ಬಿಡುಗಡೆ ಆಯ್ತು ಬಹುನಿರೀಕ್ಷಿತ 'ರಿಯಲ್ ಮಿ 3 ಪ್ರೋ'!.ಆರಂಭಿಕ ಬೆಲೆ 13,999.ರೂ!
ಬಹುನಿರೀಕ್ಷಿತ 'ರಿಯಲ್ ಮಿ 3 ಪ್ರೋ' ಸ್ಮಾರ್ಟ್‌ಫೋನ್ ಇಂದು ಮೊಬೈಲ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ನಿರೀಕ್ಷೆಯಂತೆ ಭರ್ಜರಿ ಹೈ ಎಂಡ್ ಫೀಚರ್ಸ್‌ಗಳನ್ನು ಒಳಗೊಂಡಿರುವ ಈ ಸ್ಮಾರ್ಟ್‌ಫೋನ್ ಕಂಪನಿಯ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಪೋನಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಶಿಯೋಮಿ ರೆಡ್ಮಿ ನೋಟ್ 7ಪ್ರೋ ಗೆ ನೇರ ಪ್ರತಿಸ್ಪರ್ಧಿ ಆಗುವ ಲಕ್ಷಣಗಳನ್ನು ಹೊರಹಾಕಿದೆ.

ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಪೋನ್ ಕಂಪನಿಯು ದೆಹಲಿಯಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಿದ್ದು, ಎರಡು 4GB RAM ಮತ್ತು 6GB RAM ವೇರಿಯಂಟ್‌ಗಳಲ್ಲಿ ಪ್ರವೇಶ ಪಡೆದಿದೆ. ಈ ಸ್ಮಾರ್ಟ್‌ಫೋನಿಗೆ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಒದಗಿಸಲಾಗಿದ್ದು, ಜೊತೆಗೆ ದೀರ್ಘ ಬಾಳಿಕೆಗಾಗಿ ಪವರ್‌ಫುಲ್ ಬ್ಯಾಟರಿ ಬಾಳಿಕೆಯನ್ನು ನೀಡಲಾಗಿದೆ.

ಸ್ಮಾರ್ಟ್‌ಫೋನಿನ ಪ್ರಮುಖ ಆಕರ್ಷಣೆಯೆಂದರೆ ಕ್ಯಾಮೆರಾ ಆಗಿದ್ದು, ಸೋನಿಯ IMX519 ಸೆನ್ಸಾರ್ ಹೊಂದಿರುವ 16 ಎಂಪಿ ರೇರ್ ಕ್ಯಾಮೆರಾ ಅಳವಡಿಸಲಾಗಿದೆ, ಎಚ್‌ಡಿಆರ್ ಮೋಡ್, ಸೇರಿದಂತೆ ಹಲವು ಫೀಚರ್ಸ್‌ಗಳು ನೀಡಲಾಗಿದೆ. ಹಾಗಾದರೇ 'ರಿಯಲ್ ಮಿ 3 ಪ್ರೋ' ಸ್ಮಾರ್ಟ್‌ಫೋನ್ ಇತರೆ ಏನೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸೈನ್
3D ಸ್ಪೀಡ್ ವೇ ಡಿಸೈನ್‌ನಲ್ಲಿ ಆಕರ್ಷಕ ರಚನೆಯನ್ನು ಹೊಂದಿದ್ದು, ಗ್ರೇಡಿಯಂಟ್ ಕಲರ್ ಫೋನಿನ ಅಂದ ಹೆಚ್ಚಿಸಿದೆ. ಡಿಸ್‌ಪ್ಲೇಯ ಸುತ್ತಲೂ ಅತೀ ಕಡಿಮೆ ಅಂಚನ್ನು ನೀಡಲಾಗಿದ್ದು, ಸಂಪೂರ್ಣ ಡಿಸ್‌ಪ್ಲೇಯ ಅನುಭವ ದೊರೆಯಲಿದೆ. ಹಾಗೇ ಡಿಸ್‌ಪ್ಲೇಯ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 5 ಸಹ ನೀಡಲಾಗಿದೆ. ನಿಟ್ರೊ ಬ್ಲೂ ಮತ್ತು ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಡಿಸ್‌ಪ್ಲೇ
1,080 x 2,340 ಪಿಕ್ಸಲ್ ರೆಸಲ್ಯೂಶನ್ ನೊಂದಿಗೆ 6.3 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಮತ್ತು ಬಾಹ್ಯ ಬಾಡಿಯ ರಚನೆಯ ನಡುವಿನ ರೆಶಿಯೋ ಶೇ.90.8% ಆಗಿದೆ ಹಾಗೂ ಅನುಪಾತವು 19.5:9 ಆಗಿದೆ. ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 PPI ಆಗಿದೆ. ಸಂಪೂರ್ಣ ಅಂಚುರಹಿತ ಡಿಸ್‌ಪ್ಲೇಯ ಅನುಭವ ನೀಡಲಿದೆ ಎನ್ನಲಾಗಿದೆ.

