Just In
- 8 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 8 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 9 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 9 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- News
ಫಾರೆನ್ಸಿಕ್ ಕ್ಯಾಂಪಸ್ ಶಂಕುಸ್ಥಾಪನೆಗೆ ಆಗಮಿಸಲಿರುವ ಅಮಿತ್ ಶಾ: ಧಾರವಾಡದಲ್ಲಿ ಭಾರಿ ಬಿಗಿ ಭದ್ರತೆ
- Movies
ವಿಷ್ಣು ಸ್ಮಾರಕ ವಿಚಾರಕ್ಕೆ ಆಕ್ರೋಶ: ಫಿಲ್ಮ್ ಚೇಂಬರ್ ವಿರುದ್ಧ ಸಿಡಿದೆದ್ದ ವೀರಕಪುತ್ರ ಶ್ರೀನಿವಾಸ್
- Sports
Ind vs NZ1st T20: ವಾಶಿಂಗ್ಟನ್ 'ಸುಂದರ' ಆಟ ವ್ಯರ್ಥ: ಭಾರತಕ್ಕೆ ಮೊದಲ ಪಂದ್ಯದಲ್ಲೇ ಸೋಲಿನ ಆಘಾತ
- Lifestyle
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ರಿಯಲ್‌ಮಿ ಎಕ್ಸ್' ಸ್ಪೈಡರ್ ಮ್ಯಾನ್ ಆವೃತ್ತಿ ಮಾರಾಟದ ದಿನಾಂಕ ಬಹಿರಂಗ!
ರಿಯಲ್‌ಮಿ ಕಂಪೆನಿ ಇಲ್ಲಿಯವರೆಗೂ ಬಿಡುಗಡೆ ಮಾಡಿರುವ ಪೋನ್‌ಗಳಲ್ಲೇ "ರಿಯಲ್‌ಮಿ' ಎಕ್ಸ್ ಅತ್ಯಾಧುನಿಕ ಸ್ಮಾರ್ಟ್‌ಫೋನ್ ಎಂಬುದು ನಿಮಗೆ ತಿಳಿದಿರಬಹುದು. ಇದೀಗ ಇದೇ ರಿಯಲ್‌ಮಿ ಎಕ್ಸ್ ಪೋನಿನ ವಿಶೇಷ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಮಾರಾಟಕ್ಕೆ ಬರುತ್ತಿವೆ. ರಿಯಲ್‌ಮಿ ಎಕ್ಸ್ ಸ್ಪೈಡರ್ ಮ್ಯಾನ್: ಫಾರ್ ಫ್ರಮ್ ಹೋಮ್ ಎಡಿಷನ್ ಮತ್ತು ರಿಯಲ್‌ಮಿ ಎಕ್ಸ್ ಮಾಸ್ಟರ್ ಆವೃತ್ತಿ ಸ್ಮಾರ್ಟ್‌ಫೋನ್‌ಗಳನ್ನು ನೀವು ಶೀಘ್ರದಲ್ಲೇ ಖರೀದಿಸಬಹುದಾಗಿದೆ.

