ಫ್ಲಿಪ್‌ಕಾರ್ಟ್ ಫ್ಲಾಷ್ ಸೇಲ್‌ನಲ್ಲಿ ರಿಯಲ್ ಮಿ 2 ಸ್ಮಾರ್ಟ್‌ಫೋನ್..! ಕೇವಲ ರೂ.8990ಕ್ಕೆ ಲಭ್ಯ..!
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮೊದಲ ಸೇಲ್‌ನಲ್ಲಿ ಶಿಯೋಮಿ ಬರೆದಿರುವ ಇತಿಹಾಸವನ್ನು ಅಳಿಸಿ, ತನ್ನದೇ ಹೊಸದೊಂದು ದಾಖಲೆಯನ್ನು ನಿರ್ಮಿಸಿದ ರಿಯಲ್ ಮಿ 2 ಸ್ಮಾರ್ಟ್‌ಫೋನ್, ಇಂದು ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಫ್ಲಾಸ್ ಸೇಲ್‌ನಲ್ಲಿ ಕಾಣಿಸಿಕೊಳ್ಳಲಿದೆ. ಮೊದಲ ಸೇಲ್‌ನಲ್ಲಿ ಕ್ಷಣ ಮಾತ್ರದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಸ್ಮಾರ್ಟ್‌ಫೋನ್ ಮಾರಾಟವಾಗಿ ದಾಖಲೆಯನ್ನು ನಿರ್ಮಿಸಿದನ್ನು ನಾವಿಲ್ಲಿ ಕಾಣಬಹುದಾಗಿದೆ.

ನೋಚ್ ಡಿಸ್‌ಪ್ಲೇ, ಡ್ಯುಯಲ್ ಕ್ಯಾಮೆರಾ ಸೇರಿದಂತೆ ತನ್ನದೇ ಅದ ವಿಶೇಷತೆಗಳಿಂದಲೇ ಸದ್ದು ಮಾಡುತ್ತಿದ್ದ ರಿಯಲ್ ಮಿ 2 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನೇರವಾಗಿ ಶಿಯೋಮಿಗೆ ಸೆಡ್ಡು ಹೊಡೆಯುತ್ತಿದೆ. ಇದೇ ಮಾದರಿಯಲ್ಲಿ ಶಿಯೋಮಿ ಸಹ ರಿಯಲ್‌ಮಿ ಸೆಡ್ಡು ಹೊಡೆಯುವಂತೆ ರೆಡ್‌ಮಿ 6 ಸರಣಿಯನ್ನು ಲಾಂಚ್ ಮಾಡಿದೆ.

ರಿಯಲ್ ಮಿ 2 ಬೆಲೆ:
ರಿಯಲ್ ಮಿ 2 ಸ್ಮಾರ್ಟ್‌ಫೋನ್ 3 GB RAM ಮತ್ತು 32 GB ಇಂಟರ್ನಲ್ ಮೆಮೊರಿ ಆವೃತ್ತಿ ರೂ.8990ಕ್ಕೆ ಮಾರಾಟವಾಗಲಿದ್ದು, 4 GB RAM ಮತ್ತು 64 GB ಇಂಟರ್ನಲ್ ಮೆಮೊರಿ ಆವೃತ್ತಿ ರೂ.10,990ಕ್ಕೆ ದೊರೆಯಲಿದೆ ಎನ್ನಲಾಗಿದೆ.

ಆಫರ್:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಖರೀದಿಸುವ HDFC ಕಾರ್ಡುದಾರರು ರೂ.750 ಡಿಸ್ಕೌಂಟ್ ಪಡೆಯಬಹುದಾಗಿದೆ. ಅಲ್ಲದೇ ಜಿಯೋ ದಿಂದ 120 GB ಡೇಟಾ ಹಾಗೂ ರೂ.4200 ಮೌಲ್ಯದ ಲಾಭಗಳನ್ನ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ನೋ ಕಾಸ್ಟ್ EMI ಆಯ್ಕೆಯೂ ಖರೀದಿದಾರರಿಗೆ ದೊರೆಯಲಿದೆ.

ವೇಗದ ಪ್ರೋಸೆಸರ್:
ರಿಯಲ್ ಮಿ 2 ಸ್ಮಾರ್ಟ್‌ಫೊನಿನಲ್ಲಿ ಸ್ನಾಪ್‌ಡ್ರಾಗನ್ 450 ಪ್ರೋಸೆಸರ್ ಅನ್ನು ಕಾಣಬಹುದಾಗಿದೆ. ಇದಲ್ಲದೇ ಆಡಿನೋ 506 GPU ಅವನ್ನು ಅಳವಡಿಸಲಾಗಿದೆ. ಇದರೊಂದಿಗೆ 256 GB ವರೆಗೂ ಮೆಮೊರಿಯನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಮಾಡಿಕೊಡಲಾಗಿದೆ.

ನೋಚ್ ಡಿಸ್‌ಪ್ಲೇ:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 8.1 ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ ಕಲರ್ OS 5.1 ಅನ್ನು ಕಾಣಬಹುದಾಗಿದೆ. ಇದಲ್ಲದೇ ಇದರಲ್ಲಿ 6.2 ಇಂಚಿನ ಡಿಸ್‌ಪ್ಲೇಯನ್ನು ಅಳವಡಿಸಲಾಗಿದ್ದು, ನೋಚ್ ಡಿಸ್‌ಪ್ಲೇಯನ್ನು ನೋಡಬಹುದಾಗಿದೆ. ಅಲ್ಲದೇ ಇದು 19:9 ಅನುಪಾತದಿಂದ ಕೂಡಿದೆ.

ಡ್ಯುಯಲ್ ಕ್ಯಾಮೆರಾ:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 13 MP + 2 MP ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದ್ದು, ಇದೇ ಮಾದರಿಯಲ್ಲಿ ಮುಂಭಾಗದಲ್ಲಿ 8 MP ಸಿಂಗಲ್ ಕ್ಯಾಮೆರಾವನ್ನು ನೋಡಬಹುದಾಗಿದೆ. ಅಲ್ಲದೇ 4230mAh ಬ್ಯಾಟರಿಯನ್ನು ಇದರಲ್ಲಿ ಅಳವಡಿಸಲಾಗಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಸಹ ಇದೆ.


Click it and Unblock the Notifications








