Home
ಮೊಬೈಲ್

7000 ರಿಯಾಯಿತಿ! ದೊಡ್ಡ ಬ್ಯಾಟರಿ.. ಬಿಗ್ ಸ್ಟೋರೇಜ್‌.. ಈ ಆಫರ್ ಎರಡು ದಿನ ಮಾತ್ರ

ರಿಯಲ್‌ಮಿ ತನ್ನ ಗ್ರಾಹಕರಿಗೆ ದೊಡ್ಡ ಉಡುಗೊರೆ ನೀಡಿದೆ. ನೀವು ಈ ಪವರ್‌ ಫುಲ್ ಫೋನನ್ನು ಬಿಗ್‌ ಡಿಸ್ಕೌಂಟ್‌ನೊಂದಿಗೆ ಖರೀದಿಸಬಹುದು. ಈ ಆಫರ್‌ ಕೇವಲ ಎರಡು ದಿನ (ಜನವರಿ 23) ಮಾತ್ರ ಲಭ್ಯವಿದೆ. ಹೌದು, ರಿಯಲ್‌ಮಿ GT 6T 5G (Realme GT 6T 5G) ಫೋನಿನ ಬೆಲೆ ಭಾರೀ ಇಳಿಕೆಯಾಗಿದೆ. ನೀವು ಈ ಮೊಬೈಲ್ ಖರೀದಿಸಿದರೆ ಬರೋಬ್ಬರಿ 7,000 ರೂ. ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ GT 6T 5G ಫೋನ್‌ ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 512GB ಸ್ಟೋರೇಜ್‌, 5500mAh ಬ್ಯಾಟರಿ ಮತ್ತು 120W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಕಂಪನಿ ಯಾವೆಲ್ಲಾ ಆಫರ್‌ ನೀಡುತ್ತಿದೆ ತಿಳಿಯಲು ಮುಂದೆ ಓದಿ.

7000 ಡಿಸ್ಕೌಂಟ್! ದೊಡ್ಡ ಬ್ಯಾಟರಿ, ಬಿಗ್ ಸ್ಟೋರೇಜ್‌.. ಅದೂ Realme ಫೋನ್‌

ರಿಯಲ್‌ಮಿ GT 6T 5G ವೈಶಿಷ್ಟ್ಯಗಳು

ಡಿಸ್ಪ್ಲೇ ಮತ್ತು ಪ್ರೊಸೆಸರ್‌ ವಿವರ

ರಿಯಲ್‌ಮಿ GT 6T 5G ಫೋನ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2780 x 1264 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 6000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 732 ಜಿಪಿಯು ಸಹ ಹೊಂದಿದೆ. ಈ ಫೋನಿನಲ್ಲಿ 12GB RAM ಮತ್ತು 512GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಮತ್ತು ಬ್ಯಾಟರಿ

ರಿಯಲ್‌ಮಿ GT 6T 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೊನ್ 32 ಮೆಗಾಪಿಕ್ಸೆಲ್ ಸೆಲ್ಫಿಕ್ಯಾಮೆರಾ ಹೊಂದಿದೆ. ಈ ಸ್ಮಾರ್ಟ್‌ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ಬ್ಲೂಟೂತ್ 5.2, ವೈ-ಫೈ 6, ಜಿಪಿಎಸ್, ಯುಎಸ್‌ಬಿ 2.0 ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

7000 ಡಿಸ್ಕೌಂಟ್! ದೊಡ್ಡ ಬ್ಯಾಟರಿ, ಬಿಗ್ ಸ್ಟೋರೇಜ್‌.. ಅದೂ Realme ಫೋನ್‌

ರಿಯಲ್‌ಮಿ GT 6T 5G ಬೆಲೆ ಮತ್ತು ಆಫರ್‌

ರಿಯಲ್‌ಮಿ GT 6T 5G ಮೊಬೈಲ್ ನಾಲ್ಕು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ನೀವು 8GB RAM + 128GB ಸ್ಟೋರೇಜ್, 8GB RAM + 256GB ಸ್ಟೋರೇಜ್, 12GB RAM + 256GB ಸ್ಟೋರೇಜ್, 12GB RAM + 512GB ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು. ಪ್ರಸ್ತುತ, 128GB ಸ್ಟೋರೇಜ್ ಮತ್ತು 512GB ಸ್ಟೋರೇಜ್ ರೂಪಾಂತರಗಳನ್ನು ದೊಡ್ಡ ರಿಯಾಯಿತಿ ಬೆಲೆಯಲ್ಲಿ ಕೊಳ್ಳಬಹುದು.

ರಿಯಲ್‌ಮಿ GT 6T 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 30,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ ರಿಯಾಯಿತಿಯೊಂದಿಗೆ 23,999 ರೂ.ಗೆ ಖರೀದಿಸಬಹುದು. ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆಯನ್ನು 39,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ ನೀವು 32,999 ರೂ.ಗೆ ಕೊಳ್ಳಬಹುದು. ಈ ಆಫರ್‌ ಕೇವಲ ಎರಡು ದಿನ (ಜನವರಿ 23 ರವರೆಗೆ) ಮಾತ್ರ ಲಭ್ಯವಿದೆ. ನೀವು ಈ ಫೋನನ್ನು ಪ್ಲುಮಿಡ್ ಸಿಲ್ವರ್ ಮತ್ತು ರೇಜರ್ ಗ್ರೀನ್ ಬಣ್ಣಗಳಲ್ಲಿ ಖರೀದಿಸಬಹುದು.

Best Mobiles in India

English summary
Realme GT 6T 5G get massive price cut in india: Check new price and specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+