Realme P3 Pro ಸೇಲ್ ಶುರು; 6000mAh ಬ್ಯಾಟರಿ.. 512GB ಸ್ಟೋರೇಜ್.. 2000 ಡಿಸ್ಕೌಂಟ್.. ಖರೀದಿಗೆ ಕ್ಯೂ!
ಬಹುನಿರೀಕ್ಷಿತ ರಿಯಲ್‌ಮಿ P3 ಪ್ರೊ 5G (realme P3 Pro 5G) ಮೊಬೈಲ್ ಕಳೆದ ವಾರ ಭಾರತದಲ್ಲಿ ಬಿಡುಗಡೆಯಾಗಿದೆ. ಕಂಪನಿಯು ಇದನ್ನು ತನ್ನ 'P' ಸರಣಿಯ ಅಡಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಿದೆ. ಅಂದಹಾಗೆ, ಈ ಮೊಬೈಲ್ ಇಂದಿನಿಂದ (ಫೆಬ್ರವರಿ 25) ಭಾರತದಲ್ಲಿ ತನ್ನ ಮೊದಲ ಮಾರಾಟ ಪ್ರಾರಂಭಿಸಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ 2,000 ರೂ.ಗಳ ಆಫರ್ ನೀಡುತ್ತಿದೆ. ಬನ್ನಿ, ಈ ರಿಯಲ್‌ಮಿ P3 ಪ್ರೊ 5G ಫೋನಿನ ಬೆಲೆ, ರಿಯಾಯಿತಿ ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ರಿಯಲ್‌ಮಿ P3 ಪ್ರೊ 5G ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.83 ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್ ಆಯ್ಕೆ, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ P3 ಪ್ರೊ 5G ಬೆಲೆ ಮತ್ತು ಆಫರ್
8GB RAM + 128GB ಸ್ಟೋರೇಜ್ ಬೆಲೆ = 23,999 ರೂ.
ಆಫರ್ ಬೆಲೆ = 21,999 ರೂ.
8GB RAM + 256GB ಸ್ಟೋರೇಜ್ ಬೆಲೆ = 24,999 ರೂ.
ಆಫರ್ ಬೆಲೆ = 22,999 ರೂ.
12GB RAM + 512GB ಸ್ಟೋರೇಜ್ ಬೆಲೆ = 26,999 ರೂ.
ಆಫರ್ ಬೆಲೆ = 24,999 ರೂ.
ರಿಯಲ್‌ಮಿ P3 ಪ್ರೊ 5G ಮೊಬೈಲ್ ಅಧಿಕೃತವಾಗಿ ಮಾರಾಟ ಪ್ರಾರಂಭಿಸಿದೆ. ಕಂಪನಿಯು ಈ ಮೊಬೈಲ್ ಖರೀದಿ ಮೇಲೆ 2,000 ರೂ.ಗಳ ಬ್ಯಾಂಕ್ ಆಫರ್ ನೀಡುತ್ತಿದೆ. ನೀವು ಎಲ್ಲಾ ರೂಪಾಂತರಗಳನ್ನು 2,000 ರೂ.ಗಳ ಕಡಿಮೆ ಬೆಲೆಗೆ ಖರೀದಿಸಬಹುದು. ಫೆಡರಲ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಡಿಬಿಎಸ್, ಐಡಿಎಫ್‌ಸಿ, ಎಚ್‌ಡಿಎಫ್‌ಸಿ, ಎಸ್‌ಬಿಐ, ಐಸಿಐಸಿಐ ಅಥವಾ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ ಈ ರಿಯಾಯಿತಿಯ ಪ್ರಯೋಜನವನ್ನು ಪಡೆಯಬಹುದು. ಈ ಸ್ಮಾರ್ಟ್‌ಫೋನ್ ಕಂಪನಿಯ ವೆಬ್‌ಸೈಟ್ ಮತ್ತು ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ. ನೀವು ನೆಬ್ಯುಲಾ ಗ್ಲೋ, ಗ್ಯಾಲಕ್ಸಿ ಪರ್ಪಲ್ ಮತ್ತು ಸ್ಯಾಟರ್ನ್ ಬ್ರೌನ್ ಬಣ್ಣಗಳಲ್ಲಿ ಈ ಮೊಬೈಲ್ ಖರೀದಿಸಬಹುದು.
ರಿಯಲ್‌ಮಿ P3 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ P3 ಪ್ರೊ 5G ಫೋನ್ 6.83 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಕ್ವಾಡ್ ಕರ್ವ್ಡ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು, ನೀವು ಒದ್ದೆಯಾದ ಕೈಗಳಿಂದಲೂ ಫೋನನ್ನು ಬಳಸಬಹುದು.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ರಿಯಲ್‌ಮಿ P3 ಪ್ರೊ 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S Gen 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ರಿಯಲ್‌ಮಿ 5G ಸ್ಮಾರ್ಟ್‌ಫೋನ್ ಎರಡು RAM ರೂಪಾಂತರಗಳನ್ನು ಹೊಂದಿದೆ. ಇದು 8GB RAM ಮತ್ತು 12GB RAM ಹೊಂದಿದೆ. ಈ ಫೋನ್ ವಿಸ್ತರಿಸಬಹುದಾದ RAM ತಂತ್ರಜ್ಞಾನ ಹೊಂದಿದೆ. ನೀವು ಭೌತಿಕ RAM ಜೊತೆಗೆ ವರ್ಚುವಲ್ RAM ವರೆಗೆ ಬಳಸಬಹುದು. ಈ ಫೋನ್ 128GB ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ P3 ಪ್ರೊ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬೊಂಬಾಟ್ ಬ್ಯಾಟರಿ
ರಿಯಲ್‌ಮಿ P3 ಪ್ರೊ 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ಫೋನ್ 39 ನಿಮಿಷಗಳನ್ನು ಶೇ.20 ರಿಂದ ಶೇ.100 ರಷ್ಟು ಸಂಪೂರ್ಣ ಚಾರ್ಜ್ ಆಗುತ್ತದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ P3 ಪ್ರೊ 5G ಮೊಬೈಲ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP66, IP68 ಮತ್ತು IP69 ರೇಟಿಂಗ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಹಲವು ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಹೊಂದಿದೆ. ಇದು ಎಐ (AI) ಎರೇಸ್, ಬೆಸ್ಟ್ ಫೇಸ್, ಮೋಷನ್ ಡಿಬಲ್ರ್, ಎಐ ರೆಕಾರ್ಡಿಂಗ್ ಸಾರಾಂಶ, ಎಐ ರೈಟರ್, ಗೂಗಲ್ ಸರ್ಕಲ್ ಟು ಸರ್ಚ್ ಮತ್ತು ಎಐ ರಿಪ್ಲೈ ಸೇರಿದಂತೆ ಮುಂತಾದ ಫೀಚರ್ಸ್ ಒಳಗೊಂಡಿದೆ.


Click it and Unblock the Notifications








