Home
ಮೊಬೈಲ್

9,999 ಸಾಕು! 50MP ಕ್ಯಾಮೆರಾ.. 128GB ಸ್ಟೋರೇಜ್.. ಅದೂ ಹೊಸ Redmi ಫೋನ್

ರೆಡ್ಮಿ ಸಂಸ್ಥೆಯು ಭಾರತದಲ್ಲಿ ಇತ್ತೀಚೆಗೆ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಅದುವೇ, ರೆಡ್ಮಿ 14C 5G (Redmi 14C 5G) ಸ್ಮಾರ್ಟ್‌ಫೋನ್‌ ಆಗಿದೆ. ಕಂಪನಿಯು 10 ಸಾವಿರ ರೂ.ಗಿಂತ ಕಡಿಮೆ ಬೆಲೆ ಈ ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಫೋನಿನ ಸ್ಟೈಲಿಶ್ ಲುಕ್ ಮತ್ತು ವೈಶಿಷ್ಟ್ಯಗಳು ಗ್ರಾಹಕರನ್ನು ಆಕರ್ಷಿಸಿವೆ. ಅಂದಹಾಗೆ, ಈ ಫೋನ್‌ ಜನವರಿ 10 ರಿಂದ ಮೊದಲ ಮಾರಾಟ ಪ್ರಾರಂಭಿಸಲಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ 14C 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗಲಿದೆ. ನೀವು ಸ್ಟಾರ್‌ಗೇಜ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಪರ್ಪಲ್‌ ಬಣ್ಣದಲ್ಲಿ ಈ ಫೋನನ್ನು ಖರೀದಿಸಬಹುದು. ಈ ಫೋನ್ 6.88 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ ಇದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. 5160mAh ಬ್ಯಾಟರಿ ಮತ್ತು 18W ಸ್ಪೀಡ್‌ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

9,999 ಸಾಕು! 50MP ಕ್ಯಾಮೆರಾ.. 128GB ಸ್ಟೋರೇಜ್.. ಯಾವ ಫೋನ್?

ರೆಡ್ಮಿ 13 5G ಫೋನಿನ ಫೀಚರ್ಸ್‌

ಡಿಸ್ಪ್ಲೇ ಹೇಗಿದೆ

ರೆಡ್ಮಿ 13 5G ಸ್ಮಾರ್ಟ್‌ಫೋನ್ 6.88 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1600 x 720 ಪಿಕ್ಸೆಲ್‌ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್‌

ರೆಡ್ಮಿ 13 5G ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್‌ ಅಡ್ರಿನೊ 613 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಬೊಂಬಾಟ್ ಕ್ಯಾಮೆರಾ

ರೆಡ್ಮಿ 13 5G ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಶಕ್ತಿಶಾಲಿ ಬ್ಯಾಟರಿ

ರೆಡ್ಮಿ 13 5G ಸ್ಮಾರ್ಟ್‌ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ 13 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.4, ಎಫ್‌ಎಂ ರೇಡಿಯೋ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ 14C 5G ಫೋನಿನ ಬೆಲೆ

ರೆಡ್ಮಿ 14C 5G ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವನ್ನು 9,999 ರೂ.ಗೆ ಮಾರಾಟ ಮಾಡಲಾಗುವುದು. 4GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 10,999 ರೂ. ಇದೆ. ಮತ್ತು 6GB RAM + 128GB ಸ್ಟೋರೇಜ್ ಆಯ್ಕೆಯನ್ನು 11,999 ರೂ.ಗೆ ಖರೀದಿಸಬಹುದು. ನೀವು, ಜನವರಿ 10 ರಿಂದ ರೆಡ್ಮಿ ವೆಬ್‌ಸೈಟ್, ಫ್ಲಿಪ್‌ಕಾರ್ಟ್ ಮತ್ತು ಅಮೆಜಾನ್‌ ಮೂಲಕ ತನ್ನ ಮೊದಲ ಮಾರಾಟ ಶುರು ಮಾಡಿದೆ.

Best Mobiles in India

English summary
Redmi 14C 5G First Sale Starts on January 10: Price, Offer and more: know Price, Offer, Specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+