ಇಂದು POCO M7 Pro ಫಸ್ಟ್ ಸೇಲ್; ಜಬರ್ದಸ್ತ್ ಫೀಚರ್ಸ್.. ಕಡಿಮೆ ಬೆಲೆ
ಪೊಕೊ ಇತ್ತೀಚೆಗೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್ ಪೊಕೊ M7 ಪ್ರೊ (POCO M7 Pro) ಎಂಬ ಹೆಸರಿನೊಂದಿಗೆ ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್ ಇಂದಿನಿಂದ (ಡಿಸೆಂಬರ್ 20 ರಂದು) ಇ-ಕಾಮರ್ಸ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟವನ್ನು ಶುರು ಮಾಡಲಿದೆ. ಕಂಪನಿಯು ನೂತನ ಪೊಕೊ M7 ಪ್ರೊ ಫೋನನ್ನು ಬಜೆಟ್ ಬೆಲೆಯಲ್ಲಿ ಪರಿಚಯಿಸಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ M7 ಪ್ರೊ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಹಲವು ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ನೀವು, 15 ಸಾವಿರ ರೂ. ಬಜೆಟ್‌ನಲ್ಲಿ ಹೊಸ ಫೋನ್ ಕೊಳ್ಳಲು ಖರೀದಿಸಲು ಬಯಸಿದರೆ, ಪೊಕೊ M7 ಪ್ರೊ ಉತ್ತಮ ಆಯ್ಕೆಯಾಗಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ, 6.67 ಇಂಚಿನ ಡಿಸ್ಪ್ಲೇ ಮತ್ತು 5110mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಪೊಕೊ M7 ಪ್ರೊ ಬೆಲೆ ಎಷ್ಟು?
ಪೊಕೊ M7 ಪ್ರೊ ಫೋನಿನ 6GB + 128GB ಸ್ಟೋರೇಜ್ ಆಯ್ಕೆಯು 14,999 ರೂ.ಗೆ ಮಾರಾಟವಾಗಲಿದೆ. ಇನ್ನು 8GB + 256GB ಸ್ಟೋರೇಜ್ ರೂಪಾಂತರವು 16,999 ರೂ.ಗೆ ಬಿಡುಗಡೆಯಾಗಿದೆ. ಈ ಮೊಬೈಲ್ ಲೂನಾರ್ ಡಸ್ಟ್, ಲ್ಯಾವೆಂಡರ್ ಫ್ರಾಸ್ಟ್ ಮತ್ತು ಆಲಿವ್ ಟ್ವಿಲೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ಅಧಿಕೃತವಾಗಿ ಮೊದಲ ಮಾರಾಟವನ್ನು ಶುರು ಮಾಡಲಿದೆ.
ಪೊಕೊ M7 ಪ್ರೊ: ಟಾಪ್ 5 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಕಂಪನಿಯು ಪೊಕೊ M7 ಪ್ರೊ ಫೋನನ್ನು ಮೀಡಿಯಾಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 16GB RAM ಹೊಂದಿದೆ. ಇದು 128GB ಮತ್ತು 256GB ಸ್ಟೋರೇಜ್ ಆಯ್ಕೆ ಹೊಂದಿದೆ.
50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ
ಪೊಕೊ M7 ಪ್ರೊ ಮೊಬೈಲ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಹಾಗೆಯೇ, ಎಲ್‌ಇಡಿ ಫ್ಲಾಷ್‌ನೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ
ಪೊಕೊ M7 ಪ್ರೊ ಫೋನ್ 5110mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಪೊಕೊ M7 ಪ್ರೊ ಮೊಬೈಲ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








