Home
ಮೊಬೈಲ್

ರಿಯಲ್‌ಮಿ 8s 5G ಫಸ್ಟ್‌ ಲುಕ್: ಮೀಡ್‌ರೇಂಜ್‌ನಲ್ಲಿ ಉತ್ತಮ ಕ್ಯಾಮೆರಾ ಮತ್ತು 5G ಫೋನ್!

ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ 8 ಸರಣಿಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳನ್ನು ಲಾಂಚ್ ಮಾಡಿ ಗಮನ ಸೆಳೆದಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 5G ಸಪೋರ್ಟ್‌ ನೊಂದಿಗೆ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿರುವುದು ವಿಶೇಷ ಎನಿಸಿದೆ.

ರೀಫ್ರೇಶ್‌

ಹೌದು, ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 90Hz ರೀಫ್ರೇಶ್‌ ರೇಟ್ ಒಳಗೊಂಡಿದ್ದು, ಜೊತೆಗೆ 600 ನಿಟ್ಸ್ ಬ್ರೈಟ್‌ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಒಳಗೊಂಡಿದೆ. ಹಾಗಾದರೇ ರಿಯಲ್‌ಮಿ 8s 5G ಸ್ಮಾರ್ಟ್‌ಫೋನಿನ ಫಸ್ಟ್‌ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯವೈಖರಿ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ ಒಳಗೊಂಡಿದೆ. ಹಾಗೆಯೇ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಅಧಿಕ ರೆಸಲ್ಯೂಶನ್ ಇರುವುದರಿಂದ ಸ್ಕ್ರೀನ್ ಅತ್ಯುತ್ತಮ ಎನಿಸಲಿದೆ.

ಪ್ರೊಸೆಸರ್‌ ಪವರ್ ಯಾವುದು?

ಪ್ರೊಸೆಸರ್‌ ಪವರ್ ಯಾವುದು?

ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB + 128GB ಮತ್ತು 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಅಧಿಕ RAM ಮತ್ತು ಹೆಚ್ಚಿನ ಸ್ಟೋರೇಜ್ ಆಯ್ಕೆಗಳು ಆಕರ್ಷಕ ಎನಿಸಲಿವೆ.

ಕ್ಯಾಮೆರಾ ಸೆನ್ಸಾರ್ ಏನು?

ಕ್ಯಾಮೆರಾ ಸೆನ್ಸಾರ್ ಏನು?

ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಎಡಿಟಿಂಗ್ ಆಯ್ಕೆಗಳನ್ನು ಇದು ಒಳಗೊಂಡಿದೆ. ವಿಡಿಯೋ ಗುಣಮಟ್ಟವು ತನ್ನ ವರ್ಗದಲ್ಲೇ ಉತ್ತಮ ಎನ್ನಬಹುದಾಗಿದೆ. ಪ್ರಸ್ತುತ 64 ಮೆಗಾ ಪಿಕ್ಸಲ್ ಟ್ರೆಂಡಿ ಆಗಿದ್ದು, ಈ ಫೋನ್ ಸಹ ಅದೇ ಕ್ಯಾಮೆರಾ ಸೆನ್ಸಾರ್ ಪಡೆದಿರುವುದು ವಿಶೇಷ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 33W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G, ವೈಫೈ, ಬ್ಲೂಟೂತ್ v5.1 ಮತ್ತು USB Type-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ ಇತ್ತೀಚಿಗಿನ ಪ್ರಮುಖ ಅಗತ್ಯ ಸೌಲಭ್ಯಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ 8s 5G ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. 6GB + 128GB ಸ್ಟೋರೇಜ್ ರೂಪಾಂತರಕ್ಕೆ 17,999ರೂ ಮತ್ತು 8GB + 128GB ಮಾದರಿಯ ಆಯ್ಕೆಗೆ 19,999ರೂ, ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯೂನಿವರ್ಸ್ ಬ್ಲೂ ಮತ್ತು ಯೂನಿವರ್ಸ್ ಪರ್ಪಲ್ ಶೇಡ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Realme 8s 5G First Look: A Better 5G Smartphone at Mid Range Price.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+