ಮಾರುಕಟ್ಟೆಗೆ ಅಪ್ಪಳಿಸಿತು Realme 14 Pro 5G ಫೋನ್; 6000mAh ಬ್ಯಾಟರಿ.. ಸೋನಿ ಕ್ಯಾಮೆರಾ.. ಕಡಿಮೆ ಬೆಲೆ!
ಬಹುನಿರೀಕ್ಷಿತ ರಿಯಲ್‌ಮಿ 14 ಪ್ರೊ 5G (Realme 14 Pro 5G) ಮೊಬೈಲ್ ಭಾರತದಲ್ಲಿ ಬಿಡುಗಡೆಯಾಗಿದೆ. ಇದನ್ನು ರಿಯಲ್‌ಮಿ 14 ಪ್ರೊ (Realme 14 Pro Series) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ಈ ಸರಣಿಯಲ್ಲಿ ರಿಯಲ್‌ಮಿ 14 ಪ್ರೊ 5G ಮತ್ತು ರಿಯಲ್‌ಮಿ 14 ಪ್ರೊ+ 5G ಫೋನ್‌ಗಳು ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿವೆ. ಈ ಪೈಕಿ ರಿಯಲ್‌ಮಿ 14 ಪ್ರೊ ಮಾರುಕಟ್ಟೆಯಲ್ಲಿ ಲಭ್ಯವಿರುವ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ತೀವ್ರ ಪೈಪೋಟಿ ನೀಡಲಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ 14 ಪ್ರೊ 5G ಫೋನ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.77 ಇಂಚಿನ ಬಾಗಿದ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 8GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ರಿಯಲ್‌ಮಿ 14 ಪ್ರೊ 5G ಬೆಲೆ ಮತ್ತು ಲಭ್ಯತೆ
8GB RAM + 128GB ಸ್ಠೋರೇಜ್ = 22,999 ರೂ.
8GB RAM + 25GB ಸ್ಟೋರೇಜ್ = 24,999 ರೂ.
ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. 8GB RAM + 128GB ಸ್ಠೋರೇಜ್ ಬೆಲೆ 22,999 ರೂ. ಮತ್ತು 8GB RAM + 25GB ಸ್ಟೋರೇಜ್ ಬೆಲೆ 24,999 ರೂ. ಇದೆ. ಈ ಮೊಬೈಲ್ ಜನವರಿ 23 ರಂದು ಮಧ್ಯಾಹ್ನ 12 ಗಂಟೆಗೆ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು, ಕಂಪನಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದು.
ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಹಲವು ಆಫರ್‌ಗಳನ್ನು ನೀಡುತ್ತಿದೆ. ನೀವು 2000 ರೂ. ಬ್ಯಾಂಕ್ ಆಫರ್, 1000 ರೂ. ಎಕ್ಸ್‌ಚೇಂಜ್ ಬೋನಸ್ ಮತ್ತು 12 ತಿಂಗಳ ನೋ ಕಾಸ್ಟ್ ಇಎಂಐ ಸೌಲಭ್ಯ ಲಾಭ ಪಡೆಯಬಹುದು. ಈ ಫೋನ್ ಪರ್ಲ್ ವೈಟ್, ಪಿಂಕ್ ಮತ್ತು ಸ್ಯೂಡ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ರಿಯಲ್‌ಮಿ 14 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ 14 ಪ್ರೊ 5G ಮೊಬೈಲ್ 6.77 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಬಾಗಿದ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 412×1080 ಪಿಕ್ಸೆಲ್ ರೆಸಲ್ಯೂಶನ್, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G615 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ರಿಯಲ್‌ಮಿ 14 ಪ್ರೊ 5G ಫೋನ್ 12GB RAM ಹೊಂದಿದೆ. ಜೊತೆಗೆ 14GB ವರ್ಚುವಲ್ RAM ಬೆಂಬಲ ಸಹ ಹೊಂದಿದೆ. ಈ ಫೋನಿನಲ್ಲಿ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ 14 ಪ್ರೊ 5G ಫೋನಿನಲ್ಲಿ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ 14 ಪ್ರೊ 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್ 45W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP66+IP68+IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ 5.2 ಮತ್ತು ಯುಎಸ್‌ಬಿ ಟೈಪ್ ಸಿ, ಸ್ಟಿರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








