ಭಾರತದಲ್ಲಿ 'ರಿಯಲ್‌ಮಿ ಎಕ್ಸ್' ಬೆಲೆ 18,000 ರೂ.ಮಾತ್ರ!..ಅಧಿಕೃತ ಸುದ್ದಿ ವೈರಲ್!!

|

48 ಮೆಗಾಪಿಕ್ಸಲ್ ಸಾಮರ್ಥ್ಯದ ರಿಯರ್ ಕ್ಯಾಮೆರಾ, ಪಾಪ್‌ಅಪ್‌ ಸೆಲ್ಫಿ ಕ್ಯಾಮೆರಾ, ಫಾಸ್ಟ್‌ ಚಾರ್ಜರ್‌ ಮತ್ತು ಅಂಚು ರಹಿತ ಡಿಸ್‌ಪ್ಲೇ ಆಯ್ಕೆಗಳು ಆಕರ್ಷಣಿಯ ಫೀಚರ್ಸ್ ಸ್ಮಾರ್ಟ್‌ಫೋನ್ 'ರಿಯಲ್ ಮಿ ಎಕ್ಸ್‌' ಭಾರತಕ್ಕೆ ಶೀಘ್ರವೇ ಕಾಲಿಡುತ್ತಿರುವುದು ಖಚಿತವಾಗಿದೆ. ಏಕೆಂದರೆ, ರಿಯಲ್‌ಮಿ ಇಂಡಿಯಾ ಸಿಇಒ ಮಾಧವ್ ಶೇಥ್ ಅವರು ಟ್ವೀಟ್ಟರ್‌ನಲ್ಲಿ ರಿಯಲ್‌ಮಿ ಎಕ್ಸ್ ಸ್ಮಾರ್ಟ್‌ ಫೋನಿನ ಬೆಲೆಯನ್ನು ಅಧಿಕೃತ ಫೋನ್ ಬಿಡುಗಡೆಗೂ ಮುನ್ನವೇ ಬಿಡುಗಡೆ ಮಾಡಿ ಗಮನಸೆಳೆದಿದ್ದಾರೆ.

ಭಾರತದಲ್ಲಿ 'ರಿಯಲ್‌ಮಿ ಎಕ್ಸ್' ಬೆಲೆ 18,000 ರೂ.ಮಾತ್ರ!..ಅಧಿಕೃತ ಸುದ್ದಿ ವೈರಲ್!

ಹೌದು, ಇತ್ತೀಚಿಗಷ್ಟೇ ಚೀನಾದಲ್ಲಿ ಬಿಡುಗಡೆಯಾಗಿ ಅಲ್ಲಿ ಭರ್ಜರಿ ಮಾರಾಟ ಕಾಣುತ್ತಿರುವ 'ರಿಯಲ್‌ ಮಿ ಎಕ್ಸ್‌' ಬೆಲೆಯು ಭಾರತದಲ್ಲಿ ಅಧಿಕೃತವಾಗಿದೆ. ರಿಯಲ್‌ಮಿ ಇಂಡಿಯಾ ಸಿಇಒ ಮಾಧವ್ ಶೇಥ್ ಅವರು ತಿಳಿಸಿರುವಂತೆ ಭಾರತದಲ್ಲಿ ರಿಯಲ್‌ ಮಿ ಕಂಪನಿಯ ಮೊದಲ ಪಾಪ್‌ಅಪ್ ಸೆಲ್ಫೀ ಕ್ಯಾಮೆರಾ ಸ್ಮಾರ್ಟ್‌ಫೋನ್ 'ರಿಯಲ್‌ ಮಿ ಎಕ್ಸ್‌' ಕೇವಲ 18,000 ರೂ.ಗಳಿಗೆ ಬಿಡುಗಡೆಯಾಗಲಿದೆಯಂತೆ. ಈಸುದ್ದಿ ಹೊರಬಿದ್ದಂತೆ ಗ್ರಾಹಕರಲ್ಲಿ ಫೋನ್‌ ಬಗ್ಗೆ ಕ್ರೇಜ್ ಹೆಚ್ಚಾಗಿದೆ.

ರಿಯಲ್ ಮಿ ಎಕ್ಸ್‌ ಫ್ಲ್ಯಾಗ್‌ಶಿಪ್ ಮಾದರಿ ಸ್ಮಾರ್ಟ್‌ಫೋನ್‌ ಗ್ರಾಡಿಯಂಡ್ ಡಿಸೈನ್, ಕ್ಯಾಮೆರಾ ಸೇರಿದಂತೆ ಗ್ರಾಹಕರ ನಿರೀಕ್ಷಿಸುವ ಕೇಲವು ಫೀಚರ್ಸ್‌ಗಳನ್ನು ಒಳಗೊಂಡಿದ್ದು, ಕೇವಲ 18,000 ರೂ.ಗಳಿಗೆ ಬಿಡುಗಡೆಯಾಗುತ್ತಿರುವುದು ಆಶ್ಚರ್ಯವಾಗಿದೆ. ಹಾಗಾದರೇ 'ರಿಯಲ್ ಮಿ ಎಕ್ಸ್‌' ಸ್ಮಾರ್ಟ್‌ಫೋನಿನ ವಿಶೇಷ ಫೀಚರ್ಸ್‌ಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಪ್ರಮುಖ ಫೀಚರ್ಸ್ ಯಾವುವು ಎಂಬುದನ್ನು ಮುಂದಿನ ಸ್ಲೈಡರ್‌ಗಳಲ್ಲಿ ಓದಿ ತಿಳಿಯಿರಿ.

