ಶಿಯೋಮಿಗಿಂತ ಬೆಸ್ಟ್ ರಿಯಲ್‌ಮಿ 2 ಫ್ಲಾಷ್ ಸೇಲ್; ಎಲ್ಲಿ..?
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶಿಯೋಮಿ ಬರೆದಿರುವ ಇತಿಹಾಸವನ್ನು ಅಳಿಸಿ, ತನ್ನದೇ ಹೊಸದೊಂದು ದಾಖಲೆಯನ್ನು ನಿರ್ಮಿಸಲಿರುವ ಒಪ್ಪೋ ಸಬ್ ಬ್ರಾಂಡ್ ರಿಯಲ್ ಮಿ ಲಾಂಚ್ ಮಾಡಿರುವ ರಿಯಲ್ ಮಿ 2 ಸ್ಮಾರ್ಟ್‌ಫೋನ್ ಇಂದು ಮೊದಲ ಬಾರಿಗೆ ಫ್ಲಾಷ್ ಸೇಲ್‌ನಲ್ಲಿ ಕಾಣಿಸಿಕೊಳ್ಳಲಿದೆ. ಭಾರತೀಯ ಮಾರುಕಟ್ಟೆಯಲ್ಲಿ ಶಿಯೋಮಿ ಪತನಕ್ಕೆ ಈ ಸ್ಮಾರ್ಟ್‌ಫೋನ್ ನಾಂದಿ ಹಾಡಲಿದೆ.

ನೋಚ್ ಡಿಸ್‌ಪ್ಲೇ. ಬಿಗ್ ಬ್ಯಾಟರಿ, ಡ್ಯುಯಲ್ VoLTE ಸೇರಿದಂತೆ ಸಾಕಷ್ಟು ಹೊಸ ಆಯ್ಕೆಗಳನ್ನು ಹೊಂದಿರುವ ರಿಯಲ್ ಮಿ 2 ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ಗಂಟೆಗೆ ಫ್ಲಾಷ್ ನಲ್ಲಿ ಕಾಣಿಸಿಕೊಳ್ಳಲಿದೆ. ಈಗಾಗಲೇ ರಿಯಲ್ ಮಿ 1 ಸ್ಮಾರ್ಟ್‌ಫೋನ್ ಭಾರಿ ಪ್ರಮಾಣದಲ್ಲಿ ಖ್ಯಾತಿಯನ್ನು ಪಡೆದುಕೊಂಡಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಲಾಂಚಿಂಗ್ ಆಫರ್:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಲಾಂಚಿಂಗ್ ಆಫರ್ ಜೋರಾಗಿದೆ. HDFC ಕಾರ್ಡುದಾರರು ರೂ.750 ಡಿಸ್ಕೌಂಟ್ ಪಡೆಯಬಹುದಾಗಿದೆ. ಅಲ್ಲದೇ ಜಿಯೋ ದಿಂದ 120 GB ಡೇಟಾ ಹಾಗೂ ರೂ.4200 ಮೌಲ್ಯದ ಲಾಭಗಳನ್ನ ಪಡೆದುಕೊಳ್ಳಬಹುದಾಗಿದೆ. ಅಲ್ಲದೇ ನೋ ಕಾಸ್ಟ್ EMI ಆಯ್ಕೆಯೂ ಖರೀದಿದಾರರಿಗೆ ದೊರೆಯಲಿದೆ.

ರಿಯಲ್ ಮಿ 2 ವಿಶೇಷತೆ:
ರಿಯಲ್ ಮಿ 2 ಸ್ಮಾರ್ಟ್‌ಫೊನಿನಲ್ಲಿ ಸ್ನಾಪ್‌ಡ್ರಾಗನ್ 450 ಪ್ರೋಸೆಸರ್ ಅನ್ನು ಕಾಣಬಹುದಾಗಿದೆ. ಇದಲ್ಲದೇ ಆಡಿನೋ 506 GPU ಅವನ್ನು ಅಳವಡಿಸಲಾಗಿದೆ. ಇದರೊಂದಿಗೆ 256 GB ವರೆಗೂ ಮೆಮೊರಿಯನ್ನು ವಿಸ್ತರಿಸಿಕೊಳ್ಳುವ ಅವಕಾಶವನ್ನು ಮಾಡಿಕೊಡಲಾಗಿದೆ.

