Home
ಮೊಬೈಲ್

ನಾಳೆ POCO X7 ಫಸ್ಟ್‌ ಸೇಲ್; 4000 ರಿಯಾಯಿತಿ.. ಕಡಿಮೆ ಬೆಲೆ.. ಬೊಂಬಾಟ್ ಫೀಚರ್ಸ್

ಪೊಕೊ ತನ್ನ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಲು ಸಜ್ಜಾಗಿದೆ. ಇತ್ತೀಚಿಗೆ ಬಿಡುಗಡೆಯಾದ ಹೊಸ ಮೊಬೈಲ್ ನಾಳೆ ಅಧಿಕೃತವಾಗಿ ಗ್ರಾಹಕರ ಕೈ ಸೇರಲಿದೆ. ಹೌದು, ಪೊಕೊ X7 5G (Poco X7 5G) ಸ್ಮಾರ್ಟ್‌ಫೋನ್‌ ನಾಳೆಯಿಂದ (ಜನವರಿ 17) ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಈ ಫೋನನ್ನು ಪೊಕೊ X7 5G (POCO X7 5G) ಸರಣಿ ಅಡಿಯಲ್ಲಿ ಲಾಂಚ್ ಮಾಡಲಾಗಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಪೊಕೊ X7 5G ಮೊಬೈಲ್‌ ಈಗಾಗಲೇ ಗ್ರಾಹಕರ ಗಮನ ಸೆಳೆದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 12GB RAM, 5110mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಫೋನ್ ಯಾವೆಲ್ಲಾ ಆಫರ್‌ಗಳೊಂದಿಗೆ ಲಭ್ಯವಿದೆ ತಿಳಿಯಲು ಮುಂದೆ ಓದಿ.

ನಾಳೆ POCO X7 ಫಸ್ಟ್‌ ಸೇಲ್; 4000 ರಿಯಾಯಿತಿ.. ಕಡಿಮೆ ಬೆಲೆ.. ಸಖತ್ ಫೀಚರ್ಸ್

ಪೊಕೊ X7 5G ಬೆಲೆ

8GB RAM + 128GB ಸ್ಟೋರೇಜ್ = 19,999 ರೂ.
8GB RAM + 256GB ಸ್ಟೋರೇಜ್ = 21,999 ರೂ.

ಪೊಕೊ X7 5G ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ 128GB ಸ್ಟೋರೇಜ್ ಬೆಲೆ 19,999 ರೂ. ಇದೆ. ಹಾಗೆಯೇ 256GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಪರಿಚಯಿಸಲಾಗಿದೆ. ನೀವು ಹಳದಿ, ಕಾಸ್ಮಿಕ್ ಸಿಲ್ವರ್ ಮತ್ತು ಗ್ಲೇಸಿಯರ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದು.

ಕಂಪನಿಯು ಮೊದಲ ಮಾರಾಟದ ಭಾಗವಾಗಿ ಹಲವು ಆಫರ್‌ಗಳನ್ನು ನೀಡುತ್ತಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್‌ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಲಭ್ಯವಿದೆ. ಜೊತೆಗೆ ಎಕ್ಸ್‌ಚೇಂಜ್ ಆಫರ್‌ ಮೇಲೆ 2,000 ಡಿಸ್ಕೌಂಟ್ ಮತ್ತು 9 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯ ನೀಡಲಾಗುತ್ತೆ. ಈ ಮೊಬೈಲ್ ನಾಳೆ (ಜನವರಿ 17) ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಗೆ ಲಭ್ಯವಿದೆ.

ಪೊಕೊ X7 5G ಫೀಚರ್ಸ್‌

ಡಿಸ್ಪ್ಲೇ ಹೇಗಿದೆ

ಪೊಕೊ X7 5G ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್‌ ರೆಸಲ್ಯೂಶನ್‌, 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.

ಪ್ರೊಸೆಸರ್ ಯಾವುದು?

ಪೊಕೊ X7 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 15 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತವೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G615 MC2 ಜಿಪಿಯು ಹೊಂದಿದೆ. ಈ ಫೋನ್ 8GB RAM ಹೊಂದಿದೆ. ಜೊತೆಗೆ 128GB ಮತ್ತು 256GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ನಾಳೆ POCO X7 ಫಸ್ಟ್‌ ಸೇಲ್; 4000 ರಿಯಾಯಿತಿ.. ಕಡಿಮೆ ಬೆಲೆ.. ಸಖತ್ ಫೀಚರ್ಸ್

ಅದ್ಭುತ ಕ್ಯಾಮೆರಾ ಸೆಟಪ್

ಪೊಕೊ X7 5G ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಇದೆ.

ಬೊಂಬಾಟ್ ಬ್ಯಾಟರಿ

ಪೊಕೊ X7 5G ಸ್ಮಾರ್ಟ್‌ಫೋನ್ 5500mAh ಸಾಮರ್ಥ್ಯ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಪೊಕೊ X7 5G ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಬ್ಲೂಟೂತ್ 5.4, ವೈ-ಫೈ 6 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
POCO X7 5G Smartphone Goes On First Sale In India Tommorrow: Check Price, Launch Offers, Specs
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+