ಕ್ವಿಕ್ ಆಗಿ ಚಾರ್ಜ್ ಆಗುವ ಕೆಲವು ಅತ್ಯುತ್ತಮ ಫೋನ್‌ಗಳ ಲಿಸ್ಟ್ ಇಲ್ಲಿದೆ ನೋಡಿ!
ಸದ್ಯ ಸ್ಮಾರ್ಟ್‌ಫೋನ್ ಎಲ್ಲರಿಗೂ ಅವಶ್ಯ ಹಾಗೂ ಅನಿವಾರ್ಯ ಡಿವೈಸ್ ಎನ್ನುವಂತೆ ಆಗಿದೆ. ಇನ್ನು ದುಬಾರಿ ಬೆಲೆಯ ಫೋನ್‌ಗಳಲ್ಲಿ ಕಾಣಬಹುದಾಗಿದ್ದ ಕ್ವಿಕ್/ ವೇಗದ (Fast charging) ಚಾರ್ಜಿಂಗ್ ಸೌಲಭ್ಯ ಇತ್ತೀಚಿಗೆ ಬಜೆಟ್ ಹಾಗೂ ಮೀಡ್‌ರೇಂಜ್ ದರದ ಕೆಲವು ಫೋನ್‌ಗಳಲ್ಲಿಯೂ ಸಾಮಾನ್ಯ ಎನ್ನುವಂತೆ ಆಗಿದೆ. ಅಲ್ಲದೇ ಮೊಬೈಲ್ ಖರೀದಿಸುವಾಗ ಗ್ರಾಹಕರು ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಇರುವ ಫೋನ್‌ಗಳನ್ನು ಆಯ್ಕೆ ಮಾಡುತ್ತಾರೆ. ಇನ್ನು ಬಿಗ್ ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜಿಂಗ್ ಸೌಲಭ್ಯ ಪಡೆದಿರುವ ಫೋನ್‌ಗಳಿಗೆ ಬೇಡಿಕೆ ಹೆಚ್ಚು.
ಹೌದು, ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಪಡೆದಿರುವ ಮೊಬೈಲ್‌ಗಳ ಜೊತೆಗೆ ಕ್ವಿಕ್/ ವೇಗದ (Fast charging) ಸೌಲಭ್ಯದ ಮೊಬೈಲ್‌ಗಳು ಗ್ರಾಹಕ ಆಯ್ಕೆಯ ಲಿಸ್ಟ್‌ನಲ್ಲಿ ಮೊದಲಾಗಿರುತ್ತವೆ. ಹೀಗಾಗಿ ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳು ಸಹ ಮೀಡ್‌ರೇಂಜ್ ವಿಭಾಗದಲ್ಲಿ ವಗದ ಚಾರ್ಜಿಂಗ್ ಸೌಲಭ್ಯ ಒದಗಿಸುತ್ತಿವೆ. ಹಾಗಾದರೇ ಸುಮಾರು 30,000ರೂ. ಒಳಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಕೆಲವು ಅತ್ಯುತ್ತಮ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಒನ್‌ಪ್ಲಸ್ ನಾರ್ಡ್ 4 ಮೊಬೈಲ್
ಒನ್‌ಪ್ಲಸ್ ನಾರ್ಡ್ 4 ಮೊಬೈಲ್ 5,500mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಇದರೊಂದಿಗೆ 100W ವೈಯರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಪಡೆದಿದೆ. ಅಲ್ಲದೇ ಈ ಮೊಬೈಲ್ 6.74 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1240 x 2772 ಪಿಕ್ಸೆಲ್ ರೆಸಲ್ಯೂಶನ್ ಅನ್ನು ಒಳಗೊಂಡಿದೆ.
ಹಾಗೆಯೇ ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಆಧಾರಿತ OxygenOS 14 ನಲ್ಲಿ ಕೆಲಸ ನಿರ್ವಹಿಸಲಿದೆ. ಇದರೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.
ಮೊಟೊರೊಲಾ ಎಡ್ಜ್ 50 ಮೊಬೈಲ್
ಮೊಟೊರೊಲಾ ಎಡ್ಜ್ 50 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ ಈ ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ.
ಇದರೊಂದಿಗೆ ಈ ಫೋನ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ.
ಪೊಕೊ F6 ಮೊಬೈಲ್
ಪೊಕೊ F6 ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 90W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ನೀಡಲಿದೆ. ಹಾಗೆಯೇ ಈ ಫೋನ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಡಿಸ್‌ಪ್ಲೇಯು 2712 x 1220 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದುಕೊಂಡಿದೆ.
ಇದರೊಂದಿಗೆ ಈ ಫೋನ್ ಸ್ನಾಪ್‌ಡ್ರಾಗನ್ 8s ಜನ್ 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 OS ಸಪೋರ್ಟ್ ಸಹ ಇದೆ. ಇದರ ಜೊತೆಗೆ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಕ್ಯಾಮೆರಾ ಸಾಮರ್ಥ್ಯದಲ್ಲಿ ಇದೆ.


Click it and Unblock the Notifications







