Home
ಮೊಬೈಲ್

POCO X7: ಬಂದೇ ಬಿಡ್ತು ಶಕ್ತಿಶಾಲಿ ಫೋನ್; ಭರಪೂರ ಫೀಚರ್ಸ್.. ಕಡಿಮೆ ಬೆಲೆ.. OnePlusಗೆ ಟಕ್ಕರ್!

ಪೊಕೊ ಭಾರತದಲ್ಲಿ ಹೊಸ ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಎರಡು ಹೊಸ ಮೊಬೈಲ್‌ಗಳು ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಹೌದು, ಕಂಪನಿಯು ಪೊಕೊ X7 5G (POCO X7 5G) ಸರಣಿಯನ್ನು ಅಧಿಕೃತವಾಗಿ ರಿಲೀಸ್ ಮಾಡಿದೆ. ಇದರಲ್ಲಿ ಪೊಕೊ X7 5G (Poco X7 5G) ಮತ್ತು ಪೊಕೊ X7 ಪ್ರೊ 5G (Poco X7 Pro 5G) ಫೋನ್‌ಗಳನ್ನು ಪರಿಚಯಿಸಲಿದೆ. ಈ ಪೈಕಿ ಪೊಕೊ X7 5G ಮೊಬೈಲ್‌ ಪ್ರಿಯರ ದಿಲ್ ಕದ್ದಿದೆ. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಪೊಕೊ X7 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್‌ನ ಡೈಮೆನ್ಸಿಟಿ 7300 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8GB RAM, 5500mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಹೊಸ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಭಾರತದಲ್ಲಿ POCO X7 ಲಾಂಚ್; ಕ್ಯಾಮೆರಾ, ಬ್ಯಾಟರಿ ಸೂಪರ್.. ಕಡಿಮೆ ಬೆಲೆ!

ಪೊಕೊ X7 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಪೊಕೊ X7 5G ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್‌ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಜೊತೆಗೆ 3000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 120Hz ರಿಫ್ರೆಶ್ ದರ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಪೊಕೊ X7 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G615 MC2 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇತ್ತೀಚಿನ ಆಂಡ್ರಾಯ್ಡ್‌ 15 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತವೆ.

ಸ್ಟೋರೇಜ್‌ ಆಯ್ಕೆ

ಪೊಕೊ X7 5G ಸ್ಮಾರ್ಟ್‌ಫೋನ್ 8GB RAM ಹೊಂದಿದೆ. ಈ ಮೊಬೈಲ್ 128GB ಮತ್ತು 256GB ಸ್ಟೋರೇಜ್‌ ಆಯ್ಕೆಯನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ಪೊಕೊ X7 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಇದೆ.

ಭಾರತದಲ್ಲಿ POCO X7 ಲಾಂಚ್; ಕ್ಯಾಮೆರಾ, ಬ್ಯಾಟರಿ ಸೂಪರ್.. ಕಡಿಮೆ ಬೆಲೆ!

ಬ್ಯಾಟರಿ ಮತ್ತು ಚಾರ್ಜಿಂಗ್

ಪೊಕೊ X7 5G ಸ್ಮಾರ್ಟ್‌ಫೋನ್ 5500mAh ಸಾಮರ್ಥ್ಯ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಪೊಕೊ X7 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮಾಸ್, ಬ್ಲೂಟೂತ್ 5.4, ವೈ-ಫೈ 6 ಮತ್ತು ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಪೊಕೊ X7 5G ಬೆಲೆ

8GB RAM + 128GB ಸ್ಟೋರೇಜ್ ಬೆಲೆ = 19,999 ರೂ.
8GB RAM + 256GB ಸ್ಟೋರೇಜ್ ಬೆಲೆ = 21,999 ರೂ.

ಪೊಕೊ X7 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಬೆಲೆ 19,999 ರೂ. ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ರೂಪಾಂತರವನ್ನು 21,999 ರೂ.ಗೆ ಪರಿಚಯಿಸಲಾಗಿದೆ. ಇದು ಜನವರಿ 17 ರಿಂದ ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು ಹಳದಿ, ಕಾಸ್ಮಿಕ್ ಸಿಲ್ವರ್ ಮತ್ತು ಗ್ಲೇಸಿಯರ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದು.

ಕಂಪನಿಯು ಮೊದಲ ಮಾರಾಟದ ಭಾಗವಾಗಿ ಹಲವು ಆಫರ್‌ಗಳನ್ನು ಘೋಷಿಸಿದೆ. ನೀವು ಐಸಿಐಸಿಐ ಬ್ಯಾಂಕ್ ಕಾರ್ಡ್‌ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಪಡೆಯಬಹುದು. ಹೆಚ್ಚುವರಿಯಾಗಿ ಎಕ್ಸ್‌ಚೇಂಜ್ ಆಫರ್‌ ಮೇಲೆ 2,000 ಡಿಸ್ಕೌಂಟ್ ಲಭ್ಯವಿದೆ. ಜೊತೆಗೆ 9 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಸೌಲಭ್ಯದ ಪ್ರಯೋಜನ ಪಡೆಯಬಹುದು.

Best Mobiles in India

English summary
Poco X7 5G With MediaTek Dimensity 7300 Ultra SoC Launched in India: Check price, specifications here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+