Home
ಮೊಬೈಲ್

4000 ಡಿಸ್ಕೌಂಟ್! 6000mAh ಬ್ಯಾಟರಿ.. 256GB ಸ್ಟೋರೇಜ್‌.. ಅದೂ ಹೊಸ Realme ಫೋನ್

ಬಹುನಿರೀಕ್ಷಿತ ರಿಯಲ್‌ಮಿ 14 ಪ್ರೊ (Realme 14 Pro Series) ಸರಣಿಯು ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸರಣಿಯಲ್ಲಿ ಎರಡು ಹೊಸ ಮೊಬೈಲ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಅವುಗಳೇ ರಿಯಲ್‌ಮಿ 14 ಪ್ರೊ (Realme 14 Pro) ಮತ್ತು ರಿಯಲ್‌ಮಿ 14 ಪ್ರೊ+ (Realme 14 Pro+) ಸ್ಮಾರ್ಟ್‌ಫೋನ್‌. ಅಂದಹಾಗೆ, ರಿಯಲ್‌ಮಿ 14 ಪ್ರೊ+ ಮೊಬೈಲ್ ಜನವರಿ 23 ರಂದು ತನ್ನ ಮೊದಲ ಮಾರಾಟ ಶುರು ಮಾಡಲಿದೆ. ಬನ್ನಿ, ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.

ರಿಯಲ್‌ಮಿ 14 ಪ್ರೊ+ 50 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.83 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 12GB + 512GB ಸ್ಟೋರೇಜ್‌, 6000mAh ಬ್ಯಾಟರಿ ಮತ್ತು 100W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನುಒಳಗೊಂಡಿದೆ. ಈ ಫೋನಿನ ಆಫರ್‌ ತಿಳಿಯಲು ಮುಂದೆ ಓದಿ.

4000 ಡಿಸ್ಕೌಂಟ್! 6000mAh ಬ್ಯಾಟರಿ.. 256GB ಸ್ಟೋರೇಜ್‌.. ಯಾವ ಫೋನ್?

ರಿಯಲ್‌ಮಿ 14 ಪ್ರೊ+ ಬೆಲೆ

8GB + 128GB ಸ್ಟೋರೇಜ್‌ = 29,999 ರೂ.
ಆಫರ್ ಬೆಲೆ = 27,999 ರೂ.

8GB + 256GB ಸ್ಟೋರೇಜ್‌ = 31,999 ರೂ.
ಆಫರ್ ಬೆಲೆ = 29,999 ರೂ.

12GB + 256GB ಸ್ಟೋರೇಜ್‌ = 34,999 ರೂ.
ಆಫರ್ ಬೆಲೆ = 30,999 ರೂ.

ರಿಯಲ್‌ಮಿ 14 ಪ್ರೊ+ ಫೋನಿನ 8GB + 128GB ಸ್ಟೋರೇಜ್‌ ರೂಪಾಂತರವನ್ನು 29,999 ರೂ.ಗೆ ಬಿಡುಗಡೆ ಮಾಡಲಾಗಿದೆ. ನೀವು ರಿಯಾಯಿತಿಯೊಂದಿಗೆ 27,999 ರೂ.ಗೆ ಖರೀದಿಸಬಹುದು. ಕಂಪನಿಯು 4,000 ರೂ. ಬ್ಯಾಂಕ್ ಆಫರ್‌ ಘೋಷಿಸಿದೆ. ನೀವು, ಕಂಪನಿಯ ಅಧಿಕೃತ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದು. ಇದು ಪಿಂಕ್, ಪರ್ಲ್ ವೈಟ್ ಮತ್ತು ಸ್ಯೂಡ್ ಗ್ರೇ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. ಜನವರಿ 23 ರಂದು ಮಧ್ಯಾಹ್ನ 12 ಗಂಟೆಗೆ ಈ ಫೋನ್ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.

ರಿಯಲ್‌ಮಿ 14 ಪ್ರೊ+ ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್

ರಿಯಲ್‌ಮಿ 14 ಪ್ರೊ+ ಸ್ಮಾರ್ಟ್‌ಫೋನ್ 6.83 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್‌ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2800 X 1272 ಪಿಕ್ಸೆಲ್‌ಗಳ ರೆಸಲ್ಯೂಶನ್‌ ಮತ್ತು 120Hz ರಿಫ್ರೆಶ್ ದರ ಬೆಂಬಲ ಹೊಂದಿದೆ. ಈ ಮೊಬೈಲ್ ಅನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, 900MHz ಅಡ್ರಿನೊ ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಂಡ್ರಾಯ್ಡ್‌ 15 ಆಧಾರಿತ ರಿಯಲ್‌ಮಿ ಯುಐ 6 ಓಎಸ್‌ ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಕ್ಯಾಮೆರಾ ಮತ್ತು ಸ್ಟೋರೇಜ್

ರಿಯಲ್‌ಮಿ 14 ಪ್ರೊ+ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ಫೋನ್‌ 12GB RAM ಹೊಂದಿದೆ. ಇದರಲ್ಲಿ 256GB ಮತ್ತು 512GB ಸ್ಟೋರೇಜ್ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ 14 ಪ್ರೊ+ ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ, ಸ್ಟೀರಿಯೋ ಸ್ಪೀಕರ್‌ಗಳು, ಹೈ ರೆಸ್ ಆಡಿಯೋ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69, IP68 ಮತ್ತು IP66 ರೇಟಿಂಗ್‌ಗಳನ್ನು ಸಹ ಹೊಂದಿದೆ.

Best Mobiles in India

English summary
Realme 14 Pro+ with 50MP Camera Goes on First Sale in India january 23: check price, specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+