ರಿಯಲ್‌ಮಿ GT ನಿಯೋ 3 ಫಸ್ಟ್ ಲುಕ್; ಪವರ್‌ಫುಲ್ ಚಾರ್ಜಿಂಗ್ ಫೋನ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ GT ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ GT ನಿಯೋ 3 ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 12GB RAM ಆಯ್ಕೆ ನೊಂದಿಗೆ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.

ಹೌದು, ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಪ್ರಿಮಿಯಂ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 120Hz ರೀಫ್ರೇಶ್ ರೇಟ್ ಒಳಗೊಂಡ HDR 10+ ಬೆಂಬಲದ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗಾದರೇ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನಿನ ಫಸ್ಟ್ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 1,000Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR 10+ ಮತ್ತು DC ಡಿಮ್ಮಿಂಗ್ ಅನ್ನು ಬೆಂಬಲಿಸಲಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ಪವರ್ ಯಾವುದು?
ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ರಿಯಲ್‌ಮಿ UI 3.0 ಜೊತೆಗೆ ರನ್ ಆಗುತ್ತದೆ. ಹಾಗೆಯೇ 12 GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಅಧಿಕ RAM ಬಯಸುವ ಗ್ರಾಹಕರಿಗೆ ಈ ಫೋನ್ ಆಕರ್ಷಕ ಎನಿಸಲಿದೆ. ಪ್ರೊಸೆಸರ್ ವೇಗವು ಉತ್ತಮವಾಗಿದ್ದು, ಮಲ್ಟಿಟಾಸ್ಕ್ ಕೆಲಸಗಳು ಸರಾಗವಾಗಿ ನಡೆಯುತ್ತವೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ ಏನು?
ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸನ್ಸಾರ್ ಬೆಂಬಲಿಸಲಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಜೊತೆಗೆ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ವರ್ಗದಲ್ಲಿ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಉತ್ತಮ ಗೊಳಿಸಬಹುದಿತ್ತು.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು?
ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಎರಡು ಬ್ಯಾಟರಿ ಮತ್ತು ಚಾರ್ಜಿಂಗ್ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ 4,500 mAh ಸಾಮರ್ಥ್ಯದ ಬ್ಯಾಟರಿ 150W ಅಲ್ಟ್ರಾಡಾರ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಹಾಗೆಯೇ 5,000 mAh ಸಾಮರ್ಥ್ಯದ ಬ್ಯಾಟರಿಯ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಎಷ್ಟಿದೆ?
ಭಾರತದಲ್ಲಿ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಮಾದರಿಗೆ 36,999ರೂ.ಬೆಲೆ ಹೊಂದಿದೆ. ಆದರೆ 8GB + 256GB ರೂಪಾಂತರದ ಬೆಲೆ 38,999ರೂ. ಆಗಿದೆ. ಹಾಗೆಯೇ ರಿಯಲ್‌ಮಿ GT ನಿಯೋ 3 ಫೋನ್ 150W ರೂಪಾಂತರದ 12GB + 256GB ಮಾದರಿಗೆ 42,999 ರೂ. ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಸ್ಫಾಲ್ಟ್ ಬ್ಲ್ಯಾಕ್, ನೈಟ್ರೋ ಬ್ಲೂ ಮತ್ತು ಸ್ಪ್ರಿಂಟ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.

ಕೊನೆಯ ಮಾತು
ರಿಯಲ್‌ಮಿ GT ನಿಯೋ 3 ಫೋನ್ ಪ್ರಿಮಿಯಂ ಪ್ರೈಸ್‌ಟ್ಯಾಗ್ ಹೊಂದಿದ್ದು, ಹಾಗೆಯೇ ಬಿಗ್ ಡಿಸ್‌ಪ್ಲೇ, ಬಿಗ್ ಬ್ಯಾಟರಿ ಬ್ಯಾಕ್‌ಅಪ್, ಟ್ರಿಪಲ್ ಕ್ಯಾಮೆರಾ ರಚನೆಯಿಂದ ಗಮನ ಸೆಳೆಯುತ್ತದೆ. ಮುಖ್ಯವಾಗಿ ವೇಗವಾಗಿ ಚಾರ್ಜಿಂಗ್ ತಂತ್ರಜ್ಞಾನ ಮತ್ತು ಹೊಸ ಮೀಡಿಯಾಟೆಕ್ ಚಿಪ್ ಪ್ರೊಸೆಸರ್ ಇದರ ಪ್ಲಸ್ ಪಾಯಿಂಟ್ ಎನಿಸಿವೆ. ಇನ್ನು ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಹೆಚ್ಚಿಸಬಹುದಿತ್ತು ಎನಿಸುತ್ತದೆ. ಉಳಿದಂತೆ ಇಂದೊಂದು ಪವರ್‌ಫುಲ್ ಫೋನ್ ಎನ್ನಬಹುದಾಗಿದೆ.


Click it and Unblock the Notifications