ಹೌದು, ರಿಯಲ್ಮೆ ಎಕ್ಸ್ ಸ್ಪೈಡರ್ ಮ್ಯಾನ್: ಫಾರ್ ಫಾರ್ ಹೋಮ್ ಎಡಿಷನ್ ಜುಲೈ 30 ರಂದು ಮೊದಲ ಬಾರಿಗೆ ಖರೀದಿಗೆ ಲಭ್ಯವಿರುತ್ತದೆ. ಈ ರೂಪಾಂತರವು 8 ಜಿಬಿ RAM ಮತ್ತು 128 ಜಿಬಿ ಶೇಖರಣಾ ಸ್ಥಳದೊಂದಿಗೆ 20,999 ರೂ.ಗಳಿಗೆ ಖರೀದಿಗೆ ಲಭ್ಯವಿದೆ. ಇದು ಮೇಲೆ ತಿಳಿಸಿದ ದಿನಾಂಕದಿಂದ ಆಯ್ದ ಚಿಲ್ಲರೆ ಅಂಗಡಿಗಳ ಮೂಲಕ ಮತ್ತು ಆಗಸ್ಟ್ 1 ರಿಂದ ಫ್ಲಿಪ್ಕಾರ್ಟ್ ಮತ್ತು ರಿಯಲ್‌ಮಿ.ಕಾಮ್ ಮೂಲಕ ಆಫ್‌ಲೈನ್‌ನಲ್ಲಿ ಲಭ್ಯವಿರುತ್ತದೆ ಎಂದು ರಿಯಲ್‌ಮಿ ಕಂಪೆನಿ ತಿಳಿಸಿದೆ.
ಹಾಗೆಯೇ, ರಿಯಲ್ಮೆ ಎಕ್ಸ್ ಮಾಸ್ಟರ್ ಎಡಿಷನ್ ಎಂದು ಕರೆಯಲ್ಪಡುವ ಜಪಾನಿನ ಡಿಸೈನ ನಾವೊಟೊ ಫುಕಾಸಾವಾ ಸಂಗ್ರಹದ ಸ್ಮಾರ್ಟ್‌ಫೋನ್ ಇದೇ ಆಗಸ್ಟ್ 3 ರಿಂದ ಖರೀದಿಗೆ ಲಭ್ಯವಿರುತ್ತದೆ. 8 ಜಿಬಿ RAM ಮತ್ತು 128 ಜಿಬಿ ಸ್ಟೋರೇಜ್ ಸ್ಪೇಸ್ ಹೊಂದಿರುವ ಈ ಸಾಧನವು ರೂ. 19,999 ಇದು ಆಗಸ್ಟ್ 3 ರಿಂದ ಆಫ್‌ಲೈನ್ ಮಳಿಗೆಗಳ ಮೂಲಕ ಮತ್ತು ಆಗಸ್ಟ್ 9 ರಿಂದ ಫ್ಲಿಪ್ಕಾರ್ಟ್ ಮತ್ತು ರಿಯಲ್‌ಮಿ.ಕಾಮ್ ಮೂಲಕ ಮಾರಾಟವಾಗಲಿದೆ ಎಂದು ಕಂಪೆನಿ ತಿಳಿಸಿದೆ.

ರಿಯಲ್‌ಮಿ ಕಂಪನಿಯು ವಿಶೇಷವಾಗಿ ಪರಿಚಯಿಸಿರುವ ರಿಯಲ್‌ಮಿ ಎಕ್ಸ್ ಸ್ಪೈಡರ್ ಮ್ಯಾನ್: ಫಾರ್ ಫ್ರಮ್ ಹೋಮ್ ಎಡಿಷನ್ ಮತ್ತು ರಿಯಲ್‌ಮಿ ಎಕ್ಸ್ ಮಾಸ್ಟರ್ ಆವೃತ್ತಿ ಎರಡೂ ಸ್ಮಾರ್ಟ್‌ಪೋನ್‌ಗಳು ಒಂದೇ ರೀತಿಯಾಗಿ ಫೀಚರ್ಸ್ ಹೊಂದಿವೆ. ಆದರೆ, ವಿನ್ಯಾಸದಲ್ಲಿ ಮಾತ್ರ ಬದಲಾವಣೆಯನ್ನು ಹೊಂದಿವೆ. ಹಾಗಾದರೆ, ಈ ಎರಡೂ ಸ್ಮಾರ್ಟ್‌ಪೋನ್‌ಗಳು ಹೊಂದಿರುವ ಫೀಚರ್ಸ್ ಯಾವುವು? ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳೇನು ಎಂಬುದನ್ನು ಮುಂದೆ ಓದಿ ತಿಳಿಯಿರಿ.

ನೋಚ್‌ಲೆಸ್ ಡಿಸ್‌ಪ್ಲೇ
ರಿಯಲ್ ಮಿ ಎಕ್ಸ್ 6.53-ಇಂಚಿನ ಪೂರ್ಣ-ಎಚ್‌ಡಿ + (1080x2340 ಪಿಕ್ಸೆಲ್‌ಗಳು) AMOLED ನೋಚ್ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ಪೂರ್ಣ ಹೆಚ್‌ಡಿ ರೆಶಲ್ಯೂಶನ್ ಒಳಗೊಂಡಿದೆ. ಡಿಸ್‌ಪ್ಲೇಯ ಸುತ್ತಲೂ ಅತಿ ಕಡಿಮೆ ಅಂಚನ್ನು ಹೊಂದಿದ್ದು, ನೋಡಲು ಆಕರ್ಷಕವಾಗಿದೆ. ಗೇಮ್ಸ್ ಆಡಲು ಮತ್ತು ವಿಡಿಯೊ ವೀಕ್ಷಿಸಲು ಡಿಸ್‌ಪ್ಲೇಯು ಅತ್ಯುತ್ತಮ ಎನಿಸಲಿದೆ.

