Home
ಮೊಬೈಲ್

ಧೂಳೆಬ್ಬಿಸಲು ಬಂತು Realme V60 Pro ಫೋನ್; 512GB ಸ್ಟೋರೇಜ್‌.. 50MP ಕ್ಯಾಮೆರಾ.. ಕಡಿಮೆ ಬೆಲೆ!

ಸದ್ದಿಲ್ಲದೆ ಹೊಸ ರಿಯಲ್‌ಮಿ ಫೋನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕಂಪನಿಯು, ಇದನ್ನು ಬಜೆಟ್ ಬೆಲೆಗೆ ಪರಿಚಯಿಸಿದೆ. ಹೌದು, ರಿಯಲ್‌ಮಿ V60 ಪ್ರೊ (Realme V60 Pro) ಮೊಬೈಲ್ ಅಧಿಕೃತವಾಗಿ ಬಿಡುಗಡೆಯಾಗಿದೆ. ಈ ಮೂಲಕ ರಿಯಲ್‌ಮಿ ತನ್ನ 'V' ಸರಣಿಯನ್ನು ವಿಸ್ತರಿಸಿದೆ. ಹೊಸ ರಿಯಲ್‌ಮಿ V60 ಪ್ರೊ ಫೋನ್ ಸ್ಟೈಲಿಶ್‌ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರನ್ನು ಸೆಳೆಯುತ್ತಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.

ಕಂಪನಿಯು ರಿಯಲ್‌ಮಿ V60 ಪ್ರೊ 5G ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಇದು ಮೂರು ಬಣ್ಣಗಳಲ್ಲಿ ಬರುತ್ತದೆ. ಈ ಮೊಬೈಲ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ 512GB ಸ್ಟೋರೇಜ್, 5600mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ.

ಹೊಸ Realme V60 Pro ಲಾಂಚ್; 512GB ಸ್ಟೋರೇಜ್‌, 50MP ಕ್ಯಾಮೆರಾ; ಬೆಲೆ ನೋಡಿ

ರಿಯಲ್‌ಮಿ V60 ಪ್ರೊ 5G ಫೋನಿನ ಬೆಲೆ

ರಿಯಲ್‌ಮಿ V60 ಪ್ರೊ ಫೋನಿನ 12GB RAM + 256GB ಸ್ಟೋರೇಜ್‌ ರೂಪಾಂತರವನ್ನು 18,600 ರೂ.ಗೆ ಬಿಡುಗಡೆ ಮಾಡಲಾಗಿದೆ. 12GB RAM + 512GB ಸ್ಟೋರೇಜ್‌ ಆಯ್ಕೆ ಬೆಲೆ 21,100 ರೂ. ಆಗಿದೆ. ನೀವು, ಅಬ್ಸಿಡಿಯನ್ ಗೋಲ್ಡ್, ರಾಕ್ ಬ್ಲಾಕ್ ಮತ್ತು ಲಕ್ಕಿ ರೆಡ್ ಬಣ್ಣಗಳಲ್ಲಿ ಈ ಫೋನನ್ನು ಕೊಳ್ಳಬಹುದು. ಈ ಫೋನ್ ಪ್ರಸ್ತುತ ಚೀನಾದಲ್ಲಿ ಖರೀದಿಗೆ ಲಭ್ಯವಿದೆ ಕಂಪನಿಯು ಒಂದು ವರ್ಷದ ಜಲ ನಿರೋಧಕ ವಾರಂಟಿ ಮತ್ತು ಎರಡು ವರ್ಷಗಳ ವಾರಂಟಿ ನೀಡಲಿದೆ.

ರಿಯಲ್‌ಮಿ V60 ಪ್ರೊ 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ V60 ಪ್ರೊ 5G ಮೊಬೈಲ್ ದೊಡ್ಡ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಹೆಚ್‌ಡಿ ಪ್ಲಸ್‌ ಪಿಎಸ್‌ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 720×1604 ಪಿಕ್ಸೆಲ್ ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಕಂಪನಿಯು ರಿಯಲ್‌ಮಿ V60 ಪ್ರೊ ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ARM ಮಾಲಿ G57 MC2 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ UI 5.0 ಆಪರೇಟಿಂಗ್ ಸಿಸ್ಟಂನಲ್ಲಿ ಕೆಲಸ ಮಾಡುತ್ತದೆ.

ಸ್ಟೋರೇಜ್‌ ಆಯ್ಕೆ

ಹೊಸ ರಿಯಲ್‌ಮಿ V60 ಪ್ರೊ ಸ್ಮಾರ್ಟ್‌ಫೋನ್‌ 12GB RAM ಜೊತೆಗೆ 256GB ಮತ್ತು 512GB ಸ್ಟೋರೇಜ್‌ ಹೊಂದಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.

ಕ್ಯಾಮೆರಾ ಸೆಟಪ್

ರಿಯಲ್‌ಮಿ V60 ಪ್ರೊ ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಮತ್ತು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ V60 ಪ್ರೊ 5G ಫೋನ್ 5600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 45W ಸೂಪರ್‌ವೂಕ್ ವೇಗದ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ V60 ಪ್ರೊ 5G ಸ್ಮಾರ್ಟ್‌ಫೋನ್‌ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ವೈ-ಫೈ, ಯುಎಸ್‌ಬಿ ಟೈಪ್ ಸಿ, ಬ್ಲೂಟೂತ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
Realme V60 Pro With MediaTek Dimensity 6300 SoC Launched: Check Price, Specifications, Features and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+