ರಿಯಲ್‌ಮಿ 7 ಫಸ್ಟ್‌ ಲುಕ್: ಬಜೆಟ್‌ ದರದಲ್ಲಿ ಉತ್ತಮ ಕ್ವಾಡ್‌ ಕ್ಯಾಮೆರಾ ಫೋನ್!

|

ರಿಯಲ್‌ ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಸಂಸ್ಥೆಯು ಇತ್ತೀಚಿಗೆ ರಿಯಲ್ ಮಿ 7 ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಈ ಸರಣಿಯು ರಿಯಲ್‌ಮಿ 7 ಮತ್ತು ರಿಯಲ್‌ಮಿ 7 ಪ್ರೊ ಮಾಡೆಲ್‌ಗಳನ್ನು ಒಳಗೊಂಡಿದ್ದು, ಬಜೆಟ್‌ ದರದಲ್ಲಿ ರಿಯಲ್‌ಮಿ 7 ಸ್ಮಾರ್ಟ್‌ಫೋನ್ ಗ್ರಾಹಕರ ಹೆಚ್ಚಿನ ಗಮನ ಸೆಳೆದಿದೆ.

ರಿಯಲ್‌ಮಿ 7

ಭಾರತೀಯ ಮಾರುಕಟ್ಟೆಗೆ ಲಗ್ಗೆ ಹಾಕಿರುವ ರಿಯಲ್‌ಮಿ 7 ಸ್ಮಾರ್ಟ್‌ಫೋನ್ ಬಜೆಟ್ ಫೋನ್‌ ಆಗಿದ್ದರು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ಶಿಯೋಮಿಯ ರೆಡ್ಮಿ ಸರಣಿಯ ಫೋನ್‌ಗಳಿಗೆ ಪೈಪೋಟಿ ನೀಡುವ ಲಕ್ಷಣಗಳನ್ನು ಈ ಫೋನ್ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ವೇಗದ ಪ್ರೊಸೆಸರ್, ಕ್ವಾಡ್ ಕ್ಯಾಮೆರಾ, ಬಿಗ್ ಬ್ಯಾಟರಿ, ಆಕರ್ಷಕ ಡಿಸೈನ್‌ನಂತಹ ಸ್ಪರ್ಧಾತ್ಮಕ ಫೀಚರ್ಸ್‌ಗಳನ್ನು ಪಡೆದಿದೆ. ಹಾಗಾದರೇ ರಿಯಲ್‌ಮಿ 7 ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ

ಡಿಸ್‌ಪ್ಲೇ ರಚನೆ ಹೇಗಿದೆ

ರಿಯಲ್‌ ಮಿ 7 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.5 ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.8 ಆಗಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಸಹ ಬಹುಬೇಗನೆ ಗ್ರಾಹಕರನ್ನು ಸೆಳೆಯುವಂತಿದೆ.

ಪ್ರೊಸೆಸರ್ ಕಾರ್ಯ ಹೇಗೆ

ಪ್ರೊಸೆಸರ್ ಕಾರ್ಯ ಹೇಗೆ

ರಿಯಲ್‌ ಮಿ 7 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಜೊತೆಗೆ 6GB/64GB ಹಾಗೂ 8GB + 128GB ಸ್ಟೋರೇಜ್ ಆಯ್ಕೆ ಹೊಂದಿದೆ. ಆಂಡ್ರಾಯ್ಡ್‌ 10 ಓಎಸ್‌ ಬೆಂಬಲ ಸಹ ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ. ಹೆಚ್ಚಿನ ಡೇಟಾ ಸಾಮರ್ಥ್ಯದ ಆನ್‌ಲೈನ್ ಗೇಮ್‌ಗಳನ್ನು ಅಡೆತಡೆಯಿಲ್ಲದೆ ಆಡಲು ಪೂರಕ ಅನಿಸಲಿದೆ.

ಕ್ಯಾಮೆರಾ ವಿಶೇಷ ಏನು

ಕ್ಯಾಮೆರಾ ವಿಶೇಷ ಏನು

ರಿಯಲ್‌ ಮಿ 7 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿದೆ. ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಪಡೆದಿದೆ. ಸದ್ಯ ಮಾರುಕಟ್ಟೆಯಲ್ಲಿ 64ಎಂಪಿ ಕ್ಯಾಮೆರಾ ಟ್ರೆಂಡಿಂಗ್‌ನಲ್ಲಿದೆ. ಈ ಫೋನ್ ಅಧಿಕ ಕ್ಯಾಮೆರಾ ಸೆನ್ಸಾರ್‌ ಪಡೆದಿರುವುದು ಆಕರ್ಷಣಿಯ.

ಬ್ಯಾಟರಿ ಪವರ್ ಎಷ್ಟು?

ಬ್ಯಾಟರಿ ಪವರ್ ಎಷ್ಟು?

ರಿಯಲ್‌ ಮಿ 7 ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಪಡೆದಿದ್ದು, 30W ಸೂಪರ್‌ ಡಾರ್ಟ್‌ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್‌, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ. ಬಜೆಟ್‌ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್‌ ಪಾಯಿಂಟ್ ಎನ್ನಬಹುದಾಗಿದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ರಿಯಲ್‌ ಮಿ 7 ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಬೇಸ್‌ ವೇರಿಯಂಟ್ 6GB + 64GB ವೇರಿಯಂಟ್ ಬೆಲೆಯು 14,999ರೂ. ರೂ. ಆಗಿದೆ. ಮತ್ತು 8GB + 128GB ವೇರಿಯಂಟ್ ಬೆಲೆಯು 16,999ರೂ.ಆಗಿದೆ.

ಕೊನೆಯ ಮಾತು

ಕೊನೆಯ ಮಾತು

15,000 ಸಾವಿರ ಪ್ರೈಸ್‌ಟ್ಯಾಗ್‌ನಲ್ಲಿ ರಿಯಲ್‌ಮಿ 7 ಫೋನ್ ಮೊದಲ ನೋಟದಲ್ಲಿಯೇ ಗ್ರಾಹಕರನ್ನು ಸೆಳೆಯುತ್ತದೆ. ಈ ಫೋನ್ ತನ್ನ ವರ್ಗದಲ್ಲಿಯೇ ಇತರೆ ಬ್ರ್ಯಾಂಡ್‌ ಫೋನ್‌ಗಳಿಗೆ ಪೈಪೋಟಿ ನೀಡುವಂತಹ ಫೀಚರ್ಸ್‌ ಒಳಗೊಂಡಿದೆ. ಕ್ವಾಡ್ ಕ್ಯಾಮೆರಾ ರಚನೆಯಿಂದ ಹಾಗೂ ಬ್ಯಾಟರಿ ಬಾಳಿಕೆಯನ್ನು ಅಂಶಗಳಿಂದ ಮತ್ತಷ್ಟು ಆಕರ್ಷಕ ಅನಿಸಲಿದೆ. ಸೆಲ್ಫಿ ಕ್ಯಾಮೆರಾ ಸೆನ್ಸಾರ್‌ ಹೆಚ್ಚಿಸಬಹುದಿತ್ತು. ಉಳಿದಂತೆ ಈ ಫೋನ್ ಬಜೆಟ್‌ ಬೆಲೆಗೆ ಉತ್ತಮ ಆಯ್ಕೆ.

Best Mobiles in India

English summary
Realme 7 is a refinement over the already impressive Realme 6. For a sub-Rs 20,000 phone.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X