Home
ಮೊಬೈಲ್

ಬಹುನಿರೀಕ್ಷಿತ Realme GT 7 Pro ಲಾಂಚ್; 512GB ಸ್ಟೋರೇಜ್‌.. 3000 ಡಿಸ್ಕೌಂಟ್.. ಬೆಲೆ ಎಷ್ಟು?

ಕಾಯುವಿಕೆ ಮುಗಿಯಿತು! ಬಹುನಿರೀಕ್ಷಿತ ರಿಯಲ್‌ಮಿ ಮೊಬೈಲ್ ಭಾರತಕ್ಕೆ ಲಗ್ಗೆ ಇಟ್ಟಿದೆ. ಹೌದು, ರಿಯಲ್‌ಮಿ (Realme) ಕಂಪನಿಯು ಹೊಸ ರಿಯಲ್‌ಮಿ GT7 ಪ್ರೊ (Realme GT7 Pro) ಫೋನನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆಯೇ, ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ನೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿರುವ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ನೀವು, ಅಮೆಜಾನ್‌ನಲ್ಲಿ ಈ ಫೋನನ್ನು ಖರೀದಿಸಬಹುದು. ಬನ್ನಿ, ಹೊಸ ವಿವೋ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ ದೇಶದ ವಿಶ್ವಾಸಾರ್ಹ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಸಂಸ್ಥೆಯು ಇಂದು ನೂತನ ರಿಯಲ್‌ಮಿ GT7 ಪ್ರೊ ಫೋನನ್ನು ಲೋಕಾರ್ಪಣೆಗೊಳಿಸಿದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ದೊಡ್ಡ ಲಭ್ಯವಿದೆ. ಇದರೊಂದಿಗೆ 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ.

 ಬಹುನಿರೀಕ್ಷಿತ Realme GT 7 Pro ಲಾಂಚ್; 3000 ಡಿಸ್ಕೌಂಟ್.. ಬೆಲೆ ಎಷ್ಟು?

ರಿಯಲ್‌ಮಿ GT7 ಪ್ರೊ ಫೋನಿನ ಬೆಲೆ ಮತ್ತು ಲಭ್ಯತೆ

12GB RAM + 256GB ಸ್ಟೋರೇಜ್ ಬೆಲೆ = 59,999 ರೂ.
16GB RAM + 512GB ಸ್ಟೋರೇಜ್ ಬೆಲೆ = 65,999 ರೂ.

ಕಂಪನಿಯು ರಿಯಲ್‌ಮಿ GT7 ಪ್ರೊ ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. 12GB RAM + 256GB ಸ್ಟೋರೇಜ್ ಬೆಲೆ 59,999 ರೂ. ಆಗಿದೆ. 16GB RAM + 512GB ಸ್ಟೋರೇಜ್ ರೂಪಾಂತರವನ್ನು 65,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಈ ಮೊಬೈಲ್ ನವೆಂಬರ್ 29 ರಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು, ಮಾರ್ಸ್ ಆರೆಂಜ್ ಮತ್ತು ಗ್ಯಾಲಕ್ಸಿ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು.

ಕಂಪನಿಯು ಮೊಬೈಲ್‌ ಖರೀದಿ ಮೇಲೆ 3,000 ರೂ. ಬ್ಯಾಂಕ್ ಕಾರ್ಡ್ ಡಿಸ್ಕೌಂಟ್ ನೀಡುತ್ತದೆ. ನೀವು, ಈ ಫೋನ್ ಮುಂಗಡವಾಗಿ ಬುಕ್ ಮಾಡಿದರೆ, 2 ವರ್ಷಗಳ ವಾರಂಟಿ ಮತ್ತು 1 ವರ್ಷ ಉಚಿತ ಸ್ಕ್ರೀನ್ ರಿಪ್ಲೇಸ್ಮೆಂಟ್ ಪ್ರಯೋಜನ ಪಡೆಯಬಹುದು. ರಿಯಲ್‌ಮಿ GT7 ಪ್ರೊ ಮೊಬೈಲ್ ಕಂಪನಿಯ ವೆಬ್‌ಸೈಟ್, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ಖರೀದಿಗೆ ಲಭ್ಯವಿದೆ.

ರಿಯಲ್‌ಮಿ GT7 ಪ್ರೊ ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ GT7 ಪ್ರೊ ಮೊಬೈಲ್ 6.78 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದು 1.5K ಓಎಲ್‌ಇಡಿ ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2780 x 1264 ಪಿಕ್ಸೆಲ್‌ಗಳ ರೆಸಲ್ಯೂಶನ್‌, 120Hz ರಿಫ್ರೆಶ್ ದರ, 6500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನವನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ರಿಯಲ್‌ಮಿ GT7 ಪ್ರೊ ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್‌ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಪ್ರೊಸೆಸರ್‌ ಅನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 15 ಆಧಾರಿತ OriginOS ನೊಂದಿಗೆ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್‌ ಆಯ್ಕೆ

ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ 12GB RAM + 256GB ಮತ್ತು 16GB RAM + 512GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದು ಡೈನಾಮಿಕ್ RAM ತಂತ್ರಜ್ಞಾನವನ್ನು ಹೊಂದಿದೆ. ನೀವು ಭೌತಿಕ RAM ಜೊತೆಗೆ 28GB RAM ಬಳಸಬಹುದು.

ಕ್ಯಾಮೆರಾ ಸೆಟಪ್

ರಿಯಲ್‌ಮಿ GT7 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಸೋನಿ ಫ್ರಂಟ್ ಕ್ಯಾಮೆರಾ ಇದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ಕಂಪನಿಯು ರಿಯಲ್‌ಮಿ GT7 ಪ್ರೊ ಫೋನನ್ನು 5800mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಕೇವಲ 11 ನಿಮಿಷಗಳಲ್ಲಿ ಶೇ.50 ರಷ್ಟು ಬ್ಯಾಟರಿಯನ್ನು ಚಾರ್ಜ್ ಮಾಡಬಹುದು.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ಮತ್ತು IP68 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ವೈ-ಫೈ, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
Realme GT 7 Pro with Qualcomm Snapdragon 8 Elite launched in India: Check Price, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+