ಆಂಡ್ರಾಯ್ಡ್ 8.1:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 8.1 ನಲ್ಲಿ ಕಾರ್ಯನಿರ್ವಹಿಸಲಿದ್ದು, ಇದರೊಂದಿಗೆ ಕಲರ್ OS 5.1 ಅನ್ನು ಕಾಣಬಹುದಾಗಿದೆ. ಇದಲ್ಲದೇ ಇದರಲ್ಲಿ 6.2 ಇಂಚಿನ ಡಿಸ್‌ಪ್ಲೇಯನ್ನು ಅಳವಡಿಸಲಾಗಿದ್ದು, ನೋಚ್ ಡಿಸ್‌ಪ್ಲೇಯನ್ನು ನೋಡಬಹುದಾಗಿದೆ. ಅಲ್ಲದೇ ಇದು 19:9 ಅನುಪಾತದಿಂದ ಕೂಡಿದೆ.

ಡ್ಯುಯಲ್ ಕ್ಯಾಮೆರಾ:
ರಿಯಲ್ ಮಿ 2 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 13 MP + 2 MP ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದ್ದು, ಇದೇ ಮಾದರಿಯಲ್ಲಿ ಮುಂಭಾಗದಲ್ಲಿ 8 MP ಸಿಂಗಲ್ ಕ್ಯಾಮೆರಾವನ್ನು ನೋಡಬಹುದಾಗಿದೆ. ಅಲ್ಲದೇ 4230mAh ಬ್ಯಾಟರಿಯನ್ನು ಇದರಲ್ಲಿ ಅಳವಡಿಸಲಾಗಿದೆ. ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸ್ಕ್ಯಾನರ್ ಸಹ ಇದೆ.

ಬೆಲೆ:
ರಿಯಲ್ ಮಿ 2 ಸ್ಮಾರ್ಟ್‌ಫೋನ್ 3 GB RAM ಮತ್ತು 32 GB ಇಂಟರ್ನಲ್ ಮೆಮೊರಿ ಆವೃತ್ತಿ ರೂ.8990ಕ್ಕೆ ಮಾರಾಟವಾಗಲಿದ್ದು, GB RAM ಮತ್ತು 64 GB ಇಂಟರ್ನಲ್ ಮೆಮೊರಿ ಆವೃತ್ತಿ ರೂ.10,990ಕ್ಕೆ ದೊರೆಯಲಿದೆ ಎನ್ನಲಾಗಿದೆ.

ಶಿಯೋಮಿಗೆ ನೇರಾ ಹೊಡೆತ:
ತನ್ನದೇ ಅದ ವಿಶೇಷತೆಗಳಿಂದಲೇ ಸದ್ದು ಮಾಡುತ್ತಿದ್ದ ರಿಯಲ್ ಮಿ 2 ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನೇರವಾಗಿ ಶಿಯೋಮಿ ಉತ್ಪನ್ನಗಳಿಗೆ ಸೆಡ್ಡು ಹೊಡೆಯುವ ಮಾದರಿಯಲ್ಲಿಯೇ ಇದೆ. ಇನ್ನು ಈ ಸ್ಮಾರ್ಟ್‌ಫೋನ್ ಬೆಲೆ ಕೇಳಿದವರು ಯಾರು ಶಿಯೋಮಿ ಕಡೆಗೆ ತಿರುಗಿಯೂ ನೋಡುವುದಿಲ್ಲ ಎನ್ನಲಾಗಿದೆ.


Click it and Unblock the Notifications




