Just In
Don't Miss
- News
ನೂಪುರ್ ವಿರುದ್ಧದ ಸುಪ್ರೀಂ ಹೇಳಿಕೆಗೆ ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳ ಆಕ್ಷೇಪ
- Sports
ಈತನ ಹುಚ್ಚುತನದಿಂದ ನಾಲ್ಕನೇ ದಿನ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಮಂಕಾಯಿತು ಎಂದ ಪೀಟರ್ಸನ್!
- Education
SSC CGL Tier 1 2022 Result : ಎಸ್ಎಸ್ಸಿ ಸಿಜಿಎಲ್ ಟಯರ್ 1 ಫಲಿತಾಂಶ ವೀಕ್ಷಿಸುವುದು ಹೇಗೆ ?
- Lifestyle
ನೀವು ಯಾವ ಭಂಗಿಯಲ್ಲಿ ಮಲಗುತ್ತೀರಾ ಅದೇ ಹೇಳುತ್ತೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತಾ!
- Automobiles
ಇಂದಿನಿಂದ ಸ್ಕಾರ್ಪಿಯೋ-ಎನ್ ಕಾರು ಮಾದರಿಯ ಟೆಸ್ಟ್ ಡ್ರೈವ್ ಆರಂಭಿಸಿದ ಮಹೀಂದ್ರಾ
- Movies
'ಸ್ಮೋಕಿಂಗ್ ಕಾಳಿ' ಪೋಸ್ಟರ್ ತೆಗೆದುಹಾಕಲು ಕೆನಡಾದ ಭಾರತೀಯ ಹೈಕಮಿಷನ್ ಕೋರಿಕೆ!
- Finance
ಎಲ್ಐಸಿ ಷೇರು ಖರೀದಿಸಲು ಮೋತಿಲಾಲ್ ಓಸ್ವಾಲ್ ಸಲಹೆ
- Travel
ಸೂರ್ಯ, ಅಲೆಗಳು ಮತ್ತು ಮರಳು ಇವುಗಳ ಸಮ್ಮಿಲನ ಕಡಲತೀರದ ಪಟ್ಟಣ - ಮಲ್ಪೆ
ರಿಯಲ್‌ಮಿ ನಾರ್ಜೊ 50 ಪ್ರೊ 5G ಫಸ್ಟ್ ಲುಕ್: ಮೀಡ್‌ರೇಂಜ್‌ನಲ್ಲಿ ಆಕರ್ಷಕ ಗೇಮಿಂಗ್ ಫೋನ್!
ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ ನಾರ್ಜೋ ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ ನಾರ್ಜೊ 50 ಪ್ರೊ 5G ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 8GB RAM ಆಯ್ಕೆ ನೊಂದಿಗೆ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.

ಹೌದು, ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್ ಪ್ರಿಮಿಯಂ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 90Hz ರೀಫ್ರೇಶ್ ರೇಟ್ ಒಳಗೊಂಡ HDR 10+ ಬೆಂಬಲದ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಮೀಡಿಯಾ ಟೆಕ್ ಡೈಮೆನ್ಸಿಟಿ 920 5G ಪ್ರೊಸೆಸರ್ ಕಾರ್ಯ ನಿರ್ವಹಿಸಲಿದ್ದು, ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ 50 5G ಸ್ಮಾರ್ಟ್‌ಫೋನಿನ ಫಸ್ಟ್ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗಿದೆ?
ರಿಯಲ್‌ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್ ರಿಯಲ್‌ಮಿ ನಾರ್ಜೊ 50 ಪ್ರೊ ಫೋನ್ 90Hz ರಿಫ್ರೆಶ್ ದರದೊಂದಿಗೆ 6.4 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಅನ್ನು ಒಳಗೊಂಡಿದ್ದು, 360Hz ಟಚ್ ಸ್ಯಾಂಪ್ಲಿಂಗ್ ದರ ಪಡೆದಿದೆ. ಅಲ್ಲದೇ ಇದು ಪಂಚ್-ಹೋಲ್ ವಿನ್ಯಾಸ ಹೊಂದಿದ್ದು, FHD+ OLED ಡಿಸ್ಪ್ಲೇಯನ್ನು ಹೊಂದಿದೆ. ಹೆಚ್ಚು ಆಸಕ್ತಿದಾಯಕ ವಿಷಯವೆಂದರೆ ಫೋನ್ ಆಪ್ಟಿಕಲ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ.ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್ ಪವರ್ ಯಾವುದು?
ರಿಯಲ್‌ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್ ಹೊಂದಿದೆ. ಹಾಗೆಯೇ ಈ ಫೋನ್ 8GB ಯ RAM, 5GB ವರ್ಚುವಲ್ RAM ಮತ್ತು 128GB ಯ ಸ್ಟೋರೇಜ್ ಸ್ಥಳದೊಂದಿಗೆ ಸಂಯೋಜಿಸಲ್ಪಟ್ಟಿದೆ. ಹಾಗೆಯೇ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಅಧಿಕ RAM ಬಯಸುವ ಗ್ರಾಹಕರಿಗೆ ಈ ಫೋನ್ ಆಕರ್ಷಕ ಎನಿಸಲಿದೆ. ಪ್ರೊಸೆಸರ್ ವೇಗವು ಉತ್ತಮವಾಗಿದ್ದು, ಮಲ್ಟಿಟಾಸ್ಕ್ ಕೆಲಸಗಳು ಸರಾಗವಾಗಿ ನಡೆಯುತ್ತವೆ.

ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ ಏನು?
ರಿಯಲ್‌ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಒಳಗೊಂಡಿದೆ. 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ವರ್ಗದಲ್ಲಿ ಕ್ಯಾಮೆರಾ ಸೆನ್ಸಾರ್ ಇನ್ನಷ್ಟು ಉತ್ತಮ ಗೊಳಿಸಬಹುದಿತ್ತು.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳೆನು?
ರಿಯಲ್‌ಮಿ ನಾರ್ಜೊ 50 ಪ್ರೊ 5G ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯ 33W ಡಾರ್ಟ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಹಾಗೆಯೇ ಈ ಫೋನ್ Dolby Atmos ಗೆ ಬೆಂಬಲದೊಂದಿಗೆ ಸ್ಟಿರಿಯೊ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ ಮತ್ತು ಸಾಧನವು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ.

ಬೆಲೆ ಎಷ್ಟಿದೆ?
ರಿಯಲ್‌ಮಿ ನಾರ್ಜೊ 50 ಪ್ರೊ 5G ಫೋನ್ 6 + 128 GB ಬೇಸ್ ವೇರಿಯಂಟ್ ದರವು 19,999 ರೂ. ಆಗಿದೆ. ಅದೇ ರೀತಿ 8 + 128 GB ವೇರಿಯಂಟ್ ಬೆಲೆ 21,999 ರೂ. ಆಗಿದೆ. ಇನ್ನು ಈ ಫೋನ್ ಈಗಾಗಲೇ ಅಮೆಜಾನ್ ತಾಣದಲ್ಲಿ ಫಸ್ಟ್ ಸೇಲ್ ಕಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086