ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಲಾಂಚ್!..50ಎಂಪಿ ಕ್ಯಾಮೆರಾ!

|

ರಿಯಲ್‌ ಮಿ ಸಂಸ್ಥೆಯು ತನ್ನ ಬಹುನಿರೀಕ್ಷಿತ ರಿಯಲ್‌ ಮಿ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಸರಣಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಪ್ರಮುಖ ಹೈಲೈಟ್‌ ಆಗಿದೆ.

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಲಾಂಚ್!..50ಎಂಪಿ ಕ್ಯಾಮೆರಾ!

ಹೌದು, ರಿಯಲ್‌ ಮಿ ಕಂಪನಿಯು ಚೀನಾ ಮಾರುಕಟ್ಟೆಯಲ್ಲಿ ತನ್ನ ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿದೆ. 12GB + 256GB ಇದರೊಂದಿಗೆ ಮೀಡಿಯಾ ಟೆಕ್ Dimensity 8100 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಆಂಡ್ರಾಯ್ಡ್ 12 ಓಎಸ್‌ ಸಪೋರ್ಟ್‌ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6.43 ಇಂಚಿನ ಹೆಚ್‌ಡಿ + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 120Hz ರೀಫ್ರೇಶ್ ರೇಟ್ ಹೊಂದಿದ್ದು, ಸ್ಕ್ರೀನ್‌ನಿಂದ ಬಾಹ್ಯ ಬಾಡಿ ನಡುವಿನ ಅಂತರವು 91.7 ಆಗಿದೆ.

ಪ್ರೊಸೆಸರ್‌ ಯಾವುದು

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌‌ ಮೀಡಿಯಾ ಮೀಡಿಯಾ ಟೆಕ್ Dimensity 8100 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 12GB + 256GB ಆಯ್ಕೆ ಹೊಂದಿದೆ ಜೊತೆಗೆ ಎಸ್‌ಡಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌ ಲಾಂಚ್!..50ಎಂಪಿ ಕ್ಯಾಮೆರಾ!

ತ್ರಿವಳಿ ಕ್ಯಾಮೆರಾ ವಿಶೇಷ

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌‌ ಹಿಂಬದಿಯಲ್ಲಿ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು ಇನ್ನು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿಗಾಗಿ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ GT ನಿಯೋ 3 ಸ್ಮಾರ್ಟ್‌ಫೋನ್‌‌ 4,500 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದರೊಂದಿಗೆ 80W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು?

ರಿಯಲ್‌ಮಿ GT ನಿಯೋ 3 ಫೋನ್ 6GB/128GB ರೂಪಾಂತರಕ್ಕೆ CNY 1,999 (ಭಾರತದಲ್ಲಿ ಸುಮಾರು ರೂ 24,000), 8GB/128GB ಮಾದರಿಗೆ CNY 2,299 (ಭಾರತದಲ್ಲಿ ಅಂದಾಜು ಸುಮಾರು ರೂ 27,500) ಈ ಎಲ್ಲಾ ಮಾದರಿಗಳು 80W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತವೆ.

Best Mobiles in India

Read more about:
English summary
Realme GT Neo 3 with 150W charging SoC launched: Price

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X