POCO: ನಾಳೆ ಈ ರಗಡ್ ಫೋನ್ ಸೇಲ್; 3000 ರಿಯಾಯಿತಿ.. ಬೆಲೆ, ವಿಶೇಷತೆಗಳೇನು?
ಪೊಕೊ ಇತ್ತೀಚೆಗೆ ಪೊಕೊ X7 5G (POCO X7 5G) ಸರಣಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪೊಕೊ X7 5G (Poco X7 5G) ಮತ್ತು ಪೊಕೊ X7 ಪ್ರೊ 5G (Poco X7 Pro 5G) ಸ್ಮಾರ್ಟ್‌ಫೋನ್‌ಗಳು ಭಾರತೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಅಂದಹಾಗೆ, ಪೊಕೊ X7 ಪ್ರೊ 5G ನಾಳೆ (ಜನವರಿ 14) ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ X7 ಪ್ರೊ 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 12GB RAM + 256GB ಸ್ಟೋರೇಜ್, 6550mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಒಳಗೊಂಡಿದೆ. ಇದು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಭರ್ಜರಿ ರಿಯಾಯಿತಿ ನೀಡುತ್ತಿದೆ.

ಪೊಕೊ X7 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಪೊಕೊ X7 ಪ್ರೊ 5G ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್ ರೆಸಲ್ಯೂಶನ್ ಮತ್ತು 3200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಹೈಪರ್ ಓಎಸ್ 2 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 8GB ಮತ್ತು 12GB RAM ಹೊಂದಿದೆ. ಜೊತೆಗೆ 256GB ಮತ್ತು 512GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ಪೊಕೊ X7 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಇದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ.
6,550mAh ದೊಡ್ಡ ಬ್ಯಾಟರಿ
ಪೊಕೊ X7 ಪ್ರೊ 5G ಫೋನ್ 6,550mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಬ್ಲೂಟೂತ್ 6.0, ವೈ-ಫೈ 6 ಮತ್ತು ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ಪೊಕೊ X7 ಪ್ರೊ 5G ಬೆಲೆ ಮತ್ತು ಆಫರ್
ಪೊಕೊ X7 ಪ್ರೊ 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವನ್ನು 27,999 ರೂ.ಗೆ ಬಿಡುಗಡೆ ಮಾಡಲಾಗಿದೆ. 12GB RAM + 512GB ಸ್ಟೋರೇಜ್ ರೂಪಾಂತರದ ಬೆಲೆ 29,999 ರೂ. ಇದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಹಲವು ಆಫರ್‌ಗಳನ್ನು ಘೋಷಿಸಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಲಭ್ಯವಿದೆ. 2,000 ಎಕ್ಸ್‌ಚೇಂಜ್ ಬೋನಸ್ ಲಭ್ಯವಿದೆ.
ಇದಲ್ಲದೆ 12 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯ ಪಡೆಯಬಹುದು. ಮೊದಲ ದಿನ ಹೆಚ್ಚುವರಿಯಾಗಿ 1,000 ರೂ. ಕೂಪನ್ ರಿಯಾಯಿತಿ ಲಭ್ಯವಿದೆ. ರಿಯಾಯಿತಿ ಬಳಿಕ ಈ ಫೋನನ್ನು ಕ್ರಮವಾಗಿ 24,999 ರೂ. ಮತ್ತು 26,999 ರೂ.ಗೆ ಕೊಳ್ಳಬಹುದು. ಈ ಫೋನ್ ನಾಳೆ (ಜನವರಿ 14) ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಲಿದೆ. ನೀವು ಅಬ್ಸಿಡಿಯನ್ ಕಪ್ಪು, ನೆಬ್ಯುಲಾ ಗ್ರೀನ್ ಮತ್ತು ಹಳದಿ ಬಣ್ಣಗಳಲ್ಲಿ ಖರೀದಿಸಬಹುದು.


Click it and Unblock the Notifications








