ಭಾರತದಲ್ಲಿ Realme 75 5G ಬಿಡುಗಡೆ; ಫೀಚರ್ಸ್ ಮಾತ್ರ ಅದ್ಭುತ.. ಬೆಲೆ ಎಷ್ಟಿದೆ?
ರಿಯಲ್‌ಮಿ ತನ್ನ ಸೈಲೆಂಟ್ ಆಗಿಯೇ ಭಾರತದಲ್ಲಿ ಹೊಸ 5G ಫೋನನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ, ಇದು ಅತ್ಯಂತ ಕೈಗೆಟುಕುವ ಬಜೆಟ್ ವಿಭಾಗಕ್ಕೆ ಸೇರಿದೆ. ಹೌದು, ಕಂಪನಿಯು ನೂತನ ರಿಯಲ್‌ಮಿ C75 5G (Realme 75 5G) ಸ್ಮಾರ್ಟ್‌ಫೋನ್ ಅನ್ನು ಅಧಿಕೃತವಾಗಿ ದೇಶೀಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಮೊಬೈಲ್ ಸ್ಟೈಲಿಶ್ ಲುಕ್, ಶಕ್ತಿಶಾಲಿ ಪ್ರೊಸೆಸರ್, ಅದ್ಭುತ ಕ್ಯಾಮೆರಾ ಸೆಟಪ್ ಮತ್ತು ಬಿಗ್ ಬ್ಯಾಟರಿ ಸೇರಿದಂತೆ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ರಿಲೀಸ್ ಆಗಿದೆ. ಈ ಹೊಸ ರಿಯಲ್‌ಮಿ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.
ರಿಯಲ್‌ಮಿ C75 5G ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಮೀಡಿಯಾ ಟೆಕ್‌ನ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಇದು 6000mAh ದೊಡ್ಡ ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್, IP64 ರೇಟಿಂಗ್, MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕರಣ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ C75 5G ಬೆಲೆ
4GB RAM + 128GB ಬೆಲೆ = 12,999 ರೂ.
6GB RAM + 128GB ಬೆಲೆ = 13,999 ರೂ.
ರಿಯಲ್‌ಮಿ C75 5G ಫೋನ್ ಮಿಡ್‌ನೈಟ್ ಲಿಲಿ, ಪರ್ಪಲ್ ಬ್ಲಾಸಮ್ ಮತ್ತು ಲಿಲಿ ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. 4GB RAM + 128GB ಸ್ಟೋರೇಜ್ ಹೊಂದಿರುವ ರಿಯಲ್‌ಮಿ C75 5G ಫೋನಿನ ಬೆಲೆ 12,999 ರೂ. ಆಗಿದೆ. 6GB RAM + 128GB ಸ್ಟೋರೇಜ್ ರೂಪಾಂತರವು 13,999 ರೂ.ಗೆ ಬಿಡುಗಡೆಯಾಗಿದೆ. ಇದು ಪ್ರಸ್ತುತ ಕಂಪನಿಯ ವೆಬ್‌ಸೈಟ್‌ನಲ್ಲಿ ಖರೀದಿಗೆ ಲಭ್ಯವಿದೆ. ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ರಿಯಾಯಿತಿಯೊಂದಿಗೆ ಫೋನನ್ನು ಖರೀದಿಸಬಹುದು.
ರಿಯಲ್‌ಮಿ C75 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ C75 5G ಸ್ಮಾರ್ಟ್‌ಫೋನ್ 6.67 ಇಂಚಿನ HD+ ಎಲ್‌ಸಿಡಿ ಡಿಸ್ಪ್ಲೇಯೊಂದಿಗೆ ಬಿಡುಗಡೆಯಾಗಿದೆ. ಇದು 1604×720 ಪಿಕ್ಸೆಲ್‌ಗಳ ರೆಸಲ್ಯೂಶನ್, 120Hz ರಿಫ್ರೆಶ್ ದರ, 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಮತ್ತು ಅತ್ಯುತ್ತಮ ಭದ್ರತಾ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಫೋನ್ ಸುಮಾರು 190 ಗ್ರಾಂ ತೂಕ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ C75 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6300 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಸುಧಾರಿತ ವೇಗ ಮತ್ತು ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಪಡೆಯುತ್ತದೆ.
ಸ್ಟೋರೇಜ್ ಆಯ್ಕೆ
ರಿಯಲ್‌ಮಿ C75 5G ಫೋನ್ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ನೀವು 4GB RAM + 128GB ಸ್ಟೋರೇಜ್ ಮತ್ತು 6GB RAM + 128GB ಸ್ಟೋರೇಜ್ ಆಯ್ಕೆಯಲ್ಲಿ ಕೊಳ್ಳಬಹುದು. ಈ ಸ್ಮಾರ್ಟ್‌ಫೋನ್ ಸ್ಟೋರೇಜ್ ವಿಸ್ತರಣಾ ಬೆಂಬಲವನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್ ಬಳಸಲು ಮೈಕ್ರೊ ಎಸ್‌ಡಿ ಕಾರ್ಡ್ ಸ್ಲಾಟ್ ಬೆಂಬಲವನ್ನು ಹೊಂದಿದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ C75 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ನೀವು ಅದ್ಭುತವಾದ ಫೋಟೋಗಳನ್ನು ಕ್ಲಿಕ್ಕಿಸಬಹುದು. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೊನಿನಲ್ಲಿ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಇದಲ್ಲದೆ, ಈ ಫೋನ್ ಎಲ್‌ಇಡಿ ಫ್ಲ್ಯಾಷ್ ಮತ್ತು ಹಲವು ಕ್ಯಾಮೆರಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ C75 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಇದು ದಿನವಿಡೀ ಬ್ಯಾಟರಿ ಬ್ಯಾಕಪ್ ನೀಡುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯವಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ C75 5G ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗೆ IP64 ರೇಟಿಂಗ್ ಪಡೆದಿದೆ. ಈ ಫೋನ್ MIL-STD-810H ಮಿಲಿಟರಿ ದರ್ಜೆಯ ಪ್ರಮಾಣೀಕರಣವನ್ನು ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ವೈ-ಫೈ 802.11 AC, ಬ್ಲೂಟೂತ್ 5.3, ಯುಎಸ್‌ಬಿ ಟೈಪ್ ಸಿ ಪೋರ್ಟ್, ಡ್ಯುಯಲ್ ಸಿಮ್ ಮತ್ತು ಸಿಂಗಲ್ ಸ್ಪೀಕರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








