ಹೊಸ Realme ಫೋನ್ ಲಾಂಚ್; 6000mAh ಬ್ಯಾಟರಿ.. 512GB ಸ್ಟೋರೇಜ್.. 3000 ರಿಯಾಯಿತಿ; ಬೆಲೆ ಎಷ್ಟು?
ರಿಯಲ್‌ಮಿ ಸದ್ದಿಲ್ಲದೆ ಮತ್ತೊಂದು ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ಕಂಪನಿಯು ವರ್ಷದ ಪ್ರಾರಂಭದಲ್ಲೇ ತನ್ನ ರಿಯಲ್‌ಮಿ 14 ಪ್ರೊ ಸರಣಿಯನ್ನು ಪರಿಚಯಿಸಿತ್ತು. ಇದರ ಅಡಿಯಲ್ಲಿ ರಿಯಲ್‌ಮಿ 14 ಪ್ರೊ+ 5G (realme 14 Pro+ 5G) ಫೋನನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಮೊಬೈಲ್ ಅನ್ನು 8GB RAM ಮತ್ತು 12GB RAM + 256GB ಸ್ಟೋರೇಜ್‌ನೊಂದಿಗೆ ಬಿಡುಗಡೆ ಮಾಡಲಾಗಿತ್ತು. ಆದರೆ, ಈಗ ಕಂಪನಿಯು ತನ್ನ 12GB + 512GB ಸ್ಟೋರೇಜ್ ರೂಪಾಂತರವನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ಆಫರ್ ತಿಳಿಯಲು ಮುಂದೆ ಓದಿ.
ನೀವು ಇನ್ಮುಂದೆ ರಿಯಲ್‌ಮಿ 14 ಪ್ರೊ+ 5G ಫೋನನ್ನು ನಾಲ್ಕು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 6.83 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ. ಜೊತೆಗೆ 6000mAh ಬ್ಯಾಟರಿ ಮತ್ತು 80W ಸೂಪರ್‌ವೂಕ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನುಒಳಗೊಂಡಿದೆ.

ರಿಯಲ್‌ಮಿ 14 ಪ್ರೊ+ 5G ಬೆಲೆ
- 8GB RAM + 128GB ಸ್ಟೋರೇಜ್ ಬೆಲೆ = 29,999
- 8GB RAM + 256GB ಸ್ಟೋರೇಜ್ ಬೆಲೆ = 31,999
- 12GB RAM + 256GB ಸ್ಟೋರೇಜ್ ಬೆಲೆ = 34,999
- 12GB RAM + 512GB ಸ್ಟೋರೇಜ್ ಬೆಲೆ = 37,999
ರಿಯಲ್‌ಮಿ 14 ಪ್ರೊ+ 5G ಫೋನಿನ ಹೊಸ ರೂಪಾಂತರವು 12GB RAM + 512GB ಸ್ಟೋರೇಜ್ ಹೊಂದಿದೆ. ಇದನ್ನು 37,999 ರೂ. ಬೆಲೆಗೆ ಬಿಡುಗಡೆ ಮಾಡಲಾಗಿದೆ. ಕಂಪನಿಯು ಆರಂಭಿಕ ಮಾರಾಟದ ಪ್ರಯುಕ್ತ 3,000 ರೂ.ಗಳ ಬ್ಯಾಂಕ್ ಡಿಸ್ಕೌಂಟ್ ನೀಡಲಿದೆ. ಇದರೊಂದಿಗೆ ಈ ಫೋನ್ 34,999 ರೂ.ಗೆ ಮಾರಾಟವಾಗಲಿದೆ. ಇದೇ ಮಾರ್ಚ್ 6 ರಿಂದ ರಿಯಲ್‌ಮಿ 14 ಪ್ರೊ+ 5G ಫೋನಿನ ಹೊಸ ರೂಪಾಂತರವು ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಇದನ್ನು ಪರ್ಲ್ ವೈಟ್ ಮತ್ತು ಸ್ಯೂಡ್ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು.
ರಿಯಲ್‌ಮಿ 14 ಪ್ರೊ+ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ 14 ಪ್ರೊ+ 5G ಮೊಬೈಲ್ 6.83 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಕ್ವಾಡ್ ಕರ್ವ್ಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2800 X 1272 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 1500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ರಕ್ಷಣೆಯನ್ನು ಸಹ ಪಡೆದಿದೆ.
ಕ್ವಾಲ್ಕಾಮ್ ಪ್ರೊಸೆಸರ್
ರಿಯಲ್‌ಮಿ 14 ಪ್ರೊ+ 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6 ಓಎಸ್ ಜೊತೆಗೆ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ, ಇದು ಅಡ್ರಿನೊ 810 ಜಿಪಿಯು ಸಹ ಹೊಂದಿದೆ. ಈ ಫೋನ್ 12GB RAM + 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ 14 ಪ್ರೊ+ 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ 14 ಪ್ರೊ+ 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಕೇವಲ 45 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ರಷ್ಟು ಚಾರ್ಜ್ ಆಗುತ್ತದೆ. ಈ ಸ್ಮಾರ್ಟ್‌ಫೋನ್ ಸ್ಟೀರಿಯೋ ಸ್ಪೀಕರ್‌ಗಳು, ಹೈ ರೆಸ್ ಆಡಿಯೋ, ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP66 ರೇಟಿಂಗ್ ಹೊಂದಿದೆ.


Click it and Unblock the Notifications








