Realme: ನಾಳೆ ಹೊಸ 5G ಫೋನ್ ಸೇಲ್: ಕಡಿಮೆ ಬೆಲೆ.. ಜೊತೆಗೆ 2,000 ಡಿಸ್ಕೌಂಟ್!
ರಿಯಲ್‌ಮಿ ಕಂಪನಿಯು ಇತ್ತೀಚೆಗೆ ರಿಯಲ್‌ಮಿ ನಾರ್ಜೊ 70 ಟರ್ಬೊ 5G (Realme Narzo 70 Turbo 5G) ಫೋನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಗೇಮಿಂಗ್ ಪ್ರಿಯರಿಗಾಗಿ ಈ ಫೋನನ್ನು ವಿನ್ಯಾಸಗೊಳಿಸಲಾಗಿದೆ. ಇದು ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಂದಹಾಗೆ, ಈ ಫೋನ್ ನಾಳೆ (ಸೆಪ್ಟೆಂಬರ್ 16) ಮಧ್ಯಾಹ್ನ 12 ಗಂಟೆಗೆ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಹಾಗಿದ್ರೆ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ ಬನ್ನಿ.
ಕಂಪನಿಯು ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನನ್ನು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟ ಮಾಡಲಿದೆ. ಈ ಫೋನ್ MediaTek Dimensity 7300 Energy ಚಿಪ್‌ಸೆಟ್ ಅನ್ನು ಹೊಂದಿದೆ. ಈ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾದೊಂದಿಗೆ ಡ್ಯುಯಲ್ ಕ್ಯಾಮೆರಾ ಸೆಟಪ್ ಒಳಗೊಂಡಿದೆ. 5000mAh ಸಾಮರ್ಥ್ಯದ ಬ್ಯಾಟರಿ, 45 ವ್ಯಾಟ್ ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಜ್ಜಾಗಿದೆ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಬೆಲೆ ಮತ್ತು ಆಫರ್‌ಗಳು
6GB + 128GB ಸ್ಟೋರೇಜ್ ಬೆಲೆ = 16,999 ರೂ.
8GB + 128GB ಸ್ಟೋರೇಜ್ ಬೆಲೆ = 17,999 ರೂ.
12GB + 256GB ಸ್ಟೋರೇಜ್ ಬೆಲೆ = 20,999 ರೂ.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ ಟರ್ಬೊ ಹಳದಿ, ಟರ್ಬೊ ಪರ್ಪಲ್, ಟರ್ಬೊ ಗ್ರೀನ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಈ ಫೋನನ್ನು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ನೀವು ಖರೀದಿಸಬಹುದು. ನೀವು ಮೊದಲ ದಿನವೇ ಈ ಫೋನ್ ಖರೀದಿಸಿದರೆ 2,000 ರೂಪಾಯಿಗಳ ತ್ವರಿತ ಕೂಪನ್ ರಿಯಾಯಿತಿ ಸಿಗುತ್ತದೆ.
ಈ ರಿಯಾಯಿತಿಯೊಂದಿಗೆ ಮೂಲ ಮಾದರಿಯು 14,999 ರೂ.ಗೆ ಲಭ್ಯವಿರಲಿದೆ. ಮಧ್ಯಮ ಮಾದರಿ 15,999 ರೂ. ಮತ್ತು ಉನ್ನತ ಮಾದರಿಯನ್ನು 18,999 ರೂ.ಗಳ ಬೆಲೆಯಲ್ಲಿ ಖರೀದಿಸಬಹುದು. ಈ ಪೋನ್ ನಾಳೆಯಿಂದ (ಸೆ.16) ರಂದು ಮಧ್ಯಾಹ್ನ 12 ಗಂಟೆಗೆ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೇಜಾನ್, realme.com ಮತ್ತು ಇತರ ಚಿಲ್ಲರೆ ಮಳಿಗೆಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನಿನ ವೈಶಿಷ್ಟ್ಯಗಳು
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ 120 Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ Samsung E4 OLED ಡಿಸ್ಪ್ಲೇಯನ್ನು ಹೊಂದಿದೆ. ಇದು 180Hz ಟಚ್ ಸ್ಯಾಂಪ್ಲಿಂಗ್ ದರ, 600 ನಿಟ್ಸ್ ಸರಾಸರಿ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು AG DT Star 2 ಗಾಜಿನ ರಕ್ಷಣೆಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ 5G 4nm ಚಿಪ್‌ಸೆಟ್ ಹೊಂದಿದೆ. Android 14 ಆಧಾರಿತ Realme UI 5.0ನಲ್ಲಿ ಕಾರ್ಯನಿರ್ವಹಿಸುತ್ತದೆ.
5,000mAh ಬ್ಯಾಟರಿ, 50MP ಕ್ಯಾಮೆರಾ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು F1.8 ಅಪರ್ಚರ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಇದು 2 ಮೆಗಾಪಿಕ್ಸೆಲ್ f/2.4 ಅಪರ್ಚರ್ ಲೆನ್ಸ್‌ನ ಬೆಂಬಲವನ್ನು ಪಡೆಯುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ. ಈ ಫೋನ್ 45 ವ್ಯಾಟ್ ಅಲ್ಟ್ರಾ ಫಾಸ್ಟ್ ಚಾರ್ಜಿಂಗ್‌ನೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಇತರೆ ವೈಶಿಷ್ಟ್ಯಗಳಲ್ಲಿ ನೂತನ ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ Wi-Fi 6, ಬ್ಲೂಟೂತ್ 5.4, ನೀರು ನಿರೋಧಕ IP65 ರೇಟಿಂಗ್, ಮಳೆ ನೀರಿನ ಟಚ್ ವೈಶಿಷ್ಟ್ಯ, ಡ್ಯುಯಲ್ ಸ್ಟಿರಿಯೊ, ಸ್ಪೀಕರ್, ಏರ್ ಮತ್ತು ಗೆಸ್ಚರ್, ಫ್ಲ್ಯಾಷ್ ಕ್ಯಾಪ್ಸುಲ್, ರೀಡಿಂಗ್ ಮೋಡ್ ಮತ್ತು ಇನ್ನಿತರ ಎಐ ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








