ಕೇವಲ 14,999 ರೂ.! 6000mAh ಬ್ಯಾಟರಿ.. 50MP ಕ್ಯಾಮೆರಾ.. ಭಾರತಕ್ಕೆ realme P3x ಗ್ರ್ಯಾಂಡ್ ಎಂಟ್ರಿ
ಬಹುನಿರೀಕ್ಷಿತ ರಿಯಲ್‌ಮಿ P3x 5G (realme P3x 5G) ಭಾರತದಲ್ಲಿ ಬಿಡುಗಡೆಯಾಗಿದೆ. ಇದನ್ನು ರಿಯಲ್‌ಮಿ P3 (realme P3) ಸರಣಿಯ ಅಡಿಯಲ್ಲಿ ದೇಶೀಯ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಹೌದು, ಕಂಪನಿಯು ಈ ಫೋನಿನ ಜೊತೆಗೆ ರಿಯಲ್‌ಮಿ P3 ಪ್ರೊ 5G (realme P3 Pro 5G) ಸ್ಮಾರ್ಟ್‌ಫೋನ್ ಸಹ ಲಾಂಚ್ ಮಾಡಿದೆ. ಈ ಮೂಲಕ ತನ್ನ ಅಭಿಮಾನಿಗಳನ್ನು ಸಂತೋಷ ಪಡಿಸಿದೆ. ಈ ಪೈಕಿ ರಿಯಲ್‌ಮಿ P3x 5G ಫೋನ್ ಸ್ಮಾರ್ಟ್‌ಫೋನ್ ಪ್ರಿಯರ ಗಮನ ಸೆಳೆದಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ P3x 5G ಸ್ಮಾರ್ಟ್‌ಫೋನ್ ಮಿಡ್ ಬಜೆಟ್‌ನಲ್ಲಿ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6400 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.83 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 128GB ಸ್ಟೋರೇಜ್, 6000mAh ಬಿಗ್ ಬ್ಯಾಟರಿ ಮತ್ತು 45W ಸೂಪರ್‌ವೂಕ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟಕ್ಕೆ ಸಿದ್ಧವಾಗಿದೆ.

ರಿಯಲ್‌ಮಿ P3x 5G ಬೆಲೆ
- 6GB RAM + 128GB ಸ್ಟೋರೇಜ್ = 13,999 ರೂ.
- 8GB RAM + 128GB ಸ್ಟೋರೇಜ್ = 14,999 ರೂ.
ರಿಯಲ್‌ಮಿ P3x 5G ಕೈಗೆಟುಕುವ 5G ಫೋನ್ ಆಗಿದೆ. ಈ ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರವನ್ನು 13,999 ರೂ.ಗಳಿಗೆ ಬಿಡುಗಡೆ ಮಾಡಲಾಗಿದೆ. ಮತ್ತು 8GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 14,999 ರೂ. ಆಗಿದೆ. ರಿಯಲ್‌ಮಿ P3x 5G ಮೊಬೈಲ್ ಇದೇ ಫೆಬ್ರವರಿ 28 ರಿಂದ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ಇದು ಮಿಡ್‌ನೈಟ್ ಬ್ಲೂ, ಲೂನಾರ್ ಸಿಲ್ವರ್ ಮತ್ತು ಸ್ಟೆಲ್ಲರ್ ಪಿಂಕ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ.
ರಿಯಲ್‌ಮಿ P3x 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ P3x 5G ಫೋನ್ 6.83 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು ಕ್ವಾಡ್ ಕರ್ವ್ಡ್ ಅಮೋಲೆಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 1500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು, ಒದ್ದೆಯಾದ ಕೈಗಳಿಂದಲೂ ಫೋನನ್ನು ಬಳಸಬಹುದು.
ಪ್ರೊಸೆಸರ್ ಸಾಮರ್ಥ್ಯ
ರಿಯಲ್‌ಮಿ P3x 5G ಮೊಬೈಲ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6400 ಪ್ರೊಸೆಸರ್ ಹೊಂದಿದೆ. ಇದು ಪ್ರೊಸೆಸರ್‌ನಲ್ಲಿ ಬಿಡುಗಡೆಯಾದ ವಿಶ್ವದ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ಫೋನ್ 6GB RAM ಮತ್ತು 8GB RAM ನಲ್ಲಿ ಬಿಡುಗಡೆಯಾಗಿದೆ. ಈ ಮೊಬೈಲ್ 10GB ವಿಸ್ತರಿಸಬಹುದಾದ RAM ತಂತ್ರಜ್ಞಾನ ಹೊಂದಿದೆ. ನೀವು ಭೌತಿಕ RAM ಮತ್ತು ವರ್ಚುವಲ್ RAM ಜೊತೆಗೆ 18GB RAM ವರೆಗೆ ಬಳಸಬಹುದು. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರಗೆ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ರಿಯಲ್‌ಮಿ P3x 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ P3x 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ಫೋನ್ OTG ಮತ್ತು ರಿವರ್ಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ P3x 5G ಸ್ಮಾರ್ಟ್‌ಫೋನ್ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಹೊಂದಿದೆ. ಇದು ಎಐ (AI) ಎರೇಸ್, ಬೆಸ್ಟ್ ಫೇಸ್, ಮೋಷನ್ ಡಿಬಲ್ರ್, ಎಐ ರೆಕಾರ್ಡಿಂಗ್ ಸಾರಾಂಶ, ಎಐ ರೈಟರ್, ಗೂಗಲ್ ಸರ್ಕಲ್ ಟು ಸರ್ಚ್ ಮತ್ತು ಎಐ ರಿಪ್ಲೈ ಸೇರಿದಂತೆ ಮುಂತಾದ ಫೀಚರ್ಸ್ ಒಳಗೊಂಡಿದೆ. ಈ ಮೊಬೈಲ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ, IP66 / IP68 / IP69 ರೇಟಿಂಗ್ ಪಡೆದಿದೆ.


Click it and Unblock the Notifications








