ಇಂದು Realme P3 Ultra ಮತ್ತು Realme P3 5G ಬಿಡುಗಡೆ; ಬೆಲೆ, ಫೀಚರ್ಸ್ ಬಹಿರಂಗ.. ಲೈವ್ ವೀಕ್ಷಣೆ ಹೇಗೆ?
ಪ್ರಸಿದ್ಧ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ರಿಯಲ್‌ಮಿ ಇಂದು (ಮಾರ್ಚ್ 19) ಎರಡು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲಿದೆ. ಇವುಗಳನ್ನು ತನ್ನ P3 ಸರಣಿಯ ಅಡಿಯಲ್ಲಿ ಪರಿಚಯಿಸಲಾಗುವುದು. ಈ ಮೊಬೈಲ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿರುವ ರಿಯಲ್‌ಮಿ P3 ಪ್ರೊ ಮತ್ತು ರಿಯಲ್‌ಮಿ P3x ಸಾಲಿಗೆ ಸೇರಲಿವೆ. ಹೌದು, ರಿಯಲ್‌ಮಿ P3 5G (Realme P3 P3 5G) ಮತ್ತು ರಿಯಲ್‌ಮಿ P3 ಅಲ್ಟ್ರಾ 5G (Realme P3 Ultra 5G) ಅಧಿಕೃತವಾಗಿ ಭಾರತದಲ್ಲಿ ಬಿಡುಗಡೆಯಾಗಲಿವೆ. ಬನ್ನಿ, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ ಈ ಫೋನ್‌ಗಳ ಬಿಡುಗಡೆಗೂ ಮುನ್ನವೇ, ಪ್ರೊಸೆಸರ್, ಡಿಸ್ಪ್ಲೇ ಮತ್ತು ಬ್ಯಾಟರಿ ವಿವರಗಳು ಸೇರಿದಂತೆ ಪ್ರಮುಖ ವೈಶಿಷ್ಟ್ಯಗಳನ್ನು ದೃಢಪಡಿಸಿದೆ. ಅದರಂತೆ ರಿಯಲ್‌ಮಿ P3 ಅಲ್ಟ್ರಾ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡಲಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿರುತ್ತದೆ. ಈ ಮೊಬೈಲ್ 120Hz ರಿಫ್ರೆಶ್ ದರದೊಂದಿಗೆ ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಈ ರಿಯಲ್‌ಮಿ ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಇದು 12GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿರಲಿದೆ.