ಪ್ರೊಸೆಸರ್
ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಫೋನ್ ಕ್ಚಾಲ್ಕಮ್ ಚಿಪ್ ಸೆಟ್‌ನೊಂದಿಗೆ, ಸ್ನ್ಯಾಪ್‌ಡ್ರಾಗನ್ 710 AIE ಪ್ರೊಸೆಸರ್ ಹೊಂದಿದ್ದು, ಫೋನಿನ ಮಲ್ಟಿಟಾಸ್ಕ್ ಕಾರ್ಯವೈಖರಿಯು ವೇಗವಾಗಿರಲಿದೆ. ಹಾಗೇ ಆಂಡ್ರೆನೊ 616 GPU ಸಹ ಹೊಂದಿದ್ದು, ಇದರೊಂದಿಗೆ ಆಂಡ್ರಾಯ್ಡ್ 9.0 ಪೈ, ಆಧಾರಿತ ಕಲರ್ 6.0 ಓಎಸ್ ಈ ಫೋನಿನಲ್ಲಿ ಇರಲಿದೆ.

ಮೆಮೊರಿ
ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಫೋನ್ ನಿರೀಕ್ಷೆಯಂತೆ ಎರಡು ವೇರಿಯಂಟ್‌ಗಳಲ್ಲಿ ಲಾಂಚ್ ಆಗಿದೆ. 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯ ಹಾಗೂ 6GB RAM + 128GB ಆಂತರಿಕ ಸಂಗ್ರಹ ಸ್ಥಳಾವಕಾಶವನ್ನು ಹೊಂದಿರುವ ವೇರಿಯಂಟ್ ಮಾದರಿಗಳಲ್ಲಿ ಗ್ರಾಹಕರಿಗೆ ದೊರೆಯಲಿದೆ. ಕಂಪನಿಯ ಫ್ಲ್ಯಾಗ್‌ಶಿಪ್ ಮಾದರಿಯ ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಡ್ಯುಯಲ್ ರೇರ್ ಕ್ಯಾಮೆರಾವನ್ನು ಹೊಂದಿದ್ದು, ಪ್ರಾಥಮಿಕ ರೇರ್ ಕ್ಯಾಮೆರಾವು 16 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, ಸೋನಿಯ IMX519 ಸೆನ್ಸಾರ್ ಅನ್ನು ಹೊಂದಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು 5ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿದ್ದು, f/2.4 ಅಪರ್ಚರ್ ಇರಲಿದೆ. AI ಸೆನ್ಸಾರ್ ಪಡೆದುಕೊಂಡಿದ್ದು, ಫೋಟೋಗಳು ಅತ್ಯುತ್ತಮವಾಗಿ ಮೂಡಿಬರಲಿವೆ.

ಸೆಲ್ಫಿ ಕ್ಯಾಮೆರಾ
ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಫೋನಿನಲ್ಲಿ 25 ಮೆಗಾಪಿಕ್ಸಲ್ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದ್ದು, ಈ ಕ್ಯಾಮೆರಾವು f/2.0 ಅಪರ್ಚರ್ ಅನ್ನು ಹೊಂದಿದೆ. ಹಾಗೇ ಸೆಲ್ಫಿ ಕ್ಯಾಮೆರಾ 1/2.8 ಸೆನ್ಸಾರ್‌ನಲ್ಲಿ ಕೆಲಸ ಮಾಡಲಿದೆ.

ಬ್ಯಾಟರಿ
4045mAh ಸಾಮರ್ಥ್ಯದ ಬ್ಯಾಟರಿಯನ್ನು ಒದಗಿಸಲಾಗಿದ್ದು, ಇದರೊಂದಿಗೆ ಸ್ಮಾರ್ಟ್‌ಫೋನ್ ವೇಗದ ಚಾರ್ಜಿಂಗ್‌ಗಾಗಿ VOOC 3.0, ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನದ ಸೌಲಭ್ಯವನ್ನು ನೀಡಲಾಗಲಿದೆ. ಈ ತಂತ್ರಜ್ಞಾನದ ನೆರವಿನಿಂದ ಸ್ಮಾರ್ಟ್‌ಫೋನ್ ಕ್ವಿಕ್ ಆಗಿ ಚಾರ್ಜ್ ಪಡೆದುಕೊಳ್ಳಲಿದ್ದು, 30 ನಿಮಿಷದಲ್ಲಿ ಶೇ. 50% ಚಾರ್ಜ್ ಪಡೆದುಕೊಳ್ಳವ ಶಕ್ತಿಯನ್ನು ಒದಗಿಸಲಿದೆ.

ಬೆಲೆ ಮತ್ತು ಲಭ್ಯತೆ
ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಫೋನ್ ಮೊದಲ ಸೇಲ್ ಇದೇ ಏಪ್ರಿಲ್ 29ರಿಂದ ಆರಂಭವಾಗಲಿದೆ. ನಿಟ್ರೊ ಬ್ಲೂ ಮತ್ತು ಲೈಟ್ ಪರ್ಪಲ್ ಬಣ್ಣಗಳ ಆಯ್ಕೆಗಳು ದೊರೆಯಲಿವೆ. ಇನ್ನು ರಿಯಲ್ ಮಿ 3 ಪ್ರೋ ಸ್ಮಾರ್ಟ್‌ಫೋನಿನ 4GB RAM+64GB ವೇರಿಯಂಟ್ ಬೆಲೆಯು 13,999ರೂ.ಗಳು ಹಾಗೂ 6GB RAM+128GB ಮಾದರಿಯ ವೇರಿಯಂಟ್ ಬೆಲೆ 16,999ರೂ.ಗಳು ಆಗಿದೆ.


Click it and Unblock the Notifications








