗಿ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದು ಸೊಗಸಾದ ವಿನ್ಯಾಸ ಮತ್ತು ಶಕ್ತಿಯುತ ಕಾರ್ಯಕ್ಷಮತೆ ಹೊಂದಿದೆ. ಈ ಫೋನಿನ ಸ್ಟೈಲಿಶ್ ಸ್ಟೆಲ್ಲಾರ್ ರಿಂಗ್ ಲುಕ್, ವಾಟರ್‌ಡ್ರಾಪ್ ನಾಚ್ ಡಿಸ್ಪ್ಲೇ ಮತ್ತು ಬ್ಯಾಟರಿ ಬ್ಯಾಕಪ್ ಮಿಬೈಲ್ ಪ್ರಿಯರ ಗಮನ ಸೆಳೆದಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಅಗ್ಗದ ಮೊಬೈಲ್ ಖರೀದಿಸಲು ಬಯಸುವವರಿಗೆ ಪೊಕೊ M7 5G ಉತ್ತಮ ಆಯ್ಕೆಯಾಗಿದೆ. ಇದು ಕಡಿಮೆ ದರ ಹೊಂದಿದ್ದರೂ, ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳು ಅದ್ಭುತವಾಗಿವೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.88 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 128GB ಸ್ಟೋರೇಜ್, 5160mAh ಬ್ಯಾಟರಿ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಬಿಡುಗಡೆಯಾಗಿದೆ.

ಪೊಕೊ M7 5G ಬೆಲೆ ಮತ್ತು ಆಫರ್
6GB RAM + 128GB ಸ್ಟೋರೇಜ್ ಬೆಲೆ = 9,999 ರೂ.
8GB RAM + 128GB ಸ್ಟೋರೇಜ್ ಬೆಲೆ = 10,999 ರೂ.
ಪೊಕೊ M7 5G ಫೋನನ್ನು ಅಗ್ಗದ ಬೆಲೆಯಲ್ಲಿ ಬೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ. ಮೊದಲ ದಿನ ಈ ಫೋನ್ ಖರೀದಿಸುವ ಗ್ರಾಹಕರಿಗೆ ವಿಶೇಷ ಉಡುಗೊರೆ ನೀಡಲಾಗುತ್ತದೆ. 6GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ ಕೇವಲ 9,999 ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರವು 10,999 ರೂ. ಬೆಲೆಗೆ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್ ಈ ವಿಭಾಗದಲ್ಲಿ ಉತ್ತಮ ಆಯ್ಕೆಯಾಗಿದೆ.
ಕಂಪನಿಯು ಈ ಪೊಕೊ ಫೋನನ್ನು ಮೂರು ಬಣ್ಣ ಆಯ್ಕೆಗಳಲ್ಲಿ ಪರಿಚಯಿಸಿದೆ. ನೀವು ಸ್ಯಾಟಿನ್ ಬ್ಲಾಕ್, ಮಿಂಟ್ ಗ್ರೀನ್ ಮತ್ತು ಓಷನ್ ಬ್ಲೂ ಬಣ್ಣಗಳಲ್ಲಿ ಖರೀದಿಸಬಹುದು. ಪೊಕೊ M7 5G ಮೊಬೈಲ್ ಇದೇ ಮಾರ್ಚ್ 7 ರಂದು ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ವಿಶೇಷವೆಂದರೆ, ಕಂಪನಿಯು ಇದನ್ನು 'ಸ್ಟೆಲ್ಲಾರ್ ರಿಂಗ್ ಡಿಸೈನ್' ಎಂದು ಕರೆದಿದೆ.
ಪೊಕೊ M7 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಪೊಕೊ M7 5G ಫೋನ್ 6.88 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 1,640 x 720 ಪಿಕ್ಸೆಲ್‌ಗಳ ಸ್ಕ್ರೀನ್ ರೆಸಲ್ಯೂಶನ್ ಹೊಂದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 600 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಪೊಕೊ M7 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ ಜಿಪಿಯು ಸಹ ಹೊಂದಿದೆ. ಇದು 2 ವರ್ಷಗಳ ಆಂಡ್ರಾಯ್ಡ್ ನವೀಕರಣಗಳು ಮತ್ತು 4 ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಪಡೆದಿದೆ.
RAM ಮತ್ತು ಸ್ಟೋರೇಜ್ ಆಯ್ಕೆ
ಪೊಕೊ M7 5G ಮೊಬೈಲ್ 6GB RAM + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು. ಈ ಫೋನ್ 8GB ವರೆಗಿನ ವರ್ಚುವಲ್ RAM ಅನ್ನು ಸಹ ಬೆಂಬಲಿಸುತ್ತದೆ.

ಕ್ಯಾಮೆರಾ ಸೆಟಪ್
ಪೊಕೊ M7 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಪೊಕೊ M7 5G ಸ್ಮಾರ್ಟ್‌ಫೋನ್ 5160mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸುತ್ತದೆ.
ಇತರೆ ವೈಶಿಷ್ಟ್ಯಗಳು
ಪೊಕೊ M7 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಹಾಗೆಯೇ 150% ವಾಲ್ಯೂಮ್ ಬೂಸ್ಟ್ ಸಹ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ, ಬ್ಲೂಟೂತ್ 5.4, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








