ಹೊಸ Realme P2 Pro 5G ಫೋನಿಗೆ ನೇರ ಪೈಪೋಟಿ ನೀಡುವ ಫೋನ್‌ಗಳು ಇಲ್ಲಿವೆ ನೋಡಿ!
ಪ್ರಮುಖ ಮೊಬೈಲ್ ಸಂಸ್ಥೆಗಳಲ್ಲಿ ಒಂದೆನಿಸಿರುವ ರಿಯಲ್‌ಮಿ (Realme) ದೇಶಿಯ ಮಾರುಕಟ್ಟೆಯಲ್ಲಿ ಹೊಸದಾಗಿ ರಿಯಲ್‌ಮಿ P2 ಪ್ರೊ 5G (realme P2 Pro 5G) ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹೊಸ ರಿಯಲ್‌ಮಿ P2 ಪ್ರೊ 5G (realme P2 Pro 5G) ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ನಾಳೆ (ಸೆಪ್ಟೆಂಬರ್ 26 ರಂದು) ಫಸ್ಟ್ ಸೇಲ್ ಪ್ರಾರಂಭ ಮಾಡಲಿದೆ. ಇದು ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಮೊಬೈಲ್ ಪ್ರಿಯರನ್ನು ಸೆಳೆದಿದೆ. ಅದಾಗ್ಯೂ, ನಿಮಗೆ ರಿಯಲ್‌ಮಿ P2 ಪ್ರೊ 5G ಮೊಬೈಲ್‌ಗೆ ಸಮಾನವಾದ ಇತರೆ ಪರ್ಯಾಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುತ್ತವೆ.
ಹೌದು, ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಮೊಬೈಲ್‌ಗಳಿಗೆ ಅಧಿಕ ಡಿಮ್ಯಾಂಡ್ ಇದೆ. ಈ ನಿಟ್ಟಿನಲ್ಲಿ ಮೊಬೈಲ್ ಸಂಸ್ಥೆಗಳು ಬಜೆಟ್ ವಿಭಾಗದಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತ ಸಾಗಿವೆ. ಈ ಸಾಲಿಗೆ ರಿಯಲ್‌ಮಿಯ ಹೊಸ ರಿಯಲ್‌ಮಿ P2 ಪ್ರೊ 5G (realme P2 Pro 5G) ಕೂಡಾ ಸೇರ್ಪಡೆ ಆಗಿದೆ. ಆದರೆ ಮಾರುಕಟ್ಟೆಯಲ್ಲಿ ಇದಕ್ಕೆ ನೇರ ಸ್ಪರ್ಧೆ ಒಡ್ಡುವ ಇತರೆ ಪರ್ಯಾಯ ಮೊಬೈಲ್‌ಗಳ ಆಯ್ಕೆ ಸಹ ಗ್ರಾಹಕರಿಗೆ ಲಭ್ಯ ಇವೆ. ಹಾಗಾದರೇ ರಿಯಲ್‌ಮಿ P2 ಪ್ರೊ 5G ಫೋನ್ ಪರ್ಯಾಯ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ T3 ಪ್ರೊ 5G ಫೋನ್
ವಿವೋ T3 ಪ್ರೊ 5G ಮೊಬೈಲ್ 6.67 ಇಂಚಿನ 3D ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಸಹ ಹೊಂದಿದೆ. ಹಾಗೆಯೇ ಈ ಮೊಬೈಲ್ ಸ್ನಾಪ್‌ಡ್ರಾಗನ್ 7 ಜೆನ್ 3 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಸಹ ಪಡೆದಿದೆ.
ಇನ್ನು ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಇನ್ನು ಇದರ ಫಸ್ಟ್ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 80W ಫಾಸ್ಟ್ ಚಾರ್ಜಿಂಗ್ ಬೆಂಬಲ ಸಹ ಇದೆ.
ಮೊಟೊರೊಲಾ ಎಡ್ಜ್ 50 ನಿಯೋ ಫೋನ್
ಮೊಟೊರೊಲಾ ಎಡ್ಜ್ 50 ನಿಯೋ ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಅಲ್ಲದೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಸಹ ಪಡೆದಿದೆ.
ಹಾಗೆಯೇ ಈ ಮೊಬೈಲ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇದಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ.
ಐಕ್ಯೂ Z9s ಫೋನ್
ಐಕ್ಯೂ Z9s (iQOO Z9s) ಮೊಬೈಲ್ 6.67 ಇಂಚಿನ ಡಿಸ್‌ಪ್ಲೇ AMOLED ಡಿಸ್‌ಪ್ಲೇ ಪಡೆದಿದ್ದು, ಇದರೊಂದಿಗೆ 120Hz ರಿಫ್ರೆಶ್ ರೇಟ್ ಸಪೋರ್ಟ್ ಇದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಚಿಪ್‌ಸೆಟ್ ಪ್ರೊಸೆಸರ್ ಪವರ್ ಸೌಲಭ್ಯ ಇದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಪಡೆದಿದೆ.
ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿ ಇದೆ. ಇದರೊಂದಿಗೆ 5,500 mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, 44W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಹೊಂದಿದೆ.


Click it and Unblock the Notifications