ನೋಚ್‌ಲೆಸ್‌ ಡಿಸ್‌ಪ್ಲೇ

ನೋಚ್‌ಲೆಸ್‌ ಡಿಸ್‌ಪ್ಲೇ

6.5 ಇಂಚಿನ ವಿಶಾಲ AMOLED ನೋಚ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಪೂರ್ಣ ಹೆಚ್‌ಡಿ ರೆಶಲ್ಯೂಶನ್‌ ಒಳಗೊಂಡಿದೆ. ಡಿಸ್‌ಪ್ಲೇಯ ಸುತ್ತಲೂ ಅತಿ ಕಡಿಮೆ ಅಂಚನ್ನು ಹೊಂದಿದ್ದು, ನೋಡಲು ಆಕರ್ಷಕವಾಗಿದೆ. ಗೇಮ್ಸ್‌ ಆಡಲು ಮತ್ತು ವಿಡಿಯೊ ವೀಕ್ಷಿಸಲು ಡಿಸ್‌ಪ್ಲೇಯು ಅತ್ಯುತ್ತಮ ಎನಿಸಲಿದೆ.

ಸ್ನ್ಯಾಪ್‌ಡ್ರಾಗನ್ 710

ಸ್ನ್ಯಾಪ್‌ಡ್ರಾಗನ್ 710

ರಿಯಲ್ ಮಿ 3 ಪ್ರೊ ದಲ್ಲಿಯೂ ಸಹ ಕಂಪನಿಯು ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಅನ್ನು ನೀಡಿತ್ತು. ಈಗ ರಿಯಲ್ ಮಿ ಎಕ್ಸ್‌ ಸ್ಮಾರ್ಟ್‌ಫೋನಿನಲ್ಲಿಯೂ ಸಹ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಅನ್ನು ನೀಡಿದೆ. ಮಲ್ಟಿಟಾಸ್ಕ್‌ ಕೆಲಸಗಳು ಸುಲಭವಾಗಿ ಮಾಡಬಹುದಾಗಿದ್ದು, ಗೇಮ್‌ ಆಡಲು ಸಹ ಪೂರಕವಾಗಿರಲಿದೆ.

48ಎಂಪಿ ಕ್ಯಾಮೆರಾ

48ಎಂಪಿ ಕ್ಯಾಮೆರಾ

ಸದ್ಯ ಟ್ರೆಂಡಿಂಗ್‌ನಲ್ಲಿರುವ ಫೀಚರ್ಸ್‌ಗಳಲ್ಲಿ 48ಎಂಪಿ ಕ್ಯಾಮೆರಾ ಆಯ್ಕೆಯು ಸಹ ಒಂದಾಗಿದೆ. ರಿಯಲ್‌ ಮಿ ಎಕ್ಸ್‌ ಸ್ಮಾರ್ಟ್‌ಫೋನ್ ಸಹ ಹಿಂಬದಿಯಲ್ಲಿ 48ಎಂಪಿ ಕ್ಯಾಮೆರಾ ಫೀಚರ್‌ ಅನ್ನು ಹೊಂದಿದ್ದು, ಸೋನಿಯ IMX586 ಸೆನ್ಸಾರ್‌ ಈ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಅದರ ಅಪರ್ಚರ್ f/1.7 ಸಾಮರ್ಥ್ಯದಲ್ಲಿದೆ.

ಪಾಪ್‌ಅಪ್‌ ಸೆಲ್ಫಿ ಕ್ಯಾಮೆರಾ

ಪಾಪ್‌ಅಪ್‌ ಸೆಲ್ಫಿ ಕ್ಯಾಮೆರಾ

ಈಗಿನ ಪ್ರಮುಖ ಸ್ಮಾರ್ಟ್‌ಪೋನ್‌ಗಳಲ್ಲಿ ಸೆಲ್ಫಿಗಾಗಿ ಪಾಪ್‌ಅಪ್‌ ಕ್ಯಾಮೆರಾ ಆಯ್ಕೆಯನ್ನು ಒದಗಿಸಲಾಗುತ್ತಿದೆ. ರಿಯಲ್‌ ಮಿ ಎಕ್ಸ್‌ ಸ್ಮಾರ್ಟ್‌ಫೋನಿನಲ್ಲಿಯೂ ಸಹ ಪಾಪ್‌ಅಪ್‌ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನಿನ 16ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾವುನ್ನು ಒದಗಿಸಿದ್ದು, ಅದು 0.7 ಸೆಕೆಂಡ್ಸ್‌ನ ಒಳಗೆ ತೆರೆದುಕೊಳ್ಳುತ್ತದೆ.

VOOC 3.0

VOOC 3.0

ರಿಯಲ್‌ ಮಿ ಎಕ್ಸ್‌ ಸ್ಮಾರ್ಟ್ಫೋನ್‌ನಲ್ಲಿ 3,765mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಬ್ಯಾಟರಿಯು ದೀರ್ಘಕಾಲದವರೆಗೂ ಬಾಳಿಕೆ ಬರಲಿದೆ. ಇದರೊಂದಿಗೆ VOOC 3.0 ಚಾರ್ಜಿಂಗ್ ತಂತ್ರಜ್ಞಾನವನ್ನು ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್‌ಫೋನ್ ವೇಗವಾಗಿ ಚಾರ್ಜ್‌ ಪಡೆದುಕೊಳ್ಳುತ್ತದೆ.

Best Mobiles in India

English summary
Realme’s first smartphone with pop-up selfie camera, Realme X, is set to launch in India soon. Ahead of the official launch, Realme has revealed the India pricing of the phone. It also pointed out that the India model may have a different set of specifications.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X