ಎದುರಾಳಿಗಳಿಗೆ ನಡುಕ! Realme 14x 5G ಹೊಸ ವೇರಿಯೆಂಟ್ ಲಾಂಚ್.. ಜಬರ್ದಸ್ತ್ ಫೀಚರ್ಸ್.. ಕಡಿಮೆ ಬೆಲೆ!
ರಿಯಲ್‌ಮಿ ಭಾರತದಲ್ಲಿ ಕಡಿಮೆ ಬಜೆಟ್‌ನ 5G ಫೋನನ್ನು ಬಿಡುಗಡೆ ಮಾಡಿದೆ. ಇದುವೇ ರಿಯಲ್‌ಮಿ 14x 5G (Realme 14x 5G) ಸ್ಮಾರ್ಟ್‌ಫೋನ್. ಇದನ್ನು 14,999 ರೂ.ಗಳ ಆರಂಭಿಕ ಬೆಲೆಗೆ ಪರಿಚಯಿಸಿದೆ. ಹೌದು, ಈ ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಇದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ, 128GB ಸ್ಟೋರೇಜ್ ಮತ್ತು 45W ವೇಗದ ಚಾರ್ಜಿಂಗ್ ಒಳಗೊಂಡಿದೆ. ಕಂಪನಿಯು ಇದೀಗ, 256GB ಸ್ಟೋರೇಜ್ ರೂಪಾಂತರವನ್ನು ಲಾಂಚ್ ಮಾಡಿದೆ.
ಹೌದು, ರಿಯಲ್‌ಮಿ 14x 5G ಫೋನಿನ 256GB ಸ್ಟೋರೇಜ್ ರೂಪಾಂತರವನ್ನು ಜಾಗತಿಕವಾಗಿ ಬಿಡುಗಡೆ ಮಾಡಲಾಗಿದೆ. ಕಂಪನಿಯು ಇದನ್ನು ರಿಯಲ್‌ಮಿ 14 ಸರಣಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಿದೆ. ನೀವು 15,000 ರೂ.ಗಳ ಬಜೆಟ್‌ನಲ್ಲಿ ಹೊಸ ಮೊಬೈಲ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್ ತನ್ನ ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಈಗಾಗಲೇ ಮೊಬೈಲ್ ಪ್ರಿಯರನ್ನು ಆಕರ್ಷಿಸುತ್ತಿದೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ರಿಯಲ್‌ಮಿ 14x 5G ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ 14x 5G ಫೋನ್ ಭಾರತದಲ್ಲಿ 6GB + 128GB ಸ್ಟೋರೇಜ್, 8GB + 128GB ಸ್ಟೋರೇಜ್ ಆಯ್ಕೆಗಳಲ್ಲಿ ಬಿಡುಡಗೆಯಾಗಿತ್ತು. ಪ್ರಸ್ತುತ, 8GB RAM + 256GB ಸ್ಟೋರೇಜ್ ರೂಪಾಂತರವನ್ನು ಜಾಗತಿಕ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಇದರ ಬೆಲೆ 22,250 ರೂ. ಆಗಿದೆ. ಈ ಫೋನಿನ 128GB ಸ್ಟೋರೇಜ್ ಬೆಲೆ 14,999 ರೂ. ಮತ್ತು 128GB ಸ್ಟೋರೇಜ್ ವೇರಿಯಂಟ್ ಭಾರತದಲ್ಲಿ 15,999 ರೂ.ಗೆ ಲಭ್ಯವಿದೆ. ಇದು ಕಾರ್ಬನ್ ಬ್ಲಾಕ್ ಮತ್ತು ಪೆರಿಡಾಟ್ ಗ್ರೀನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ನೀವು ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಈ ಮೊಬೈಲ್ ಕೊಳ್ಳಬಹುದು.
ರಿಯಲ್‌ಮಿ 14x 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ 14x 5G ಮೊಬೈಲ್ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 1604 x 720 ಪಿಕ್ಸೆಲ್‌ಗಳು ರೆಸಲ್ಯೂಶನ್, 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ 14x 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಈ ಮೊಬೈಲ್ ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ 6.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಜೊತೆಗೆ ಎಐ (AI) ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ 14x 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಆದರೆ, ಭಾರತದಲ್ಲಿ ಈ ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೌಲಭ್ಯದೊಂದಿಗೆ ಬಿಡುಗಡೆಯಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಇದು ಸೈಡ್ ಮೌಂಟ್ ಫಿಂಗರ್‌ಫ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳಲ್ಲಿ ಒಳಗೊಂಡಿದೆ.


Click it and Unblock the Notifications