ಸ್ನ್ಯಾಪ್‌ಡ್ರಾಗನ್ 710
ರಿಯಲ್ ಮಿ 3 ಪ್ರೊ ದಲ್ಲಿಯೂ ಸಹ ಕಂಪನಿಯು ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಅನ್ನು ನೀಡಿತ್ತು. ಈಗ ರಿಯಲ್ ಮಿ ಎಕ್ಸ್ ಸ್ಮಾರ್ಟ್‌ಫೋನಿನಲ್ಲಿಯೂ ಸಹ ಸ್ನ್ಯಾಪ್‌ಡ್ರಾಗನ್ 710 ಪ್ರೊಸೆಸರ್ ಅನ್ನು ನೀಡಿದೆ. ಮಲ್ಟಿಟಾಸ್ಕ್ ಕೆಲಸಗಳು ಸುಲಭವಾಗಿ ಮಾಡಬಹುದಾಗಿದ್ದು, ಗೇಮ್ ಆಡಲು ಸಹ ಪೂರಕವಾಗಿರಲಿದೆ.

ಪಾಪ್‌ಅಪ್ ಸೆಲ್ಫಿ
ಈಗಿನ ಪ್ರಮುಖ ಸ್ಮಾರ್ಟ್‌ಪೋನ್‌ಗಳಲ್ಲಿ ಸೆಲ್ಫಿಗಾಗಿ ಪಾಪ್‌ಅಪ್ ಕ್ಯಾಮೆರಾ ಆಯ್ಕೆಯನ್ನು ಒದಗಿಸಲಾಗುತ್ತಿದೆ. ರಿಯಲ್ ಮಿ ಎಕ್ಸ್ ಸ್ಮಾರ್ಟ್‌ಫೋನಿನಲ್ಲಿಯೂ ಸಹ ಪಾಪ್‌ಅಪ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನಿನ 16ಮೆಗಾಪಿಕ್ಸಲ್ ಸೆಲ್ಫಿ ಕ್ಯಾಮೆರಾವುನ್ನು ಒದಗಿಸಿದ್ದು, ಅದು 0.7 ಸೆಕೆಂಡ್ಸ್‌ನ ಒಳಗೆ ತೆರೆದುಕೊಳ್ಳುತ್ತದೆ.

48ಎಂಪಿ ಕ್ಯಾಮೆರಾ
ಸದ್ಯ ಟ್ರೆಂಡಿಂಗ್‌ನಲ್ಲಿರುವ ಫೀಚರ್ಸ್‌ಗಳಲ್ಲಿ 48ಎಂಪಿ ಕ್ಯಾಮೆರಾ ಆಯ್ಕೆಯು ಸಹ ಒಂದಾಗಿದೆ. ರಿಯಲ್ ಮಿ ಎಕ್ಸ್ ಸ್ಮಾರ್ಟ್‌ಫೋನ್ ಸಹ ಹಿಂಬದಿಯಲ್ಲಿ 48ಎಂಪಿ ಕ್ಯಾಮೆರಾ ಫೀಚರ್ ಅನ್ನು ಹೊಂದಿದ್ದು, ಸೋನಿಯ IMX586 ಸೆನ್ಸಾರ್ ಈ ಕ್ಯಾಮೆರಾ ಒಳಗೊಂಡಿದೆ. ಹಾಗೆಯೇ ಅದರ ಅಪರ್ಚರ್ f/1.7 ಸಾಮರ್ಥ್ಯದಲ್ಲಿದೆ.

VOOC 3.0
ರಿಯಲ್ ಮಿ ಎಕ್ಸ್ ಸ್ಮಾರ್ಟ್ಫೋನ್‌ನಲ್ಲಿ 3,765mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, ಬ್ಯಾಟರಿಯು ದೀರ್ಘಕಾಲದವರೆಗೂ ಬಾಳಿಕೆ ಬರಲಿದೆ. ಇದರೊಂದಿಗೆ VOOC 3.0 ಚಾರ್ಜಿಂಗ್ ತಂತ್ರಜ್ಞಾನವನ್ನು ಒದಗಿಸಲಾಗಿದ್ದು, ಇದರ ನೆರವಿನಿಂದ ಸ್ಮಾರ್ಟ್‌ಫೋನ್ ವೇಗವಾಗಿ ಚಾರ್ಜ್ ಪಡೆದುಕೊಳ್ಳುತ್ತದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470