ಸದ್ದಿಲ್ಲದೆ Realme C75 ಲಾಂಚ್; 6000mAh ಬ್ಯಾಟರಿ.. 512GB ಸ್ಟೋರೇಜ್.. ಬೆಲೆಯೂ ಕಡಿಮೆ!
ರಿಯಲ್‌ಮಿ ಸದ್ದಿಲ್ಲದೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಇದರ ಬೆಲೆ 10 ಸಾವಿರ ರೂ.ಗಿಂತ ಕಡಿಮೆ ಇದೆ. ಹೌದು, ಕಂಪನಿಯು ಇಂದು ನೂತನ ರಿಯಲ್‌ಮಿ C75 (Realme C75) ಫೋನನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಈ ಮೂಲಕ ತನ್ನ 'C' ಸರಣಿಯನ್ನು ವಿಸ್ತರಿಸಿದೆ. ವಿಶೇಷವೆಂದರೆ, ಈ ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಫೋನಿನಲ್ಲಿ 512GB ಸ್ಟೋರೇಜ್ ಲಭ್ಯವಿದೆ. ಬನ್ನಿ, ಈ ಹೊಸ ಮೊಬೈಲ್‌ನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ರಿಯಲ್‌ಮಿ C75 ಫೋನನ್ನು 8GB ಮತ್ತು 16GB RAM ನೊಂದಿದೆ ಪರಿಚಯಿಸಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಹೆಲಿಯೊ G92 ಮ್ಯಾಕ್ಸ್ ಆಕ್ಟಾಕೋರ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 90Hz ರಿಫ್ರೆಶ್ ದರದೊಂದಿಗೆ 6.72 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಜೊತೆಗೆ IP69 ರೇಟಿಂಗ್, 45W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ರಿಯಲ್‌ಮಿ C75 ಫೋನಿನ ಬೆಲೆ ಮತ್ತು ಲಭ್ಯತೆ
ರಿಯಲ್‌ಮಿ C75 ಮೊಬೈಲ್ ಲೈಟ್ನಿಂಗ್ ಗೋಲ್ಡ್ ಮತ್ತು ಕಪ್ಪು ಬಣ್ಣಗಳಲ್ಲಿ ಬರುತ್ತದೆ. ಫೋನಿನ 8GB + 128GB ಸ್ಟೋರೇಜ್ ರೂಪಾಂತರವನ್ನು 18,900 ರೂ.ಗೆ (USD 223) ಬಿಡುಗಡೆ ಮಾಡಲಾಗಿದೆ. ಭಾರತೀಯ ಕರೆನ್ಸಿಯ ಪ್ರಕಾರ, ಇದರ ಬೆಲೆ 10 ಸಾವಿರ ರೂ.ಗಿಂತ ಕಡಿಮೆ ಇದೆ. ಈಗಾಗಲೇ ಮುಂಗಡ ಬುಕಿಂಗ್ ಪ್ರಾರಂಭವಾಗಿದೆ. ಈ ಫೋನ್ ಡಿಸೆಂಬರ್ 1 ರಿಂದ ವಿಯೆಟ್ನಾಂನಲ್ಲಿ ಮಾರಾಟವಾಗಲಿದೆ. ಇದು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಬರಲಿದೆ.
ರಿಯಲ್‌ಮಿ C75 ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ C75 ಮೊಬೈಲ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಐಪಿಎಸ್ ಎಲ್‌ಸಿಡಿ ಡಿಸ್ಪ್ಲೇಯನ್ನು ಹೊಂದಿದೆ. ಇದು 2400 x 1080 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 90Hz ರಿಫ್ರೆಶ್ ದರ, 80Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 690 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ರಿಯಲ್‌ಮಿ C75 ಫೋನನ್ನು ಮೀಡಿಯಾ ಟೆಕ್ ಹೆಲಿಯೊ G92 ಮ್ಯಾಕ್ಸ್ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G57 MC2 ಜಿಪಿಯು ಹೊಂದಿದೆ. ಈ ಪ್ರೊಸೆಸರ್ ಅನ್ನು 4G ನೆಟ್‌ವರ್ಕ್‌ಗಾಗಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ಹೊಸ ರಿಯಲ್‌ಮಿ C75 ಸ್ಮಾರ್ಟ್‌ಫೋನ್ 8GB + 16GB ಡೈನಾಮಿಕ್ RAM ಹೊಂದಿದೆ. ಈ ಫೋನ್ 128GB, 256GB ಮತ್ತು 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಫೋನಿನ ಸ್ಟೋರೇಜ್ 1TB ವರೆಗೆ ಹೆಚ್ಚಿಸಬಹುದು.

ಕ್ಯಾಮೆರಾ ಸೆಟಪ್
ರಿಯಲ್‌ಮಿ C75 ಮೊಬೈಲ್ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ರಿಯಲ್‌ಮಿ C75 ಫೋನಿನಲ್ಲಿ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ರಿವರ್ಸ್ ಚಾರ್ಜಿಂಗ್ ವೈಶಿಷ್ಟ್ಯವನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ C75 ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಹಾಗೆಯೇ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್, ವೈ-ಫೈ 5, ಬ್ಲೂಟೂತ್ 5.1 ಮತ್ತು 4G LTE ಸಂಪರ್ಕ, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








