ಭಾರೀ ಬೆಲೆ ಇಳಿಕೆ! 50MP ಕ್ಯಾಮೆರಾ.. 256GB ಸ್ಟೋರೇಜ್.. 1500 ಡಿಸ್ಕೌಂಟ್; ಅದೂ ಹೊಸ POCO ಫೋನ್
ಪೊಕೊ ಪ್ರಿಯರಿಗೆ ಇಲ್ಲಿದೆ ಖುಷಿ ಸುದ್ದಿ! ಇತ್ತೀಚೆಗೆ ಬಿಡುಗಡೆಯಾದ ಮೊಬೈಲ್ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಹೌದು, ಪೊಕೊ ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎರಡು 5G ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿತ್ತು. ಕಂಪನಿಯು ಪೊಕೊ C75 5G ಫೋನನ್ನು 8000 ರೂ.ಗಿಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡಿದೆ. ಹಾಗೆಯೇ ಪೊಕೊ M7 ಪ್ರೊ (POCO M7 Pro) ಫೋನನ್ನು 15,000 ರೂ. ಬೆಲೆಗೆ ಬಿಡುಗಡೆ ಮಾಡಿದೆ. ಆದರೆ, ಈ ಫೋನನ್ನು ಕೇವಲ ಎರಡು ತಿಂಗಳಲ್ಲಿ ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು. ಬನ್ನಿ, ಈ ಫೋನಿನ ಆಫರ್‍ಗಳು, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ M7 ಪ್ರೊ ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಹಲವು ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ನೀವು,15 ಸಾವಿರ ರೂ. ಬಜೆಟ್‌ನಲ್ಲಿ ಹೊಸ ಫೋನ್ ಕೊಳ್ಳಲು ಖರೀದಿಸಲು ಬಯಸಿದರೆ, ಪೊಕೊ M7 ಪ್ರೊ ಉತ್ತಮ ಆಯ್ಕೆಯಾಗಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ, 6.67 ಇಂಚಿನ ಡಿಸ್ಪ್ಲೇ ಮತ್ತು 5110mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಪೊಕೊ M7 ಪ್ರೊ 5G ಹೊಸ ಬೆಲೆ
ಪೊಕೊ M7 ಪ್ರೊ 5G ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಈ ಫೋನಿನ 6GB RAM ರೂಪಾಂತರವನ್ನು 14,999 ರೂ.ಗೆ ಮತ್ತು 8GB RAM ರೂಪಾಂತರವು 16,999 ರೂ.ಗೆ ಬಿಡುಗಡೆಯಾಗಿತ್ತು.
ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 6GB RAM ರೂಪಾಂತರದ ಬೆಲೆ 13,999 ರೂ. ಆಗಿದೆ. 8GB RAM ಸ್ಟೋರೇಜ್ ರೂಪಾಂತರದ ಬೆಲೆ 15,999 ರೂ. ಇದೆ. ಅಂದರೆ ಇದರ ಬೆಲೆ 1000 ರೂ. ಇಳಿಕೆಯಾಗಿದೆ. ಇದಲ್ಲದೆ, ಫ್ಲಿಪ್‌ಕಾರ್ಟ್ ಎಲ್ಲಾ ಬ್ಯಾಂಕ್ ಕಾರ್ಡ್‌ಗಳ ಮೇಲೆ 500 ರೂ.ಗಳ ರಿಯಾಯಿತಿ ನೀಡುತ್ತಿದೆ. ರಿಯಾಯಿತಿಯೊಂದಿಗೆ ಈ ಫೋನಿನ ಆರಂಭಿಕ ಬೆಲೆ 13,499 ರೂ. ಆಗಿದೆ. ಇನ್ನೊಂದು ರೂಪಾಂತರದ ಬೆಲೆ 14,499 ರೂ.ಗೆ ಲಭ್ಯವಿದೆ.
ನೀವು ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕಾರ್ಡ್ ಮೂಲಕ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಪಡೆಯಬಹುದು. ಪೊಕೊ M7 ಪ್ರೊ 5G ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಲೂನಾರ್ ಡಸ್ಟ್, ಆಲಿವ್ ಟ್ವಿಲೈಟ್ ಮತ್ತು ಲ್ಯಾವೆಂಡರ್ ಫ್ರಾಸ್ಟ್ ಬಣ್ಣಗಳಲ್ಲಿ ಲಭ್ಯವಿದೆ. 15,000 ರೂ.ಗಿಂತ ಕಡಿಮೆ ಬೆಲೆಗೆ 5G ಫೋನ್ ಖರೀದಿಸಲು ಬಯಸುವವರಿಗೆ, ಈ ಫೋನ್ ಉತ್ತಮ ಆಯ್ಕೆಯಾಗಿದೆ.
ಪೊಕೊ M7 ಪ್ರೊ ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಕಂಪನಿಯು ಪೊಕೊ M7 ಪ್ರೊ ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 16GB RAM ಹೊಂದಿದೆ. ಇದು 128GB ಮತ್ತು 256GB ಸ್ಟೋರೇಜ್ ಆಯ್ಕೆ ಹೊಂದಿದೆ.
ಸೋನಿ ಕ್ಯಾಮೆರಾ
ಪೊಕೊ M7 ಪ್ರೊ ಮೊಬೈಲ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಹಾಗೆಯೇ, ಎಲ್‌ಇಡಿ ಫ್ಲಾಷ್‌ನೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ
ಪೊಕೊ M7 ಪ್ರೊ ಫೋನ್ 5110mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








