Just In
- 13 hrs ago
ನಾಯ್ಸ್ ಬಡ್ಸ್ ಸೋಲೋ ಇಯರ್ಫೋನ್ ಲಾಂಚ್! 36 ಗಂಟೆಗಳ ಪ್ಲೇಬ್ಯಾಕ್ ವಿಶೇಷ!
- 14 hrs ago
ಹೆಚ್ಪಿ ಸಂಸ್ಥೆಯಿಂದ ಮೂರು ಹೊಸ ಲ್ಯಾಪ್ಟಾಪ್ ಬಿಡುಗಡೆ! ವಿಶೇಷತೆ ಏನು?
- 14 hrs ago
ಕಡಿಮೆ ಪ್ರೈಸ್ಟ್ಯಾಗ್ನಲ್ಲಿ ಲಭ್ಯವಿರುವ ಜಿಯೋ ಡೇಟಾ ವೋಚರ್ಗಳು!
- 15 hrs ago
ಭಾರತದ ಮಾರುಕಟ್ಟೆಯಲ್ಲಿ ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್ ಬಿಡುಗಡೆ!
Don't Miss
- Movies
ಗಂಗೂಬಾಯಿ ಟೀಸರ್ ಔಟ್: ಅಲಿಯಾ ಭಟ್ ಹೊಸ ಅವತಾರಕ್ಕೆ ಬಾಲಿವುಡ್ ಫಿದಾ
- News
ಅಮೆರಿಕಾದಲ್ಲಿ ಒಂದೇ ದಿನ 72721 ಜನರಿಗೆ ಕೊರೊನಾವೈರಸ್!
- Lifestyle
ಗುರುವಾರದ ಭವಿಷ್ಯ ಹೇಗಿದೆ ನೋಡಿ
- Automobiles
ಸಿಎನ್ಜಿ ಕಾರು ಮಾರಾಟದಲ್ಲಿ ಹೊಸ ದಾಖಲೆ ಮಾಡಿದ ಮಾರುತಿ ಸುಜುಕಿ
- Sports
ಐಎಸ್ಎಲ್: ಮುಂಬೈ ಗೋಲಿನ ಮಳೆಯಲ್ಲಿ ಮುಳುಗಿದ ಒಡಿಶಾ
- Education
University Of Mysore Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ/ಪ್ರಾಜೆಕ್ಟ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಫೆ. 24ರ ಮಾರುಕಟ್ಟೆ ದರ ಇಲ್ಲಿದೆ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಿಯಲ್‌ಮಿ Narzo 10 ಫಸ್ಟ್ ಲುಕ್: ಬಜೆಟ್ ಪ್ರೈಸ್‌ನಲ್ಲಿ ಆಕರ್ಷಕ ಫೋನ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಚೀನಾ ಮೂಲದ ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ಮಾರುಕಟ್ಟೆಗೆ ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಜೊತೆಗೆ ಕ್ವಾಡ್ ಕ್ಯಾಮೆರಾ ರಚನೆ ಈ ಫೋನಿನ ಪ್ರಮುಖ ಅಟ್ರ್ಯಾಕ್ಷನ್ ಆಗಿದೆ.

ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್ ಒಳಗೊಂಡಿದ್ದು, ಸೆಲ್ಫಿಗಾಗಿ 16ಎಂಪಿ ಸೆನ್ಸಾರ್ ಕ್ಯಾಮೆರಾ ಪಡೆದಿದೆ. ಪ್ರೊಸೆಸರ್‌ಗೆ ಪೂರಕವಾಗಿ ಆಂಡ್ರಾಯ್ಡ್ 10 ಓಎಸ್ ಕಾರ್ಯನಿರ್ವಹಿಸಲಿದ್ದು, 5000mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನಿನ ಆರಂಭಿಕ ಬೆಲೆಯು 11,999ರೂ.ಗಳಾಗಿದೆ. ಬಜೆಟ್ ಬೆಲೆಯಲ್ಲಿ ಗ್ರಾಹಕರನ್ನು ಅಟ್ರ್ಯಾಕ್ಟ್ ಮಾಡಿರುವ ಈ ಫೋನ್ ಫೀಚರ್ಸ್‌ಗಳ ಕಾರ್ಯವೈಖರಿ ಹೇಗಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಆಕರ್ಷಕ ಡಿಸ್‌ಪ್ಲೇ
ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ 720x1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಎಚ್‌ಡಿ ಪ್ಲಸ್ ಆಗಿದ್ದು ಮಿನಿ ಡ್ರಾಪ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಹೊಂದಿದ್ದು, 89.8% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಸ್ಕ್ರೀನ್ 2.5 ಡಿ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್‌ನಿಂದ ಪ್ರೊಟೆಕ್ಷನ್ ಅನ್ನು ಹೊಂದಿದೆ. ವಿಡಿಯೊ ವೀಕ್ಷಣೆಗೆ ಡಿಸ್‌ಪ್ಲೇ ಅತ್ಯುತ್ತಮವಾಗಿದೆ.

ವೇಗದ ಪ್ರೊಸೆಸರ್
ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 SoC ಪ್ರೊಸೆಸರ್ ಹೊಂದಿದ್ದು,ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಇದು ಮಾಲಿ G52GPU ಅನ್ನು ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 4GB RAM ಮತ್ತು 128GB ಇಂಟರ್ ಸ್ಟೊರೇಜ್ ಅನ್ನು ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ. ಪ್ರೊಸೆಸರ್ ಗೇಮಿಂಗ್‌ಗೆ ಪೂರಕವಾಗಿದೆ.

ಕ್ವಾಡ್ ಕ್ಯಾಮೆರಾ
ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ, ಇದು 119 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ.ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಸೆಲ್ಫಿ ಕ್ಯಾಮೆರಾ 30fps ಫ್ರೇಮ್ ರೇಟ್ ನಲ್ಲಿ ಎಚ್‌ಡಿ (720p) ವಿಡಿಯೋ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಬಜೆಟ್ ಬೆಲೆಯಲ್ಲಿ ಬೆಸ್ಟ್ ಕ್ಯಾಮೆರಾ ಆಯ್ಕೆ ಹೊಂದಿದೆ.

ಬಿಗ್ ಬ್ಯಾಟರಿ
ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ, ಅಲ್ಲದೆ ಇದು 18W ಕ್ವಿಕ್ ಚಾರ್ಜ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ.ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ದೈತ್ಯ ಬ್ಯಾಟರಿ ಬಾಳಿಕೆ ಒಳಗೊಂಡಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190