ರಿಯಲ್‌ಮಿ X7 ಮ್ಯಾಕ್ಸ್‌ 5G ಫಸ್ಟ್‌ ಲುಕ್: ಮೀಡ್‌ರೇಂಜ್‌ನಲ್ಲಿ ಜಬರ್ದಸ್ತ್ ಸ್ಮಾರ್ಟ್‌ಫೋನ್‌!

|

ಜನಪ್ರಿಯ ಮೊಬೈಲ್ ತಯಾರಿಕಾ ಸಂಸ್ಥೆಗಳಲ್ಲಿ ಒಂದಾಗಿರುವ ರಿಯಲ್‌ಮಿಯು ಈಗಾಗಲೇ X ಸರಣಿಯಲ್ಲಿ ಹಲವು ಫೋನ್‌ಗಳನ್ನು ಲಾಂಚ್ ಮಾಡಿ ಸೈ ಎನಿಸಿಕೊಂಡಿದೆ. ಆ ಪೈಕಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ರಿಯಲ್‌ಮಿ X7 ಮ್ಯಾಕ್ಸ್‌ 5G ಹಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದೆ. ಮುಖ್ಯವಾಗಿ 5G ಸಪೋರ್ಟ್‌ ನೊಂದಿಗೆ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿದೆ.

ರಿಯಲ್‌ಮಿ

ಹೌದು, ರಿಯಲ್‌ಮಿ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ನೂತನವಾಗಿ ಪರಿಚಯಿಸಿರುವ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಮೀಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಫೋನ್ 120Hz ರೀಫ್ರೇಶ್‌ ರೇಟ್ ಒಳಗೊಂಡ ಸೂಪರ್ AMOLED ಡಿಸ್‌ಪ್ಲೇ ಅನ್ನು ಪಡೆದುಕೊಂಡಿದೆ. ಇದರೊಂದಿಗೆ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗಾದರೇ ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನಿನ ಫಸ್ಟ್‌ ಲುಕ್ ಹೇಗಿದೆ?.. ಫೀಚರ್ಸ್‌ಗಳ ಕಾರ್ಯ ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 360Hz ಟಚ್‌ ಸ್ಯಾಂಪಲ್‌ ರೇಟ್ ಹೊಂದಿದೆ. ಗೇಮಿಂಗ್ ಮತ್ತು ವಿಡಿಯೊ ವೀಕ್ಷಣೆಗೆ ಪೂರಕವಾಗಿದೆ. ಮೊದಲ ನೋಟದಲ್ಲಿಯೇ ಗ್ರಾಹಕರಿಗೆ ಈ ಫೋನ್ ಡಿಸೈನ್ ಹೆಚ್ಚು ಆಕರ್ಷಕ ಅನಿಸಲಿದೆ.

ಪ್ರೊಸೆಸರ್‌ ಯಾವುದು

ಪ್ರೊಸೆಸರ್‌ ಯಾವುದು

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ Dimensity 1200 SoC ಪ್ರೊಸೆಸರ್‌ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಅಧಿಕ RAM ಬಯಸುವ ಗ್ರಾಹಕರಿಗೆ ಈ ಫೋನ್ ಆಕರ್ಷಕ ಎನಿಸಲಿದೆ. ಪ್ರೊಸೆಸರ್ ವೇಗವು ಉತ್ತಮವಾಗಿದ್ದು, ಮಲ್ಟಿಟಾಸ್ಕ್ ಕೆಲಸಗಳು ಸರಾಗವಾಗಿ ನಡೆಯುತ್ತವೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟ್‌ಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದರು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿ ಗಮನ ಸೆಳೆದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 50W ಅಥವಾ 60W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ?

ಬೆಲೆ ಮತ್ತು ಲಭ್ಯತೆ?

ರಿಯಲ್‌ಮಿ X7 ಮ್ಯಾಕ್ಸ್‌ 5G ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರಕ್ಕೆ 26,999ರೂ. ಆಗಿದೆ. ಹಾಗೂ 12GB RAM + 256GB ಸ್ಟೋರೇಜ್‌ ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಇನ್ನು ಈ ಪೋನ್ ಬ್ಲ್ಯಾಕ್, ಸಿಲ್ವರ್ ಹಾಗೂ ಮಿಲ್ಕಿ ವೇ ಬಣ್ಣಗಳ ಆಯ್ಕೆಗಳನ್ನು ಪಡೆದಿದೆ.

Best Mobiles in India

English summary
Realme X7 Max 5G First Look: High-Performance Smartphone For Everyone.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X