'ರಿಯಲ್‌ ಮಿ 5i' ಫಸ್ಟ್‌ ಲುಕ್ : ಕಡಿಮೆ ಬೆಲೆಗೆ ಉತ್ತಮ ಕ್ವಾಡ್‌ ಕ್ಯಾಮೆರಾ ಫೋನ್!

|

ಚೀನಾ ಮೂಲದ 'ರಿಯಲ್‌ ಮಿ' ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಮೇಲಿಂದ ಮೇಲೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿರುವ ಸಂಸ್ಥೆಯು ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತಿದೆ. ಸಂಸ್ಥೆಯು ಈ ಹೊಸ ವರ್ಷದ ಆರಂಭದಲ್ಲಿ 'ರಿಯಲ್‌ ಮಿ 5i' ಹೆಸರಿನ ಬಜೆಟ್ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸುದ್ದಿ ಆಗಿದೆ.

ರಿಯಲ್‌ ಮಿ 5i

ಇದೇ ಜನವರಿ 9ರಂದು ಭಾರತೀಯ ಮಾರುಕಟ್ಟೆಗೆ ಲಗ್ಗೆ ಹಾಕಿರುವ ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಬಜೆಟ್ ಫೋನ್‌ ಆಗಿದ್ದರು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಕಳೆದ ವರ್ಷ ಕಂಪನಿಯ ರಿಯಲ್ ಮಿ 5 ಮತ್ತು ರಿಯಲ್‌ ಮಿ 5s ಫೋನ್‌ಗಳನ್ನು ಬಿಡುಗಡೆ ಮಾಡಿತ್ತು. ಅದರ ಮುಂದುವರಿದ ಭಾಗವೇ ಈ ರೀಯಲ್‌ ಮಿ 5i ಫೋನ್‌. ಇನ್ನು 4GB RAM + 64GB ವೇರಿಯಂಟ್ ಸಾಮರ್ಥ್ಯವನ್ನು ಹೊಂದಿರುವ ಈ ಫೋನ್ ಇದೇ ಜನವರಿ 15ರಂದು ಫ್ಲಿಪ್‌ಕಾರ್ಟ್‌ ಇ-ಕಾಮರ್ಸ್‌ ಮತ್ತು ಅಧಿಕೃತ ರಿಯಲ್‌ ಮಿ ತಾಣದಲ್ಲಿ ಸೇಲ್ ಆರಂಭಿಸಲಿದೆ. ಹಾಗಾದರೇ ರಿಯಲ್‌ ಮಿ 5i ಸ್ಮಾರ್ಟ್‌ಫೋನಿನ ಮೊದಲ ನೋಟ ಫಲಿತಾಂಶ ಏನು ಅನ್ನೊದನ್ನು ಮುಂದೆ ತಿಳಿಯೋಣ.

ಗಮನ ಸೆಳೆವ ಡಿಸೈನ್ ಮತ್ತು ಡಿಸ್‌ಪ್ಲೇ

ಗಮನ ಸೆಳೆವ ಡಿಸೈನ್ ಮತ್ತು ಡಿಸ್‌ಪ್ಲೇ

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 480 nits ಬ್ರೈಟ್ನೆಸ್‌ ಹೊಂದಿದ್ದು, ಮಿನಿ ವಾಟರ್ ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.89% ಆಗಿದೆ. ಗೊರಿಲ್ಲಾ 3 ಗ್ಲಾಸ್‌ ಒದಗಿಸಲಾಗಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ವೇಗ ಹೇಗಿದೆ

ಪ್ರೊಸೆಸರ್ ವೇಗ ಹೇಗಿದೆ

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 665 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 9 ಪೈ ಹಾಗೂ ಕಲರ್ ಓಎಸ್‌ 6.1 ಕೆಲಸ ಮಾಡಡುತ್ತವೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯ ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ. ಆದರೆ ಒಂದೇ ವೇರಿಯಂಟ್ ಆಯ್ಕೆ ನೀಡಿದೆ. ಇದರ ಜೊತೆಗೆ 6GB RAM ವೇರಿಯಂಟ್ ಆಯ್ಕೆಯನ್ನು ನೀಡಿದ್ದರೆ ಚೆನ್ನಾಗಿತ್ತು.

