Home
ಮೊಬೈಲ್

Realme: 6000mAh ಬ್ಯಾಟರಿ.. 50MP ಕ್ಯಾಮೆರಾದೊಂದಿಗೆ ಬಂತು ಹೊಸ 5G ಫೋನ್: ಯಾವುದು? ಹೇಗಿವೆ ಫೀಚರ್ಸ್

ಬಹುನಿರೀಕ್ಷಿತ ರಿಯಲ್‌ಮಿ P3 5G (Realme P3 5G) ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆಯಾಗಿದೆ. ರಿಯಲ್‌ಮಿ ತನ್ನ 'P' ಸರಣಿಯಲ್ಲಿ ಈ ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಹೌದು, ಕಂಪನಿಯು ಇಂದು ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಅಧಿಕೃತವಾಗಿ ಅನಾವರಣಗೊಳಿಸಿದೆ. ಈ ಪೈಕಿ ರಿಯಲ್‌ಮಿ P3 5G ಮೊಬೈಲ್ ದೊಡ್ಡ ಬ್ಯಾಟರಿ ಮತ್ತು ಉತ್ತಮ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಕಂಪನಿಯು ಈ ಫೋನನ್ನು 15,000 ರೂ. ಬಜೆಟ್‌ ಒಳಗಡೆ ಲಭ್ಯಗೊಳಿಸಿದೆ. ಈ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ರಿಯಲ್‌ಮಿ P3 5G ಮೊಬೈಲ್ ಮೂರು ಸ್ಟೋರೇಜ್‌ ರೂಪಾಂತರಗಳಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ ಪಡೆದಿರುವ ಭಾರತದ ಮೊದಲ ಸ್ಮಾರ್ಟ್‌ಫೋನ್ ಇದಾಗಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 8GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ಹೊಸ Realme P3 5G ಲಾಂಚ್;  6000mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ನೋಡಿ

ರಿಯಲ್‌ಮಿ P3 5G ಬೆಲೆ ಮತ್ತು ಆಫರ್

6GB RAM + 128GB ಸ್ಟೋರೇಜ್ ಬೆಲೆ = 16,999 ರೂ.
8GB RAM + 128GB ಸ್ಟೋರೇಜ್ ಬೆಲೆ = 17,999 ರೂ.
8GB RAM + 256GB ಸ್ಟೋರೇಜ್ ಬೆಲೆ = 19,999 ರೂ.

ರಿಯಲ್‌ಮಿ P3 5G ಮೊಬೈಲ್ 16,999 ರೂ.ಗಳ ಆರಂಭಿಕ ಬೆಲೆ ಹೊಂದಿದೆ. ಮಾರ್ಚ್ 26 ರಂದು ಮಧ್ಯಾಹ್ನ 12 ಗಂಟೆಯಿಂದ ಕಂಪನಿಯ ಅಧಿಕೃತ ವೆಬ್‌ಸೈಟ್ (realme.com), ರಿಯಲ್‌ಮಿ ಸ್ಟೋರ್ ಆಪ್, ಫ್ಲಿಪ್‌ಕಾರ್ಟ್ (Flipkart) ಮೂಲಕ ಈ ಫೋನ್ ತನ್ನ ಮಾರಾಟ ಪ್ರಾರಂಭಿಸಲಿದೆ. ಮಾರ್ಚ್ 19 ರಂದು ಸಂಜೆ 6 ರಿಂದ ರಾತ್ರಿ 10 ರವರೆಗೆ ಮೊದಲ ಮಾರಾಟ ನಡೆಯಲಿದೆ. ನೀವು 2,000 ರೂ. ಬ್ಯಾಂಕ್ ಆಫರ್ ಪಡೆಯಬಹುದು. ಹಾಗೆಯೇ ರಿಯಲ್‌ಮಿ ಹಳೆಯ ಗ್ರಾಹಕರಿಗೆ ಹೆಚ್ಚುವರಿ 500 ರೂ. ರಿಯಾಯಿತಿ ಸಿಗುತ್ತದೆ. ಈ ಮೊಬೈಲ್ ಸ್ಪೇಸ್ ಸಿಲ್ವರ್, ಕಾಮೆಟ್ ಗ್ರೇ ಮತ್ತು ನೆಬ್ಯುಲಾ ಪಿಂಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ರಿಯಲ್‌ಮಿ P3 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ P3 5G ಮೊಬೈಲ್ 6.67 ಇಂಚಿನ ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 × 1080 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1500Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 2000 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಬರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ಮಾಡುತ್ತದೆ.ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 810 ಜಿಪಿಯು ಒಳಗೊಂಡಿದೆ. ಈ ಫೋನ್ 6GB RAM + 8GB RAM ಹೊಂದಿದೆ. ಇದರಲ್ಲಿ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಹೊಸ Realme P3 5G ಲಾಂಚ್;  6000mAh ಬ್ಯಾಟರಿ, 50MP ಕ್ಯಾಮೆರಾ.. ಬೆಲೆ ನೋಡಿ

ಕ್ಯಾಮೆರಾ ಸೆಟಪ್

ರಿಯಲ್‌ಮಿ P3 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಅಳವಡಿಸಲಾಗಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನಿನಲ್ಲಿ 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ P3 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳು ಲಭ್ಯವಿದೆ. ಇದು ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Take a Poll

Best Mobiles in India

English summary
realme P3 5G with Snapdragon 6 Gen 4, 6000mAh battery launched in India: check price, specifications, features and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+