ರಿಯಲ್‌ಮಿ 7i ಮತ್ತು ರಿಯಲ್ ಮಿ 6i ಸ್ಮಾರ್ಟ್‌ಫೋನ್ ಖರೀದಿಗೆ ಯಾವುದು ಬೆಸ್ಟ್?
ಜನಪ್ರಿಯ ರಿಯಲ್‌ಮಿ ಮೊಬೈಲ್ ಕಂಪನಿಯು ಇತ್ತೀಚಿಗಷ್ಟೆ ಹೊಸದಾಗಿ ರಿಯಲ್ ಮಿ 7i ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದದೆ. ಈ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್ ಹಾಗೂ ಪ್ರೈಸ್‌ಟ್ಯಾಗ್‌ನಿಂದ ಗ್ರಾಹಕರ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆ ಪಡೆದಿರುವುದು ಹೈಲೈಟ್ ಆಗಿ ಕಾಣಿಸಿಕೊಂಡಿದೆ. ಹಾಗೆಯೇ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಸಹ ಬಜೆಟ್ ದರದಲ್ಲಿ ಗ್ರಾಹಕರನ್ನು ಸೆಳೆದಿದೆ. ಆದರೆ ಇವೆರಡರಲ್ಲಿ ಯಾವುದು ಬೆಸ್ಟ್?

ಹೌದು, ರಿಯಲ್ ಮಿ ಸಂಸ್ಥೆಯ ನೂತನ ರಿಯಲ್‌ಮಿ 7i ಸ್ಮಾರ್ಟ್‌ಫೋನ್, ಹಿಂದಿನ ಸರಣಿಯ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಹೋಲಿಕೆಯನ್ನು ಹೊಂದಿದೆ. ಬಹುತೇಕ ಫೀಚರ್ಸ್‌ಗಳು ಒಂದೇ ಅನಿಸಿದರೂ ಭಿನ್ನತೆ ಇದೆ. ಹಾಗೆಯೇ ಪ್ರೈಸ್‌ಟ್ಯಾಗ್ ದೃಷ್ಠಿಯಿಂದ ರಿಯಲ್ ಮಿ ಕಂಪನಿಯ ಈ ಎರಡು ಬಜೆಟ್ ಫೋನ್‌ಗಳು ಭಿನ್ನ ಅನಿಸುತ್ತವೆ. ಹಾಗಾದರೇ ಇವೆರಡರಲ್ಲಿ ಖರೀದಿಗೆ ಯಾವುದು ಉತ್ತಮ? ಇವೆರಡು ಫೋನ್‌ಗಳ ಕಂಪ್ಲೀಟ್ ಫೀಚರ್ಸ್ ಮಾಹಿತಿ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಭಿನ್ನತೆಗಳೆನು
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ಸ್ಕ್ರೀನ್ ರೀಫ್ರೇಶ್ ರೇಟ್ 90Hz ಆಗಿದೆ. ಇದರೊಂದಿಗೆ ಡಿಸ್‌ಪ್ಲೇಯು ಉತ್ತಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಅದೇ ರೀತಿ ರಿಯಲ್ ಮಿ 6i ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯು LCD ಮಾದರಿಯಲ್ಲಿ ಇದ್ದು, ಪಂಚ್‌ಹೋಲ್ ವಿನ್ಯಾಸ ಪಡೆದಿದೆ. ಸ್ಕ್ರೀನ್‌ನಿಂದ ಬಾಹ್ಯ ಬಾಡಿಯ ನಡುವಿನ ಅನುಪಾತ 90.5% ಆಗಿದ್ದು, 90Hz ಸಾಮರ್ಥ್ಯ ಪಡೆದಿದೆ.

ಪ್ರೊಸೆಸರ್ ಯಾವುದು
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 662 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಆಂತರಿಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಅದೇ ರೀತಿ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G90 ಪ್ರೊಸೆಸರ್ ಅನ್ನು ಒಳಗೊಂಡಿದ್ದು, ಇದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್ 10 ಓಎಸ್ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 4GB RAM ಸಾಮರ್ಥ್ಯ ಮತ್ತು 64GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಒಳಗೊಂಡಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ನೀಡಿದೆ.

ಕ್ವಾಡ್ ಕ್ಯಾಮೆರಾ ಸ್ಪೆಷಲ್
ರಿಯಲ್‌ಮಿ 7i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಪಡೆದಿದ್ದು, ಉಳಿದಂತೆ ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು 2ಎಂಪಿ ಸೆನ್ಸಾರ್‌ನಲ್ಲಿ ಇವೆ. ಇನ್ನು ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ. ಹಾಗೆಯೇ ರಿಯಲ್ ಮಿ 6i ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್‌ನಲ್ಲಿರಲಿದ್ದು, ತೃತೀಯ ಮತ್ತು ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ನಲ್ಲಿರಲಿವೆ. ಹಾಗೆಯೇ 16ಎಂಪಿಯ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಸಾಮರ್ಥ್ಯ
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಮೈಕ್ರೋ-USB ಪೋರ್ಟ್, ಬ್ಲೂಟೂತ್ v5.0 ಸೌಲಭ್ಯಗಳನ್ನು ಒಳಗೊಂಡಿದೆ. ಹಾಗೆಯೇ ರಿಯಲ್ ಮಿ 6i ಸ್ಮಾರ್ಟ್‌ಫೋನ್ 4300mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾಗಿ 30W ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಹಾಗೆಯೇ ಇದರೊಂದಿಗೆ ವೈಫೈ-802.11ac, ಜಿಪಿಎಸ್, ಬ್ಲೂಟೂತ್, ಫಿಂಗರ್‌ಪ್ರಿಂಟ್ ಸೆನ್ಸಾರ್, 4G VoLTE, ಆಂಬಿಯಂಟ್ ಲೈಟ್ ಸೆನ್ಸಾರ್, ಆಡಿಯೊ ಜಾಕ್ ನಂತಹ ಇತ್ತೀಚಿನ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು?
ರಿಯಲ್‌ಮಿ 7i ಸ್ಮಾರ್ಟ್‌ಫೋನ್ 4GB + 64GB ವೇರಿಯಂಟ್ ಬೆಲೆಯು 11,999 ರೂ. ಆಗಿದೆ. 4GB + 128GB ವೇರಿಯಂಟ್ ಬೆಲೆಯು 12,999ರೂ. ಆಗಿದೆ. ಇನ್ನು ರಿಯಲ್ ಮಿ 6i ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆ ಹೊಂದಿದೆ. ಬೇಸ್ ವೇರಿಯಂಟ್ 4GB + 64GB ಬೆಲೆಯು 12,999ರೂ. ಆಗಿದೆ. ಮತ್ತು 6GB + 64GB ಬೆಲೆಯು 14,999ರೂ. ಆಗಿದೆ.


Click it and Unblock the Notifications