ನಾಲ್ಕು ಕ್ಯಾಮೆರಾ ಸೆಟ್‌ಅಪ್

ನಾಲ್ಕು ಕ್ಯಾಮೆರಾ ಸೆಟ್‌ಅಪ್

ರಿಯಲ್‌ ಮಿ 5i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್ನೊಂದಿಗೆ 12ಎಂಪಿ ಸೆನ್ಸಾರ್ ನಲ್ಲಿರಲಿದೆ. ಇನ್ನು ಸೆಕೆಂಡರಿ ಕ್ಯಾಮೆರಾವು f/2.25 ಅಪರ್ಚರ್ನೊಂದಿಗೆ 8ಎಂಪಿ ಸೆನ್ಸಾರ್‌ನ ಅಲ್ಟ್ರಾ ವೈಲ್ಡ್ ಆಂಗಲ್ ಲೆನ್ಸ್‌ ಹಾಗೂ ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನ ಡೆಪ್ತ್ ಹಾಗೂ ಮೈಕ್ರೋ ಲೆನ್ಸ್‌ ಸಾಮರ್ಥ್ಯದಲ್ಲಿರಲಿವೆ. 13ಎಂಪಿಯ ಸೆಲ್ಫಿ ಕ್ಯಾಮೆರಾ ಇರಲಿದೆ. ಸದ್ಯ ಮಾರುಕಟ್ಟೆಯಲ್ಲಿ 48ಎಂಪಿ ಕ್ಯಾಮೆರಾ ಟ್ರೆಂಡಿಂಗ್‌ನಲ್ಲಿದೆ ಹೀಗಾಗಿ ಈ ಫೋನಿನಲ್ಲಿ ಕ್ಯಾಮೆರಾ ಸೆನ್ಸಾರ್‌ ಇನ್ನಷ್ಟು ಹೆಚ್ಚಿಸಬಹುದಿತ್ತು.

ಬ್ಯಾಟರಿ ಶಕ್ತಿ

ಬ್ಯಾಟರಿ ಶಕ್ತಿ

ಇನ್ನು ರಿಯಲ್‌ ಮಿ 5i ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಇದರೊಂದಿಗೆ ವೈಫೈ-802.11ac, ಜಿಪಿಎಸ್‌, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ. ಬಜೆಟ್‌ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಬೆಲೆ ಎಷ್ಟು

ಬೆಲೆ ಎಷ್ಟು

ದೇಶಿಯ ಮಾರುಕಟ್ಟೆಗೆ ಹೊಸದಾಗಿ ಎಂಟ್ರಿ ಕೊಟ್ಟಿರುವ 'ರಿಯಲ್‌ ಮಿ 5i' ಸ್ಮಾರ್ಟ್‌ಫೋನ್‌ 4GB RAM + 64GB ವೇರಿಯಂಟ್ ಬೆಲೆಯು 8,999ರೂ. ಆಗಿದೆ. ಇನ್ನು ಈ ಫೊನ್ ಫಾರೆಸ್ಟ್‌ ಗ್ರೀನ್ ಹಾಗೂ ಅಕ್ವಾ ಬ್ಲೂ ಬಣ್ಣದ ಆಯ್ಕೆಗಳನ್ನು ಹೊಂದಿದೆ. ಇದೇ ಜನವರಿ 15ರಂದು ಸೇಲ್ ಆರಂಭವಾಗಲಿದೆ.

ಕೊನೆಯ ಮಾತು

ಕೊನೆಯ ಮಾತು

ರಿಯಲ್‌ ಮಿ 5i ಖರೀದಿಗೆ ಕಡಿಮೆ ಬೆಲೆಯ ಪ್ರೈಸ್‌ಟ್ಯಾಗ್ ಹೊಂದಿದ್ದು, ಹಾಗೆಯೇ ಬಿಗ್ ಡಿಸ್‌ಪ್ಲೇ, ಬಿಗ್ ಬ್ಯಾಟರಿ ಬ್ಯಾಕ್‌ಅಪ್‌, ನಾಲ್ಕು ಕ್ಯಾಮೆರಾ ರಚನೆಯಿಂದ ಗಮನ ಸೆಳೆಯುತ್ತದೆ. ಆದರೆ ಇನ್ನೊಂದು ವೇರಿಯಂಟ್ ಆಯ್ಕೆ ನೀಡಬಹುದಿತ್ತು ಹಾಗೂ ಮುಖ್ಯ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಹೆಚ್ಚಿಸಿದ್ದರೆ, ಗ್ರಾಹಕರಿಗೆ ಬಹುಬೇಗ ಆಕರ್ಷಕವಾಗುತ್ತಿತ್ತು. ಇದನ್ನು ಹೊರತುಪಡಿಸಿ ಉಳಿದಂತೆ ಅಗ್ಗದ ಬೆಲೆಗೆ ಕ್ವಾಡ್‌ ಕ್ಯಾಮೆರಾ ಫೋನ್ ಖರೀದಿಸುವವರಿಗೆ ಈ ಫೋನ್ ಉತ್ತಮ ಆಯ್ಕೆ.

Best Mobiles in India

English summary
Realme 5i, which is a refreshed version of the last year's Realme 5 and Realme 5s smartphones. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X