Home
ಮೊಬೈಲ್

POCO X7 Pro: ಧೂಳೆಬ್ಬಿಸಲು ಬಂತು ರಗಡ್ ಫೋನ್; 6650mAh ಬ್ಯಾಟರಿ.. 50MP ಕ್ಯಾಮೆರಾ.. 3000 ಡಿಸ್ಕೌಂಟ್!

ಪೊಕೊ ಭಾರತದಲ್ಲಿ ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ಪೊಕೊ X7 5G (POCO X7 5G) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ನೂತನ ಪೊಕೊ X7 5G (Poco X7 5G) ಮತ್ತು ಪೊಕೊ X7 ಪ್ರೊ 5G (Poco X7 Pro 5G) ಸ್ಮಾರ್ಟ್‌ಫೋನ್‌ಗಳು ಅಧಿಕೃತವಾಗಿ ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ಪೊಕೊ X7 ಪ್ರೊ 5G ಮೊಬೈಲ್ ಗ್ರಾಹಕರನ್ನು ಆಕರ್ಷಿಸುವಲ್ಲಿ ಸೈ ಎನಿಸಿಕೊಂಡಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಜೊತೆಗೆ 12GB RAM + 256GB ಸ್ಟೋರೇಜ್, 6550mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಆಫರ್‌ ಬೆಲೆ ತಿಳಿಯಲು ಮುಂದೆ ಓದಿ.

ಹೊಸ POCO X7 Pro ಲಾಂಚ್; 6650mAh ಬ್ಯಾಟರಿ, 50MP ಕ್ಯಾಮೆರಾ.. 3000 ಆಫರ್!

ಪೊಕೊ X7 ಪ್ರೊ 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್‌ 6.67 ಇಂಚಿನ 1.5K ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್‌ ರೆಸಲ್ಯೂಶನ್, 3200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಪೊಕೊ X7 ಪ್ರೊ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಮಾಲಿ G720 MC6 ಜಿಪಿಯು ಸಹ ಹೊಂದಿದೆ. ಈ ಫೋನ್ ಆಂಡ್ರಾಯ್ಡ್‌ 15 ಆಧಾರಿತ ಹೈಪರ್ ಓಎಸ್‌ 2 ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್‌ ಆಯ್ಕೆ

ಪೊಕೊ X7 ಪ್ರೊ 5G ಫೋನ್‌ 8GB ಮತ್ತು 12GB RAM ಹೊಂದಿದೆ. ಈ ಫೋನಿನಲ್ಲಿ 256GB ಮತ್ತು 512GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಸೆಟಪ್

ಪೊಕೊ X7 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 20 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಪೊಕೊ X7 ಪ್ರೊ 5G ಮೊಬೈಲ್ 6,550mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು 45 ನಿಮಿಷಗಳಲ್ಲಿ 100% ಚಾರ್ಜ್ ಆಗುತ್ತದೆ.

ಹೊಸ POCO X7 Pro ಲಾಂಚ್; 6650mAh ಬ್ಯಾಟರಿ, 50MP ಕ್ಯಾಮೆರಾ.. 3000 ಆಫರ್!

ಇತರೆ ವೈಶಿಷ್ಟ್ಯಗಳು

ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 + IP68 + IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಬ್ಲೂಟೂತ್ 6.0, ವೈ-ಫೈ 6 ಮತ್ತು ಜಿಪಿಎಸ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ಪೊಕೊ X7 ಪ್ರೊ 5G ಬೆಲೆ

8GB RAM + 256GB ಸ್ಟೋರೇಜ್ ಬೆಲೆ = 27,999 ರೂ.
12GB RAM + 512GB ಸ್ಟೋರೇಜ್ ಬೆಲೆ = 29,999 ರೂ.

ಪೊಕೊ X7 ಪ್ರೊ 5G ಫೋನನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆ ಮಾಡಲಾಗಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ಬೆಲೆ 27,999 ರೂ. ಆಗಿದೆ. ಹಾಗೆಯೇ 12GB RAM + 512GB ಸ್ಟೋರೇಜ್ ರೂಪಾಂತರವನ್ನು 29,999 ರೂ.ಗೆ ಪರಿಚಯಿಸಲಾಗಿದೆ. ಇದು ಜನವರಿ 14 ರಿಂದ ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು ಅಬ್ಸಿಡಿಯನ್ ಕಪ್ಪು, ನೆಬ್ಯುಲಾ ಗ್ರೀನ್ ಮತ್ತು ಹಳದಿ ಬಣ್ಣಗಳಲ್ಲಿ ಖರೀದಿಸಬಹುದು.

ಕಂಪನಿಯು ಮೊದಲ ಮಾರಾಟದ ಭಾಗವಾಗಿ ಹಲವು ಆಫರ್‌ಗಳನ್ನು ಘೋಷಿಸಿದೆ. ನೀವು ಐಸಿಐಸಿಐ ಬ್ಯಾಂಕ್ ಕಾರ್ಡ್‌ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಪಡೆಯಬಹುದು. ಅಥವಾ 2,000 ಎಕ್ಸ್‌ಚೇಂಜ್ ಬೋನಸ್ ಲಭ್ಯವಿದೆ. ಅಲ್ಲದೆ 12 ತಿಂಗಳ ನೋ ಕಾಸ್ಟ್ ಇಎಂಐ ಆಯ್ಕೆಯ ಪ್ರಯೋಜನ ಪಡೆಯಬಹುದು. ಮೊದಲ ದಿನ ಹೆಚ್ಚುವರಿಯಾಗಿ 1,000 ರೂ. ಕೂಪನ್ ರಿಯಾಯಿತಿ ಲಭ್ಯವಿದೆ. ಡಿಸ್ಕೌಂಟ್ ಬಳಿಕ ಈ ಫೋನನ್ನು ಕ್ರಮವಾಗಿ 24,999 ರೂ. ಮತ್ತು 26,999 ರೂ.ಗೆ ಖರೀದಿಸಬಹುದು.

Best Mobiles in India

English summary
Poco X7 Pro With MediaTek Dimensity 8400 Ultra SoC Launched in India: Check price, specifications here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+