ಬಂತು ಹೊಸ Realme ಫೋನ್; 6000mAh ಬ್ಯಾಟರಿ.. 50MP ಕ್ಯಾಮೆರಾ.. 2500 ರಿಯಾಯಿತಿ; ಬೆಲೆ ಎಷ್ಟು?
ರಿಯಲ್‌ಮಿ ಕಂಪನಿಯು ಹೊಸ ಫೋನನ್ನು ಬಿಡುಗಡೆ ಮಾಡಿದೆ. ಈ ಮೂಲಕ ಭಾರತದಲ್ಲಿ ತನ್ನ 'P' ಸರಣಿಯನ್ನು ವಿಸ್ತರಿಸಿದೆ. ಹೌದು, ಬಹುನಿರೀಕ್ಷಿತ ರಿಯಲ್‌ಮಿ P3 5G (Realme P3 5G) ಸ್ಮಾರ್ಟ್‌ಫೋನ್ ಅಧಿಕೃತವಾಗಿ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದು ದೊಡ್ಡ ಬ್ಯಾಟರಿ ಮತ್ತು ಉತ್ತಮ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಕಂಪನಿಯು ಈ ಫೋನನ್ನು 20,000 ರೂ. ಬಜೆಟ್ ಒಳಗಡೆ ಪರಿಚಯಿಸಲಾಗಿದೆ. ಈ ಮೊಬೈಲ್‌ನ ಬೆಲೆ, ಲಭ್ಯ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ರಿಯಲ್‌ಮಿ P3 5G ಗೇಮಿಂಗ್ ಮತ್ತು ಸಂಪರ್ಕಕ್ಕಾಗಿ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಬರುತ್ತದೆ. ಈ ಫೋನಿನ ವಿಶೇಷತೆಗಳನ್ನು ನೋಡುವುದಾದರೆ, ಈ ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 4 SoC ಪ್ರೊಸೆಸರ್ ಹೊಂದಿರುವ ಭಾರತದ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಇದು 6050mm² ಏರೋಸ್ಪೇಸ್ ಗ್ರೇಡ್ ಕೂಲಿಂಗ್ ವ್ಯವಸ್ಥೆಯನ್ನು ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 6.67 ಇಂಚಿನ ಡಿಸ್ಪ್ಲೇ, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಅತ್ಯುತ್ತಮ ಗೇಮಿಂಗ್ ವೈಶಿಷ್ಟ್ಯಗಳು
ರಿಯಲ್‌ಮಿ P3 5G ಫೋನ್ ಜಿಟಿ ಬೂಸ್ಟ್ ಹೊಂದಿದೆ. ಇದು ಎಐ (AI) ಮೋಷನ್ ಕಂಟ್ರೋಲ್ ಮತ್ತು ಎಐ ಅಲ್ಟ್ರಾ ಟಚ್ ಕಂಟ್ರೋಲ್ ಸೇರಿದಂತೆ ಹಲವು ಎಐ ಚಾಲಿತ ವರ್ಧನೆಗಳನ್ನು ಒಳಗೊಂಡಿದೆ. ಈ ವೈಶಿಷ್ಟ್ಯಗಳು ಗೇಮಿಂಗ್ ಮತ್ತು ಬಳಕೆದಾರರ ಅನುಭವವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಎಐ ಅಲ್ಟ್ರಾ ಟಚ್ ಕಂಟ್ರೋಲ್ ಸ್ಪರ್ಶ ಪ್ರತಿಕ್ರಿಯೆಯನ್ನು ಅತ್ಯುತ್ತಮವಾಗಿಸುತ್ತದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.
ರಿಯಲ್‌ಮಿ P3 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,400 × 1,080 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1500Hz ವರೆಗೆ ಟಚ್ ಸ್ಯಾಂಪ್ಲಿಂಗ್ ದರ ಮತ್ತು 2,000 ನೀಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ P3 5G ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 4 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ ಯುಐ 6.0 ಜೊತೆಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 810 ಜಿಪಿಯು ಸಹ ಹೊಂದಿದೆ.
ಸ್ಟೋರೇಜ್ ಆಯ್ಕೆ
ರಿಯಲ್‌ಮಿ P3 5G ಫೋನ್ 6GB RAM ಮತ್ತು 8GB RAM ನೊಂದಿಗೆ ಬರುತ್ತದೆ. ಇದರೊಂದಿಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ P3 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಶ್‌ನೊಂದಿಗೆ ಬರುತ್ತದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ P3 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನಿನಲ್ಲಿ 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ P3 5G ಫೋನ್ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಎನ್‌ಎಫ್‌ಸಿ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ರಿಯಲ್‌ಮಿ P3 5G ಬೆಲೆ
6GB RAM + 128GB ಬೆಲೆ = 16,999 ರೂ.
8GB RAM + 128GB ಬೆಲೆ = 17,999 ರೂ.
8GB RAM + 256GB ಬೆಲೆ = 19,999 ರೂ.
ರಿಯಲ್‌ಮಿ P3 5G ಮೊಬೈಲ್ ಸ್ಪೇಸ್ ಸಿಲ್ವರ್, ಕಾಮೆಟ್ ಗ್ರೇ ಮತ್ತು ನೆಬ್ಯುಲಾ ಪಿಂಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ಕಂಪನಿಯ ಅಧಿಕೃತ ವೆಬ್‌ಸೈಟ್ (realme.com), ಫ್ಲಿಪ್‌ಕಾರ್ಟ್ ಮತ್ತು ಆಫ್‌ಲೈನ್ ಅಂಗಡಿಗಳ ಮೂಲಕ ಮಾರಾಟವಾಗಲಿದೆ. ಇದೇ ಮಾರ್ಚ್ 19 ರಂದು ಸಂಜೆ 6 ರಿಂದ ರಾತ್ರಿ 10 ರವರೆಗೆ ಮೊದಲ ಮಾರಾಟ ನಡೆಯಲಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ 2,000 ರೂ. ಬ್ಯಾಂಕ್ ಆಫರ್ ಘೋಷಿಸಿದೆ. ರಿಯಲ್‌ಮಿ ಹಳೆಯ ಗ್ರಾಹಕರಿಗೆ ಹೆಚ್ಚುವರಿ 500 ರೂ. ರಿಯಾಯಿತಿ ನೀಡಲಾಗುವುದು.


Click it and Unblock the Notifications








