ರಿಯಲ್‌ಮಿ 9i 5G ಫಸ್ಟ್‌ ಲುಕ್‌: ಬಜೆಟ್‌ ಬೆಲೆಗೆ ವೇಗದ 5G ಫೋನ್‌!

|

ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ ರಿಯಲ್‌ಮಿ 9 ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಹೊಚ್ಚ ಹೊಸ 'ರಿಯಲ್‌ಮಿ 9i 5G' ಫೋನ್‌ ಹಲವು ಆಕರ್ಷಕ ಫೀಚರ್ಸ್‌ಗಳಿಂದ 5G ಮೊಬೈಲ್‌ ಪ್ರಿಯರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ನೊಂದಿಗೆ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.

ಮಾರುಕಟ್ಟೆಯಲ್ಲಿ

ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ 'ರಿಯಲ್‌ಮಿ 9i 5G' ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಎಂಟ್ರಿ ಕೊಟ್ಟಿದೆ. ಈ ಫೋನ್ 90Hz ರೀಫ್ರೇಶ್‌ ರೇಟ್ ಮತ್ತು 400 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಬ್ಯಾಕ್‌ಅಪ್‌

ಬಜೆಟ್‌ ದರದಲ್ಲಿ 5G ಆಯ್ಕೆ ಹಾಗೂ ವೇಗದ ಪ್ರೊಸೆಸರ್‌ನಲ್ಲಿ ಬಿಡುಗಡೆ ಆಗಿರುವ ಈ ಫೋನ್ 5000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿರುವುದು ಪ್ಲಸ್‌ ಪಾಯಿಂಟ್‌ ಆಗಿ ಕಾಣಿಸಿಕೊಂಡಿದೆ. ಹಾಗಾದರೇ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನಿನ ಫಸ್ಟ್‌ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 400 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 399 ಪಿಪಿಐ ಸಾಂದ್ರತೆಯನ್ನು ಹೊಂದಿದೆ. ಈ ಫೋನಿನಲ್ಲಿ ರಿಫ್ರೆಶ್ ದರವನ್ನು ಸುಧಾರಿಸಬಹುದಿತ್ತು. ಹಾಗೆಯೇ, ಬ್ರೈಟ್ನೆಸ್‌ ಮಟ್ಟವನ್ನು ಇನ್ನಷ್ಟು ಹೆಚ್ಚಿಸಬಹುದಿತ್ತು. ಹೆಚ್ಚು ಪ್ರಖರ ಸೂರ್ಯನ ಬೆಳಕಿನಲ್ಲಿ ಸ್ಕ್ರೀನ್‌ ಅನ್ನು ವೀಕ್ಷಿಸಲು ಕಷ್ಟವಾಗುತ್ತದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇದು ಮಧ್ಯವ ಶ್ರೇಣೀಯ ಚಿಪ್‌ಸೆಟ್ ಪ್ರೊಸೆಸರ್‌ ಹೊಂದಿದ್ದು, ಮಲ್ಟಿ ಕಾರ್ಯದ ಸಮಯ ಮತ್ತು ಅಧಿಕ ಗಾತ್ರದ ಅಪ್ಲಿಕೇಶನ್‌ಗಳ ಬಳಕೆಯಲ್ಲಿ ತೃಪ್ತಿದಾಯಕ ಹಾಗೂ ಚುರುಕಾದ ಕಾರ್ಯಕ್ಷಮತೆಯನ್ನು ನೀಡುತ್ತದೆ.

ಕ್ಯಾಮೆರಾ ಸೆನ್ಸಾರ್ ಎಷ್ಟು?

ಕ್ಯಾಮೆರಾ ಸೆನ್ಸಾರ್ ಎಷ್ಟು?

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ f/1.8 ಅಪರ್ಚರ್ ಲೆನ್ಸ್, ಪೋರ್ಟ್ರೇಟ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್‌ಇಡಿ ಫ್ಲ್ಯಾಶ್‌, ಹೆಚ್‌ಡಿಆರ್‌, ಪನೊರೊಮಾ ಅನ್ನು ಹೊಂದಿದೆ. ಅತ್ಯುತ್ತಮ ಫೋಟೊಗಳನ್ನು ಸೆರೆಹಿಡಿಯಲು ಪೂರಕವಾಗಿದ್ದು, ಚರ್ಮದ ಟೋನ್ಗಳನ್ನು ನಿಖರವಾಗಿ ಸೆರೆಹಿಡಿಯುತ್ತದೆ. ಪೋರ್ಟ್ರೆಟ್‌ ಸೆಲ್ಫಿ ಮೋಡ್ ಸರಾಸರಿ ಕಾರ್ಯವನ್ನು ಮಾಡುತ್ತದೆ. HDR ಮೋಡ್ ಚಿತ್ರಗಳನ್ನು ತುಂಬಾ ತೀಕ್ಷ್ಣವಾಗಿ ಮಾಡದೆಯೇ ಹೊಗಳುತ್ತದೆ.

ಬ್ಯಾಟರಿ ಬ್ಯಾಕ್‌ಅಪ್‌, ಇತರೆ ಸೌಲಭ್ಯಗಳು

ಬ್ಯಾಟರಿ ಬ್ಯಾಕ್‌ಅಪ್‌, ಇತರೆ ಸೌಲಭ್ಯಗಳು

ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.2, GPS/AGPS, ಮತ್ತು USB ಟೈಪ್-C ಪೋರ್ಟ್ ಹೊಂದಿದೆ. ಇದಲ್ಲದೆ ಮ್ಯಾಗ್ನೆಟಿಕ್ ಇಂಡಕ್ಷನ್ ಸೆನ್ಸರ್, ಲೈಟ್ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಆಕ್ಸಿಲೆರೋಮೀಟರ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ನೊಂದಿಗೆ ಬರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ 9i 5G ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಸ್ಟೋರೇಜ್ ಆವೃತ್ತಿಗೆ 13,999ರೂ. ಬೆಲೆ ಹೊಂದಿದೆ. ಇನ್ನು 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 15,999ರೂ. ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಮೆಟಾಲಿಕಾ ಗೋಲ್ಡ್, ರಾಕಿಂಗ್ ಬ್ಲ್ಯಾಕ್ ಮತ್ತು ಸೋಲ್‌ಫುಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Realme 9i 5G First Look: Attractive 5G Smartphone at Budget Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X