ರಿಯಲ್‌ ಮಿ ನಾರ್ಜೊ 20A ಫಸ್ಟ್‌ ಲುಕ್: ಅಗ್ಗದ ಬೆಲೆಗೆ ಬಿಗ್ ಬ್ಯಾಟರಿ ಸ್ಮಾರ್ಟ್‌ಫೋನ್!

|

ರಿಯಲ್‌ ಮಿ ಸಂಸ್ಥೆಯು ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಸರಣಿಗಳಿಂದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿದೆ. ರಿಯಲ್‌ಮಿ ಸಂಸ್ಥೆಯು ಇತ್ತೀಚಿಗೆ ರಿಯಲ್‌ಮಿ ನಾರ್ಜೊ 20 ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಲಾಂಚ್ ಮಾಡಿದ್ದು, ಗ್ರಾಹಕರ ಗಮನ ಸೆಳೆದಿದೆ. ಈ ಸರಣಿಯ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್ ಅಗ್ಗದ ಪ್ರೈಸ್‌ಟ್ಯಾಗ್‌ ಹೊಂದಿದ್ದು, ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ.

ರಿಯಲ್‌ಮಿ

ಮಾರುಕಟ್ಟೆಗೆ ಲಗ್ಗೆ ಹಾಕಿರುವ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್ ಕಡಿಮೆ ದರದ ಫೋನ್‌ ಆಗಿದ್ದರು ಕೆಲವು ಉತ್ತಮ ಫೀಚರ್ಸ್‌ಗಳನ್ನು ಪಡೆದಿದೆ. ತನ್ನ ವರ್ಗದ ಇತರೆ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ಪೈಪೋಟಿ ನೀಡುವ ಲಕ್ಷಣಗಳನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ವೇಗದ ಪ್ರೊಸೆಸರ್, ಕ್ವಾಡ್ ಕ್ಯಾಮೆರಾ, ಬಿಗ್ ಬ್ಯಾಟರಿ, ಆಕರ್ಷಕ ಡಿಸೈನ್‌ನಂತಹ ಸ್ಪರ್ಧಾತ್ಮಕ ಫೀಚರ್ಸ್‌ಗಳನ್ನು ಪಡೆದಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್ ಫಸ್ಟ್‌ ಲುಕ್ ಹೇಗಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಅನ್ನು ಸಹ ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ವಿಶಾಲ ಡಿಸ್‌ಪ್ಲೇ ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ನಾರ್ಜೊ 20A ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ರಿಯಲ್‌ ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ F /1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ "ರೆಟ್ರೊ" ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ರಿವರ್ಸ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ವೈ-ಫೈ, ಬ್ಲೂಟೂತ್ V5.0, GPS ಮತ್ತು ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ರಿಯಲ್‌ಮಿ ನಾರ್ಜೊ 20A ಸ್ಮಾರ್ಟ್‌ಫೋನ್‌ 3GB RAM + 32GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ ಬೆಲೆ 8,499 ರೂ. ಹಾಗೂ 4GB RAM + 64GB ಸ್ಟೋರೇಜ್ ಆಯ್ಕೆಯ ಬೆಲೆ 9,499. ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಈಗಾಗಲೇ ಫ್ಲಿಪ್‌ಕಾರ್ಟ್ ಮತ್ತು ರಿಯಲ್‌ಮಿ ಡಾಟ್ ಕಾಮ್ ಮೂಲಕ ಖರೀದಿಗೆ ಲಭ್ಯವಾಗಲಿವೆ.

Best Mobiles in India

English summary
Realme Narzo 20A First Impressions Powerful Battery Phone In Budget Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X