ರೆಡ್ಮಿ 10 ಪ್ರೈಮ್ ಮತ್ತು ಗ್ಯಾಲಕ್ಸಿ M12: ಖರೀದಿಗೆ ಯಾವ ಫೋನ್ ಬೆಸ್ಟ್?
ಜನಪ್ರಿಯ ಶಿಯೋಮಿ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ ರೆಡ್ಮಿ 10 ಪ್ರೈಮ್ ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿರುವ ಜೊತೆಗೆ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಸಹ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಉತ್ತಮ ಅನಿಸಿದೆ. ಆದರೆ ಇವೆರಡರಲ್ಲಿ ಖರೀದಿಗೆ ಯಾವುದು ಯೋಗ್ಯ?

ಶಿಯೋಮಿ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಈ ಎರಡು ಫೋನ್‌ಗಳು ಬಜೆಟ್ ಬೆಲೆಯಲ್ಲಿ ಕಾಣಿಸಿಕೊಂದಿವೆ. ಆದರೆ ಈ ಎರಡು ಫೋನ್‌ಗಳ ಫೀಚರ್ಸ್‌ಗಳಲ್ಲಿ ಭಿನ್ನತೆ ಇರುವುದನ್ನು ಗಮನಿಸಬಹುದು. ಹೊಸ ರೆಡ್ಮಿ 10 ಪ್ರೈಮ್ ಫೋನಿನ ಮುಖ್ಯ ಕ್ಯಾಮೆರಾ 50ಎಂಪಿ ಸೆನ್ಸಾರ್‌ನಲ್ಲಿದೆ ಹಾಗೆಯೇ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಕ್ಯಾಮೆರಾವು 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಡಿಸ್‌ಪ್ಲೇ ರಚನೆ ಹಾಗೂ ರೆಸಲ್ಯೂಶನ್‌ನಲ್ಲಿಯೂ ಹಾಗೂ ಬ್ಯಾಟರಿ ಬಾಳಿಕೆಯಲ್ಲಿಯೂ ಭಿನ್ನತೆ ಕಾಣಬಹುದಾಗಿದೆ. ಹಾಗಾದರೇ ಈ ಎರಡು ಫೋನ್‌ಗಳಲ್ಲಿ ಖರೀದಿಗೆ ಯೋಗ್ಯ ಯಾವುದು? ಇವುಗಳ ಫೀಚರ್ಸ್‌ಗಳೆನು? ಬೆಲೆ ಎಷ್ಟು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಶಿಯೋಮಿ ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆಯು 12,499ರೂ. ಆಗಿದೆ. ಹಾಗೂ 6GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯ ಬೆಲೆ 14,499ರೂ, ಆಗಿದೆ. ಅಂದಹಾಗೇ ಈ ಫೋನ್ ಇದೇ ಸೆಪ್ಟೆಂಬರ್ 7 ರಿಂದ ಅಮೆಜಾನ್, ಮಿ.ಕಾಮ್ ತಾಣಗಳ ಮೂಲಕ ಮಾರಾಟ ಶುರು ಮಾಡಲಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಫೋನ್ 4GB RAM+64GB ವೇರಿಯಂಟ್ ಬೆಲೆಯು 10,999ರೂ ಆಗಿದೆ. ಮತ್ತು 6GB RAM+128GB ವೇರಿಯಂಟ್ ದರವು 13,499ರೂ. ಆಗಿದೆ.

ಆಕರ್ಷಕ ಡಿಸ್‌ಪ್ಲೇ ರಚನೆ
ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, ಅದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಇದು TFT ಇನ್ಫಿನಿಟಿ-ವಿ-ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇ ರೀಫ್ರೇಶ್ ರೇಟ್ 90Hz ಆಗಿದೆ. ವಿಡಿಯೋ ವೀಕ್ಷಣೆಗೆ ಹಾಗೂ ಗೇಮಿಂಗ್‌ಗೆ ಪೂರಕವಾಗಿದೆ.

ಪ್ರೊಸೆಸರ್ ಸಾಮರ್ಥ್ಯ ಎಷ್ಟು
ರೆಡ್‌ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಅವಕಾಶವನ್ನು ಇದು ಒಳಗೊಂಡಿದೆ.

ಕ್ಯಾಮೆರಾ ಸೆನ್ಸಾರ್ ಭಿನ್ನತೆಗಳೆನು
ರೆಡ್‌ಮಿ 10 ಪ್ರೈಮ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಕ್ಯಾಮರಾ ಸೆಟಪ್ ಫುಲ್ ಹೆಚ್‌ಡಿ ವಿಡಿಯೋ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಅದೇ ರೀತಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು f/2.0 ಅಪರ್ಚರ್ ನೊಂದಿಗೆ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾವು f/2.2 ಅಪರ್ಚರ್‌ನೊಂದಿಗೆ 5 ಮೆಗಾಪಿಕ್ಸೆಲ್ ಸೆನ್ಸಾರ್, ಅಲ್ಟ್ರಾ-ವೈಡ್-ಆಂಗಲ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರ್ ಇದ್ದು, f/2.2 ಅಪರ್ಚರ್ ಸಾಮರ್ಥ್ಯವನ್ನು ಒಳಗೊಂಡಿದೆ. ವಾಟರ್‌ಡ್ರಾಪ್ ಸ್ಕೈಲ್ ನಾಚ್ ಇದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ರೆಡ್ಮಿ 10 ಪ್ರೈಮ್ ಸ್ಮಾರ್ಟ್‌ಫೋನ್ 6,000mAh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್ v5.1, GPS, FM ರೇಡಿಯೋ, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 4G ನೆಟ್‌ವರ್ಕ್‌ನಲ್ಲಿ 58 ಗಂಟೆಗಳ ಟಾಕ್‌ಟೈಮ್ ಅನ್ನು ನೀಡಲಿದೆ. ಈ ಫೋನ್ 164.0x75.9x9.7mm ಸುತ್ತಳತೆಯನ್ನು ಪಡೆದಿದ್ದು, ಹಾಗೆಯೇ 221 ಗ್ರಾಂ ತೂಕವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ, ವೈ-ಫೈ 802.11 ಬಿ / ಜಿ / ಎನ್, ಬ್ಲೂಟೂತ್ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ, ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ.


Click it and Unblock the Notifications








