Realme: ಕೇವಲ 17,999 ಸಾಕು! 6000mAh ಬ್ಯಾಟರಿ.. ಅಂಡರ್ ವಾಟರ್ ಕ್ಯಾಮೆರಾ.. ಯಾವ ಫೋನ್?
ರಿಯಲ್‌ಮಿ ಇತ್ತೀಚೆಗೆ ಭಾರತದಲ್ಲಿ ಎರಡು ಹೊಸ 5G ಫೋನ್‌ಗಳನ್ನು ಬಿಡುಗಡೆ ಮಾಡಿತ್ತು. ಇವುಗಳು ರಿಯಲ್‌ಮಿ ನಾರ್ಜೊ 80x 5G (realme Narzo 80x 5G) ಮತ್ತು ರಿಯಲ್‌ಮಿ ನಾರ್ಜೊ 80 ಪ್ರೊ 5G (Realme Narzo 80 Pro 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಕಂಪನಿಯು ಈ ಫೋನ್‌ಗಳನ್ನು ತನ್ನ 'ನಾರ್ಜೊ' ಸರಣಿಯ ಅಡಿಯಲ್ಲಿ ಪರಿಚಯಿಸಿದೆ. ಅಂದಹಾಗೆ, ರಿಯಲ್‌ಮಿ ನಾರ್ಜೊ 80 ಪ್ರೊ ಮೊಬೈಲ್ ಇಂದಿನಿಂದ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ ನಾರ್ಜೊ 80 ಪ್ರೊ 5G ಫೋನಿನ ವಿಶೇಷತೆಗಳೆಂದರೆ, ಇದು 6.77 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 12GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 80W ಅಲ್ಟ್ರಾ ಚಾರ್ಜಿಂಗ್ ಒಳಗೊಂಡಿದೆ. ಈ ಫೋನನ್ನು ಮಧ್ಯಮ ಶ್ರೇಣಿಯ ಬಜೆಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನೀವು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು.

ರಿಯಲ್‌ಮಿ ನಾರ್ಜೊ 80 ಪ್ರೊ 5G ವೈಶಿಷ್ಟ್ಯಗಳು
ರಿಯಲ್‌ಮಿ ನಾರ್ಜೊ 80 ಪ್ರೊ 5G ಮೊಬೈಲ್ 6.77 ಇಂಚಿನ ಫುಲ್ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಈ ಸ್ಕ್ರೀನ್ 4500 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಈ ರಿಯಲ್‌ಮಿ 5G ಫೋನಿನಲ್ಲಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ತಂತ್ರಜ್ಞಾನ ಸಹ ಲಭ್ಯವಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7400 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾಗಿದೆ. ಉತ್ತಮ ಕಾರ್ಯಕ್ಷಮತೆ ಮತ್ತು ವಿದ್ಯುತ್ ದಕ್ಷತೆಯನ್ನು ಒದಗಿಸುತ್ತದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ realme UI 6.0 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಮೊಬೈಲ್, ಮಾಲಿ G615 MC2 ಜಿಪಿಯು ಸಹ ಹೊಂದಿದೆ.
ರಿಯಲ್‌ಮಿ ನಾರ್ಜೊ 80 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ರಿಯಲ್‌ಮಿ ಮೊಬೈಲ್ 6,000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ.

ರಿಯಲ್‌ಮಿ ನಾರ್ಜೊ 80 ಪ್ರೊ 5G ಬೆಲೆ ಮತ್ತು ಆಫರ್
ರಿಯಲ್‌ಮಿ ನಾರ್ಜೊ 80 ಪ್ರೊ 5G ಫೋನಿನ 8GB RAM + 128GB ಸ್ಟೋರೇಜ್ ಬೆಲೆ 19,999 ರೂ. ಆಗಿದೆ. 8GB RAM + 256GB ಸ್ಟೋರೇಜ್ ರೂಪಾಂತರವನ್ನು 21,499 ರೂ.ಗೆ ಬಿಡುಗಡೆ ಮಾಡಲಾಗಿದೆ. ಹಾಗೆಯೇ ಟಾಪ್ ವೇರಿಯಂಟ್ 12GB RAM + 256GB ಸ್ಟೋರೇಜ್ 23,499 ರೂ. ಬೆಲೆಗೆ ಮಾರಾಟವಾಗುತ್ತಿದೆ. ಕಂಪನಿಯು ಆರಂಭಿಕ ಮಾರಾಟದ ಪ್ರಯುಕ್ತ 2,000 ರೂ. ತ್ವರಿತ ಕೂಪನ್ ರಿಯಾಯಿತಿ ಘೋಷಿಸಿದೆ. ನೀವು ಈ ರಿಯಾಯಿತಿಯೊಂದಿಗೆ, ಈ ಫೋನನ್ನು ಕ್ರಮವಾಗಿ 17,999 ರೂ., 19,499 ರೂ. ಮತ್ತು 21,499 ರೂ.ಗೆ ಖರೀದಿಸಬಹುದು. ಇದು ಅಮೆಜಾನ್ ಮತ್ತು ರಿಯಲ್‌ಮಿ ಅಧಿಕೃತ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯವಿದೆ.


Click it and Unblock the Notifications