ರಿಯಲ್‌ಮಿ P3 ಮತ್ತು ರಿಯಲ್‌ಮಿ P3 ಅಲ್ಟ್ರಾ ಬೆಲೆ
ಭಾರತದಲ್ಲಿ ರಿಯಲ್‌ಮಿ P3 5G ಬೆಲೆ 16,999 ರೂ.ಗಳಿಂದ ಪ್ರಾರಂಭವಾಗಲಿದೆ ಎಂದು ಕಂಪನಿ ದೃಢಪಡಿಸಿದೆ. ಆದರೆ, ಆರಂಭಿಕ ಕೊಡುಗೆಗಳ ಮೂಲಕ ಇದು 14,999 ರೂ. ಬೆಲೆಯಲ್ಲಿ ಖರೀದಿಗೆ ಲಭ್ಯವಿರುತ್ತದೆ. ರಿಯಲ್‌ಮಿ P3 5Gಯ 'ಅರ್ಲಿ ಬರ್ಡ್' ಮಾರಾಟವು ಇಂದು ಸಂಜೆ 6 ಗಂಟೆಗೆ ನಡೆಯಲಿದೆ. ಭಾರತದಲ್ಲಿ ರಿಯಲ್‌ಮಿ P3 ಅಲ್ಟ್ರಾ 5G ಬೆಲೆ 30,000 ರೂ.ಗಿಂತ ಕಡಿಮೆ ಇರುವ ನಿರೀಕ್ಷೆಯಿದೆ. ರಿಯಲ್‌ಮಿ P3 Pro ಬೆಲೆ 23,999 ರೂ. ಆಗಿದೆ. ಭಾರತದಲ್ಲಿ ರಿಯಲ್‌ಮಿ ಬಡ್ಸ್ ಏರ್7 (Realme Buds Air7) ಬೆಲೆ 5,000 ರೂ.ಗಿಂತ ಕಡಿಮೆ ಇರುವ ಸಾಧ್ಯತೆ ಇದೆ.
ರಿಯಲ್‌ಮಿ P3 ಅಲ್ಟ್ರಾ ಬಿಡುಗಡೆ ಸಮಾರಂಭ ವೀಕ್ಷಿಸುವುದು ಹೇಗೆ?
ರಿಯಲ್‌ಮಿ P3 ಅಲ್ಟ್ರಾ 5G ಮತ್ತು ರಿಯಲ್‌ಮಿ P3 5G ಇಂದು ಮಧ್ಯಾಹ್ನ 12 ಗಂಟೆಗೆ ಭಾರತದಲ್ಲಿ ಬಿಡುಗಡೆಯಾಗುತ್ತಿವೆ. ನೀವು, ಕಂಪನಿಯ ಅಧಿಕೃತ ಯೂಟ್ಯೂಬ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ P3 ಅಲ್ಟ್ರಾ 5G ಬಿಡುಗಡೆ ಕಾರ್ಯಕ್ರಮವನ್ನು ನೇರಪ್ರಸಾರ ವೀಕ್ಷಿಸಬಹುದು. ಇಂದಿನ ಈವೆಂಟ್‌ನಲ್ಲಿ ಕಂಪನಿಯು ರಿಯಲ್‌ಮಿ ಬಡ್ಸ್ ಏರ್ 7 ಅನ್ನು ಸಹ ಬಿಡುಗಡೆ ಮಾಡುತ್ತಿದೆ. ಬಿಡುಗಡೆಯ ನಂತರ, ಮುಂಬರುವ ಎರಡು ರಿಯಲ್‌ಮಿ P3 ಸರಣಿಯ ಸ್ಮಾರ್ಟ್‌ಫೋನ್‌ಗಳು ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ ಹಾಗೂ ಪ್ರಮುಖ ಚಿಲ್ಲರೆ ವ್ಯಾಪಾರಿಗಳ ಮೂಲಕ ಖರೀದಿಗೆ ಲಭ್ಯವಿರಲಿವೆ. ರಿಯಲ್‌ಮಿ ಲಾಂಚ್ ಈವೆಂಟ್‌ನ ಲೈವ್‌ಸ್ಟ್ರೀಮ್ ಅನ್ನು ಈ ಕೆಳಗಿನ ಲಿಂಕ್ ಮೂಲಕ ವೀಕ್ಷಿಸಬಹುದು.
ರಿಯಲ್‌ಮಿ P3 5G ವೈಶಿಷ್ಟ್ಯಗಳು
ರಿಯಲ್‌ಮಿ P3 5G ಭಾರತದಲ್ಲಿ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 4 ಪ್ರೊಸೆಸರ್ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್ ಆಗಲಿದೆ. ರಿಯಲ್‌ಮಿ P3 ಅಲ್ಟ್ರಾ 5G ಫೋನಿನಂತೆ, ಇದು 6000mAh ಬ್ಯಾಟರಿಯನ್ನು ಹೊಂದಿರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 2000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲದೊಂದಿಗೆ ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಹಾಗೆಯೇ ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ.
ರಿಯಲ್‌ಮಿ P3 ಅಲ್ಟ್ರಾ 5G ವೈಶಿಷ್ಟ್ಯಗಳು
ರಿಯಲ್‌ಮಿ P3 ಅಲ್ಟ್ರಾ 5G ಮೊಬೈಲ್ 6.7 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಇದು 120Hz ರಿಫ್ರೆಶ್ ದರ ಮತ್ತು 1.5K ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8350 ಅಲ್ಟ್ರಾ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ UI 6 ಜೊತೆಗೆ ಕೆಲಸ ಮಾಡುತ್ತದೆ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿರುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇರುತ್ತದೆ. ಈ ಮೊಬೈಲ್ 6000mAh ಬ್ಯಾಟರಿ ಮತ್ತು 80W ಎಐ (AI) ಬೈಪಾಸ್ ಚಾರ್ಜಿಂಗ್ ಒಳಗೊಂಡಿರುತ್ತದೆ.

ರಿಯಲ್‌ಮಿ P3 ಪ್ರೊ 5G ವೈಶಿಷ್ಟ್ಯಗಳು
ರಿಯಲ್‌ಮಿ P3 ಪ್ರೊ 5G ಫೋನ್ 6.83 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ವೆಟ್ ಟಚ್ ತಂತ್ರಜ್ಞಾನ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S Gen 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ರಿಯಲ್‌ಮಿ 5G ಸ್ಮಾರ್ಟ್‌ಫೋನ್ 8GB RAM ಮತ್ತು 12GB RAM ಹೊಂದಿದೆ.
ರಿಯಲ್‌ಮಿ P3 ಪ್ರೊ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ರಿಯಲ್‌ಮಿ 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ನೀವು 39 ನಿಮಿಷಗಳಲ್ಲಿ ಶೇ.20 ರಿಂದ ಶೇ.100 ರಷ್ಟು ಸಂಪೂರ್ಣ ಚಾರ್ಜ್ ಮಾಡಬಹುದು.


Click it and Unblock the Notifications








