Home
ಮೊಬೈಲ್

Realme: 50+50+32MP ಕ್ಯಾಮೆರಾ.. 6000mAh ಬ್ಯಾಟರಿ.. ಬಜೆಟ್ ಬೆಲೆ; ಯಾವ ಫೋನ್?

ರಿಯಲ್‌ಮಿ ಸದ್ದಿಲ್ಲದೆ ಹೊಸ ಫೋನನ್ನು ಬಿಡುಗಡೆ ಮಡಿದೆ. ಇದನ್ನು ರಿಯಲ್‌ಮಿ 14 ಪ್ರೊ (Realme 14 Pro) ಸರಣಿಯಲ್ಲಿ ಪರಿಚಯಿಸಲಾಗಿದೆ. ಹೌದು, ರಿಯಲ್‌ಮಿ 14 ಪ್ರೊ+ (Realme 14 Pro+) ಸ್ಮಾರ್ಟ್‌ಫೋನ್ ಅಧಿಕೃತವಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸ್ ಹೊಂದಿದೆ. ಹಾಗೆಯೇ IP69 ರೇಟಿಂಗ್, 12GB RAM ಸಹ ಒಳಗೊಂಡಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ಇನ್ನಿತರ ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ ಹೊಸ ರಿಯಲ್‌ಮಿ 14 ಪ್ರೊ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಜನವರಿ 16 ರಂದು ಭಾರತದಲ್ಲಿ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಇದರಲ್ಲಿ ರಿಯಲ್‌ಮಿ 14 (Realme 14) ಮತ್ತು ರಿಯಲ್‌ಮಿ 14 ಪ್ರೊ (Realme 14 Pro+) ಫೋನ್‌ಗಳು ಮಾರುಕಟ್ಟರಗೆ ಬರಲಿವೆ. ಇದಕ್ಕೂ ಮೊದಲು, ಕಂಪನಿ ರಿಯಲ್‌ಮಿ 14 ಪ್ರೊ+ ಅನ್ನು ತನ್ನ ತವರು ಮಾರುಕಟ್ಟೆಯಲ್ಲಿ ರಿಲೀಸ್ ಮಾಡಿದೆ. ಇದನ್ನು ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಪರಿಚಯಿಸಲಾಗಿದೆ.

Realme: 50+50+32MP ಕ್ಯಾಮೆರಾ.. 6000mAh ಬ್ಯಾಟರಿ.. ಬಜೆಟ್ ಬೆಲೆ; ಯಾವ ಫೋನ್?

ರಿಯಲ್‌ಮಿ 14 Pro+ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ 14 ಪ್ರೊ+ ಫೋನ್ 6.83 ಇಂಚಿನ ಬಾಗಿದ ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 1.5K ರೆಸಲ್ಯೂಶನ್, 1500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ.

ಪ್ರೊಸೆಸರ್ ಸಾಮರ್ಥ್ಯ

ರಿಯಲ್‌ಮಿ 14 ಪ್ರೊ ಪ್ಲಸ್ ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ರಿಯಲ್‌ಮಿ 14 ಪ್ರೊ+ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಲ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.

Realme: 50+50+32MP ಕ್ಯಾಮೆರಾ.. 6000mAh ಬ್ಯಾಟರಿ.. ಬಜೆಟ್ ಬೆಲೆ; ಯಾವ ಫೋನ್?

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ 14 ಪ್ರೊ+ ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಕೇವಲ 24 ನಿಮಿಷಗಳಲ್ಲಿ ಶೇ.50 ರಷ್ಟು ಚಾರ್ಜ್ ಆಗುತ್ತದೆ.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ 14 ಪ್ರೊ+ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಡ್ಯುಯಲ್ ಫ್ರೀಕ್ವೆನ್ಸಿ ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ 14 ಪ್ರೊ+ ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 14 ಪ್ರೊ+ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಈ ಫೋನಿನ 12GB + 256GB ಸ್ಟೋರೇಜ್ ವೇರಿಯಂಟ್ ಬೆಲೆ 30,300 ರೂ. ಆಗಿದೆ. ಹಾಗೆಯೇ 12GB + 512GB ಸ್ಟೋರೇಜ್ ರೂಪಾಂತರವನ್ನು 32,700 ರೂ.ಗೆ ಪರಿಚಯಿಸಲಾಗಿದೆ. ಇದು ಗ್ರೇ ಮತ್ತು ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಪ್ರಸ್ತುತ, ಚೀನಾದಲ್ಲಿ ಈ ಫೋನನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಮಾರಾಟ ಮಾಡಲಾಗುತ್ತಿದೆ.

Best Mobiles in India

English summary
Realme 14 Pro+ with Snapdragon 7s Gen 3, 6000mAh battery launched: Check price, specifications here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+