20000ರೂ. ಒಳಗೆ ಲಭ್ಯ ಇರುವ ಬೆಸ್ಟ್ ಪೊಕೊ ಫೋನ್‌ಗಳ ಲಿಸ್ಟ್ ಇಲ್ಲಿದೆ!
ಭಾರತೀಯ ಮೊಬೈಲ್ ಮಾರುಕಟ್ಟೆಯಲ್ಲಿ ಪೊಕೊ ಕಂಪನಿಯು ತನ್ನ ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿದೆ. ಪೊಕೊ ಸಂಸ್ಥೆಯು ಅಗ್ಗದ ಹಾಗೂ ಬಜೆಟ್ ಬೆಲೆಯ ಫೋನ್‌ಗಳ ಆಯ್ಕೆಯನ್ನು ಹೊಂದಿದೆ. ಅದಾಗ್ಯೂ, ಪೊಕೊ ಸಂಸ್ಥೆಯ ಕೆಲವು ಫೋನ್‌ಗಳು ಫೀಚರ್ಸ್ ಹಾಗೂ ಡಿಸೈನ್ನಿಂದಾಗಿ ವಿಶೇಷ ಆಕರ್ಷಣೆ ಪಡೆದುಕೊಂಡಿವೆ.
ಹೌದು, ಪೊಕೊ ಮೊಬೈಲ್ ಕಂಪನಿಯು ಹಲವು ಫೋನ್‌ಗಳ ಆಯ್ಕೆ ಪಡೆದುಕೊಂಡಿದೆ. ಅವುಗಳಲ್ಲಿ ಪೊಕೊ M ಮತ್ತು ಪೊಕೊ X ಸರಣಿಯ ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನ ಸೆಳೆದಿವೆ. ಈ ಫೋನ್‌ಗಳು ಗ್ರಾಹಕ ಸ್ನೇಹಿ ಬೆಲೆಯನ್ನು ಪಡೆದಿದ್ದು, ಅಲ್ಲದೇ ಡಿಸ್‌ಪ್ಲೇ, ಬ್ಯಾಟರಿ, ಪ್ರೊಸೆಸರ್ ಮತ್ತು ಇತರೆ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಹಾಗಾದರೆ ಸದ್ಯ 20000ರೂ. ಒಳಗಿನ ಕೆಲವು ಪೊಕೊ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಪೊಕೊ X6 ನಿಯೋ ಫೋನ್
ಪೊಕೊದ ಈ ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಪಡೆದಿದ್ದು, ಈ ಡಿಸ್‌ಪ್ಲೇಯು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಸಪೋರ್ಟ್ ಪಡೆದಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ (6 nm) ಪ್ರೊಸೆಸರ್ ಪವರ್ ಪಡೆದಿದ್ದು, ಪೂರಕವಾಗಿ ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ.
ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಒಳಗೊಂಡಿದೆ. ಇದರ ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ನೀಡುತ್ತದೆ.
ಪೊಕೊ M6 ಪ್ರೊ 5G ಮೊಬೈಲ್
ಪೊಕೊ M6 ಪ್ರೊ 5G ಮೊಬೈಲ್ 6.79 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, ಇದು 2460 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. ಹಾಗೆಯೇ ಇದು ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 4 ಜನ್ 2 ಪ್ರೊಸೆಸರ್ ಸೌಲಭ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಸಹ ಒಳಗೊಂಡಿದೆ.
ಅಲ್ಲದೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, 18W ಫಾಸ್ಟ್ ಚಾರ್ಜಿಂಗ್‌ಗೆ ಸಪೋರ್ಟ್ ಕಾಣಬಹುದಾಗಿದೆ.
ಪೊಕೊ M6 5G ಮೊಬೈಲ್
ಪೊಕೊ M6 5G ಮೊಬೈಲ್ 6.74 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಅಲ್ಲದೇ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಪೋರ್ಟ್ ಮಾಡಲಿದ್ದು, 600nits ಗರಿಷ್ಠ ಬ್ರೈಟ್‌ನೆಸ್ ಒದಗಿಸಲಿದೆ. ಹಾಗೆಯೇ ಈ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್ ಅನ್ನು ಪಡೆದಿದ್ದು, ಇದು ಆಂಡ್ರಾಯ್ಡ್ 13 ಆಧಾರಿತ MIUI 14 ನಲ್ಲಿ ಕಾರ್ಯ ಮಾಡುತ್ತದೆ.
ಅಲ್ಲದೇ ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದಿದೆ.


Click it and Unblock the Notifications








