ರಿಯಲ್‌ಮಿ ನಾರ್ಜೊ 30 ಪ್ರೊ ಫಸ್ಟ್‌ ಲುಕ್‌: ಬಜೆಟ್‌ ಬೆಲೆಗೆ ಆಕರ್ಷಕ ಕ್ಯಾಮೆರಾ ಫೋನ್!

|

ಜನಪ್ರಿಯ ಮೊಬೈಲ್ ಸಂಸ್ಥೆ ರಿಯಲ್‌ಮಿ ಈಗಾಗಲೇ ಮಾರುಕಟ್ಟೆಯಲ್ಲಿ ಹಲವು ಭಿನ್ನ ಶ್ರೇಣಿಯ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಮೇಲಿಂದ ಮೇಲೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿರುವ ಸಂಸ್ಥೆಯು ಗ್ರಾಹಕರನ್ನು ತನ್ನತ್ತ ಆಕರ್ಷಿಸುತ್ತಿದೆ. ಸಂಸ್ಥೆಯು ನಾರ್ಜೋ ಸರಣಿಯಲ್ಲಿ ಹೊಸದಾಗಿ ಲಾಂಚ್ ಮಾಡಿರುವ 'ರಿಯಲ್‌ಮಿ ನಾರ್ಜೊ 30 ಪ್ರೊ' ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ನಲ್ಲಿ ಗಮನ ಸೆಳೆದಿದೆ.

ರಿಯಲ್‌ಮಿ

ಭಾರತೀಯ ಮಾರುಕಟ್ಟೆಗೆ ಲಗ್ಗೆ ಹಾಕಿರುವ 'ರಿಯಲ್‌ಮಿ ನಾರ್ಜೊ 30 ಪ್ರೊ' ಸ್ಮಾರ್ಟ್‌ಫೋನ್ ಬಜೆಟ್ ಫೋನ್‌ ಆಗಿದ್ದರು ಕೆಲವು ಆಕರ್ಷಕ ಫೀಚರ್ಸ್‌ಗಳನ್ನು ಪಡೆದಿದೆ. ನಾರ್ಜೊ ಸರಣಿಯಲ್ಲಿ ಬಿಡುಗಡೆ ಮಾಡಿದ್ದ ನಾರ್ಜೊ 10 ಹಾಗೂ ನಾರ್ಜೊ 20 ಫೋನ್‌ಗಳು ಆಕರ್ಷಕ ಅನಿಸಿದ್ದವು. ಅವುಗಳ ಮುಂದುವರಿದ ಭಾಗವೇ ಈ ರಿಯಲ್‌ಮಿ ನಾರ್ಜೊ 30 ಪ್ರೊ ಫೋನ್‌. ಇನ್ನು 6GB RAM + 8GB RAM ಆಯ್ಕೆಗಳನ್ನು ಹೊಂದಿರುವ ಈ ಫೋನ್ ಇತರೆ ಆಕರ್ಷಕ ಫೀಚರ್ಸ್‌ಗಳಿಂದ ಗುರುತಿಸಿಕೊಂಡಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 30 ಪ್ರೊ ಸ್ಮಾರ್ಟ್‌ಫೋನಿನ ಮೊದಲ ನೋಟದ ಫಲಿತಾಂಶ ಏನು ಅನ್ನೊದನ್ನು ಮುಂದೆ ತಿಳಿಯೋಣ.

ಗಮನ ಸೆಳೆವ ಡಿಸೈನ್ ಮತ್ತು ಡಿಸ್‌ಪ್ಲೇ

ಗಮನ ಸೆಳೆವ ಡಿಸೈನ್ ಮತ್ತು ಡಿಸ್‌ಪ್ಲೇ

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಗರಿಷ್ಠ 600 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ವೇಗ ಹೇಗಿದೆ

ಪ್ರೊಸೆಸರ್ ವೇಗ ಹೇಗಿದೆ

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 6GB RAM + 64GB ಹಾಗೂ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಈ ಪ್ರೊಸೆಸರ್ ಅಧಿಕ ಡೇಟಾ ಬೇಡುವ ಗೇಮ್‌ಗಳಿಗೆ ಪೂರಕ.

ಟ್ರಿಪಲ್ ರಿಯರ್ ಕ್ಯಾಮೆರಾ

ಟ್ರಿಪಲ್ ರಿಯರ್ ಕ್ಯಾಮೆರಾ

ರಿಯಲ್‌ಮಿ ನಾರ್ಜೊ 30 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಫೋನಿನಲ್ಲಿ ಕ್ವಾಡ್‌ ಕ್ಯಾಮೆರಾ ರಚನೆ ನೀಡಿದ್ದರೇ ಇನ್ನಷ್ಟು ಆಕರ್ಷಕ ಅನಿಸುತ್ತಿತ್ತು. ಉಳಿದಂತೆ ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್‌ನಲ್ಲಿರುವುದು ಪ್ರಮುಖ ಹೈಲೈಟ್‌ ಆಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ರಿಯಲ್‌ಮಿ ನಾರ್ಜೋ 30ಪ್ರೊ 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 30W ಡಾರ್ಟ್‌ ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V5.1 ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಬಜೆಟ್‌ ಬೆಲೆಯಲ್ಲಿ ಅಧಿಕ ಬ್ಯಾಟರಿ ನೀಡಿರುವುದು ಪ್ಲಸ್‌ ಪಾಯಿಂಟ್ ಆಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ರಿಯಲ್‌ಮಿ ನಾರ್ಜೋ 30ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆ 6GB RAM + 64GB ಸ್ಟೋರೇಜ್ ರೂಪಾಂತರಕ್ಕೆ 16,999 ರೂ. ಹಾಗೂ 8GB RAM + 128GB ಸ್ಟೋರೇಜ್ ಮಾದರಿಯು ರೂ. 19,999 ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ವೋರ್ಡ್ ಬ್ಲ್ಯಾಕ್ ಮತ್ತು ಬ್ಲೇಡ್ ಸಿಲ್ವರ್ ಕಲರ್ ಆಯ್ಕೆಗಳಲ್ಲಿ ಲಭ್ಯ.

Best Mobiles in India

English summary
Realme Narzo 30 Pro First Impressions: A Powerful Battery Phone At Budget Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X