Home
ಮೊಬೈಲ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A ಸರಣಿಯ ಜನಪ್ರಿಯ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪನಿಯು ಭಿನ್ನ ಶ್ರೇಣಿಯ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಸಂಸ್ಥೆಯ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್‌ಫೊನ್‌ಗಳು ಹೆಚ್ಚಿನ ಡಿಮ್ಯಾಂಡ್‌ ಪಡೆದಿದ್ದು, ಅತ್ಯುತ್ತಮ ಡಿಸೈನ್‌ ಹಾಗೂ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಸಂಸ್ಥೆಯ ಕೆಲವು ಫೋನ್‌ಗಳಂತೂ ಸಿಕ್ಕಾಪಟ್ಟೆ ಸದ್ದು ಮಾಡಿವೆ. ಅವುಗಳ ಪೈಕಿ ಗ್ಯಾಲಕ್ಸಿ A ಸರಣಿಯ ಇತ್ತೀಚಿನ ಮೊಬೈಲ್‌ಗಳು ಕೂಡಾ ಸೇರಿವೆ.

ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A ಸರಣಿಯಲ್ಲಿನ ಕೆಲವು ಮೊಬೈಲ್‌ಗಳು ಕ್ಯಾಮೆರಾ ಆಯ್ಕೆ, ಬ್ಯಾಟರಿ ಹಾಗೂ ಡಿಸೈನ್‌ನಿಂದಾಗಿ ಆಕರ್ಷಕ ಎನಿಸಿವೆ. ಈ ಸರಣಿಗೆ ಗ್ಯಾಲಕ್ಸಿ A55 ಹಾಗೂ ಗ್ಯಾಲಕ್ಸಿ A35 ಇತ್ತೀಚಿನ ಸೇರ್ಪಡೆ ಆಗಿವೆ. ಅವುಗಳು ಅಲ್ಲದೇ ಬಜೆಟ್‌ ಬೆಲೆಯಲ್ಲಿಯೂ ಗ್ರಾಹಕರಿಗೆ ಗ್ಯಾಲಕ್ಸಿ A ಸರಣಿಯ ಫೋನ್‌ ಲಭ್ಯ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A ಸರಣಿಯನ ಕೆಲವು ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A ಸರಣಿಯ ಜನಪ್ರಿಯ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A15 5G ಮೊಬೈಲ್‌

ಸ್ಯಾಮ್‌ಸಂಗ್‌ ಸಂಸ್ಥೆಯ ಈ ಮೊಬೈಲ್‌ 6.5 ಇಂಚಿನ S-AMOLED ಇನ್ಫಿನಿಟಿ-U ನಾಚ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಪವರ್‌ನಲ್ಲಿ ಕೆಲವ ನಿರ್ವಹಿಸಲಿದ್ದು, ಆಂಡ್ರಾಯ್ಡ್‌ 14 ಓಎಸ್‌ ಇದೆ.

ಅಂದಹಾಗೆ ಈ ಮೊಬೈಲ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A34 5G ಮೊಬೈಲ್‌

ಗ್ಯಾಲಕ್ಸಿ A34 5G 1080 × 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇಯನ್ನು ಪಡೆದುಕೊಂಡಿದೆ. ಇದು ತ್ರಿವಳಿ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A35 5G ಮೊಬೈಲ್‌

ಗ್ಯಾಲಕ್ಸಿ A35 5G ಫೋನ್‌ 1080 × 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಜೊತೆಗೆ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಸ್ಯಾಮ್‌ಸಂಗ್‌ ಫೋನ್‌ Exynos 1380 ಚಿಪ್‌ಸೆಟ್‌ ಪ್ರೊಸೆಸರ್ ಅನ್ನು ಪಡೆದಿದ್ದು, ಜೊತೆಗೆ ಮಾಲಿ G68 GPU ಹಾಗೂ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್ ಅನ್ನು ಪಡೆದಿದೆ.

ಅಲ್ಲದೇ ಈ ಮೊಬೈಲ್‌ ಮೊಬೈಲ್‌ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಮುಂಭಾಗದ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿ ಇದೆ. ಇದರ ಜೊತೆಗೆ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A55 5G ಮೊಬೈಲ್‌

ಗ್ಯಾಲಕ್ಸಿ A55 5G ಮೊಬೈಲ್‌ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೊಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಹಾಗೆಯೇ ಇದು ಎಕ್ಸಿನೋಸ್ 1480 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ AMD Xclipse 530 GPU ಸಪೋರ್ಟ್‌ ಹಾಗೂ ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ ಕಾಣಬಹುದಾಗಿದೆ.

ಅಲ್ಲದೇ ಈ ಫೋನ್ ತ್ರಿವಳಿ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದ್ದು, ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದರೊಂದಿಗೆ ಈ ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ.

Best Mobiles in India

English summary
Popular Samsung Galaxy A series phones june 2024. check phones list here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+