Home
ಮೊಬೈಲ್

Realme ದಿಟ್ಟ ನಿರ್ಧಾರ: ಫೆ.18ಕ್ಕೆ ಎರಡು ಅಚ್ಚರಿಗಳು.. Realme P3x ಲಾಂಚ್, ಮತ್ತೇನು? ನೀವೆ ನೋಡಿ

ರಿಯಲ್‌ಮಿ ತನ್ನ ಅಭಿಮಾನಿಗಳಿಗೆ ದೊಡ್ಡ ಸಿಹಿಸುದ್ದಿಯನ್ನು ನೀಡಿದೆ. ಇತ್ತೀಚೆಗೆ ರಿಯಲ್‌ಮಿ P3 ಪ್ರೊ 5G (realme P3 Pro 5G) ಫೋನ್ ಫೆಬ್ರವರಿ 18 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ಹೇಳಿತ್ತು. ಇದೀಗಮ, ಕಂಪನಿಯು ರಿಯಲ್‌ಮಿ P3 ಪ್ರೊ 5G ಜೊತೆಗೆ, ಮತ್ತೊಂದು ಮೊಬೈಲ್ ಲಾಂಚ್ ಮಾಡುವುದಾಗು ಘೋಷಿಸಿದೆ. ಹೌದು, ಅದೇ ದಿನ ರಿಯಲ್‌ಮಿ P3x 5G (Realme P3x 5G) ಫೋನನ್ನು ಸಹ ಭಾರತದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇದು ಕಡಿಮೆ ಬಜೆಟ್ 5G ಸ್ಮಾರ್ಟ್‌ಫೋನ್ ಆಗಿದೆ. ಈ ಹೊಸ ಫೋನಿನ ಬೆಲೆ ಮತ್ತು ವೈಶಿಷ್ಟ್ಯಗಳನ್ನು ತಿಳಿಯಲು ಮುಂದೆ ಓದಿ.

ರಿಯಲ್‌ಮಿ P3x 5G ಹಗುರವಾದ ಸ್ಲಿಮ್ ಮೊಬೈಲ್ ಆಗಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿರುತ್ತದೆ. ಹಾಗೆಯೇ 6.78 ಅಮೋಲೆಡ್ ಡಿಸ್ಪ್ಲೇ ಹೊಂದಿರುತ್ತದೆ. ಜೊತೆಗೆ 12GB RAM + 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 80W ಫಾಸ್ಟ್‌ ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ.

ಫೆ.18ಕ್ಕೆ ಎರಡು ಫೋನ್ ಲಾಂಚ್; ಒಂದು Realme P3x.. ಮತ್ತೊಂದು ಯಾವುದು?

ರಿಯಲ್‌ಮಿ P3x 5G ಬಿಡುಗಡೆ ವಿವರ

ರಿಯಲ್‌ಮಿ P3x 5G ಸ್ಮಾರ್ಟ್‌ಫೋನ್ ಫೆಬ್ರವರಿ 18 ರಂದು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಕಂಪನಿಯು ಮಧ್ಯಾಹ್ನ 12 ಗಂಟೆಗೆ ಲಾಂಚ್ ಈವೆಂಟ್ ಆಯೋಜಿಸಿದೆ. ಈ ಸಮಾರಂಭದಲ್ಲಿ ರಿಯಲ್‌ಮಿ P3x 5G ಮತ್ತು ರಿಯಲ್‌ಮಿ P3 ಪ್ರೊ 5G ಫೋನ್‌ಗಳನ್ನು ಭಾರತೀಯ ಮಾರುಕಟ್ಟೆಗೆ ಪರಿಚಯಿಸಲಿದೆ. ಈ ಕಾರ್ಯಕ್ರಮವನ್ನು ಕಂಪನಿಯ ವೆಬ್‌ಸೈಟ್‌, ಎಲ್ಲಾ ಸೋಶಿಯಲ್ ಮೀಡಿಯಾ ಫ್ಲಾಟ್‌ಫಾರ್ಮ್‌ಗಳು ಮತ್ತು ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ರಿಯಲ್‌ಮಿ P3x 5G ಮೊಬೈಲ್ ಐಸ್‌ಫೀಲ್ಡ್ ವಿನ್ಯಾಸದೊಂದಿಗೆ ಬರಲಿದೆ. ಇದು ಲೂನಾರ್ ಸಿಲ್ವರ್, ಮಿಡ್‌ನೈಟ್ ಬ್ಲೂ ಮತ್ತು ಸ್ಟೆಲ್ಲಾರ್ ಪಿಂಕ್ ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕಂಪನಿ ತಿಳಿಸಿದೆ. ಈ ಫೋನಿನಲ್ಲಿ 8GB RAM ಹೊಂದಿರುತ್ತದೆ. ಮೊದಲೇ ಹೇಳಿದಂತೆ ಈ ರಿಯಲ್‌ಮಿ P3x 5G ಹಗುರವಾದ ಸ್ಲಿಮ್ ಸ್ಮಾರ್ಟ್‌ಫೋನ್ ಆಗಿದೆ. ಇದು ಕೇವಲ 7.94 ಮಿಮೀ ದಪ್ಪ ಇರುತ್ತದೆ.

ರಿಯಲ್‌ಮಿ P3x 5G ವೈಶಿಷ್ಟ್ಯಗಳು (ನಿರೀಕ್ಷಿತ)

ಡಿಸ್ಪ್ಲೇ ವಿವರ

ರಿಯಲ್‌ಮಿ P3x 5G ಮೊಬೈಲ್ 6.78 ಇಂಚಿನ ದೊಡ್ಡ ಡಿಸ್ಪ್ಲೇಯೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದು ಅಮೋಲೆಡ್‌ ಪ್ಯಾನಲ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರದ ಬೆಂಬಲ ಹೊಂದಿರುತ್ತದೆ.

ಪ್ರೊಸೆಸರ್ ಸಾಮರ್ಥ್ಯ

ಮುಂಬರುವ ರಿಯಲ್‌ಮಿ P3x 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ ಎಂದು ಕಂಪನಿ ತಿಳಿಸಿದೆ. ಈ ಮೊಬೈಲ್ ಗೇಮಿಂಗ್‌ಗಾಗಿ, 6050mm VC ಕೂಲಿಂಗ್ ವ್ಯವಸ್ಥೆ ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 12GB RAM ನೊಂದಿಗೆ ಬಿಡುಗಡೆಯಾಗಲಿದೆ. ಟಾಪ್ ವೇರಿಯಂಟ್ 512GB ಸ್ಟೋರೇಜ್ ಆಯ್ಕೆ ಹೊಂದಿರುತ್ತದೆ.

ಫೆ.18ಕ್ಕೆ ಎರಡು ಫೋನ್ ಲಾಂಚ್; ಒಂದು Realme P3x.. ಮತ್ತೊಂದು ಯಾವುದು?

ಕ್ಯಾಮೆರಾ ಸೆಟಪ್

ಹೊಸ ರಿಯಲ್‌ಮಿ P3x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಸೆಕೆಂಡರಿ ಲೆನ್ಸ್‌ ಲಭ್ಯವಿರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರುತ್ತದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ P3x 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಫೋನ್ 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಹೊಂದಿರುತ್ತದೆ.

Best Mobiles in India

English summary
Realme P3x 5G to Launch in India on February 18 Along with Realme P3 Pro: check Price and Specifications details here
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+