Home
ಮೊಬೈಲ್

ಅಗ್ಗದ ಬೆಲೆ! 5160mAh ಬ್ಯಾಟರಿ.. 50MP ಕ್ಯಾಮೆರಾ.. ಇಂದು Redmi 14C 5G ಸೇಲ್

ರೆಡ್ಮಿ ಇತ್ತೀಚೆಗೆ ಭಾರತದಲ್ಲಿ ಹೊಸ ಫೋನನ್ನು ಲಾಂಚ್ ಮಾಡಿದೆ. ಇದು ರೆಡ್ಮಿ 14C 5G (Redmi 14C 5G) ಹೆಸರಿನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್‌ ಇಂದು (ಜನವರಿ 10) ಅಮೆಜಾನ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ. ನೀವು 10,000 ರೂ.ಗಿಂತ ಕಡಿಮೆ ಬೆಲೆ ಈ ಫೋನನ್ನು ಖರೀದಿಸಬಹುದು. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ 14C 5G ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಈ ಫೋನ್ 6.88 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 5160mAh ಬ್ಯಾಟರಿ ಮತ್ತು 18W ಸ್ಪೀಡ್‌ ಚಾರ್ಜಿಂಗ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗಲಿದೆ. ನೀವು ಸ್ಟಾರ್‌ಗೇಜ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಪರ್ಪಲ್‌ ಬಣ್ಣದಲ್ಲಿ ಖರೀದಿಸಬಹುದು. ಈ ಫೋನಿನ ಆಫರ್ ಬೆಲೆ ತಿಳಿಯಲು ಮುಂದೆ ಓದಿ.

ಇಂದು Redmi 14C 5G ಸೇಲ್; 5160mAh ಬ್ಯಾಟರಿ, 50MP ಕ್ಯಾಮೆರಾ; ಅಗ್ಗದ ಬೆಲೆ!

ರೆಡ್ಮಿ 13 5G: ಟಾಪ್ 5 ವೈಶಿಷ್ಟ್ಯಗಳು

ದೊಡ್ಡ ಡಿಸ್ಪ್ಲೇ

ರೆಡ್ಮಿ 13 5G ಫೋನ್ 6.88 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1600 x 720 ಪಿಕ್ಸೆಲ್‌ ರೆಸಲ್ಯೂಶನ್‌, 120Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.

ಪವರ್‌ ಫುಲ್ ಪ್ರೊಸೆಸರ್‌

ರೆಡ್ಮಿ 13 5G ಮೊಬೈಲ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಫೋನ್‌ ಗ್ರಾಫಿಕ್ಸ್‌ಗಾಗಿ, ಅಡ್ರಿನೊ 613 ಜಿಪಿಯು ಹೊಂದಿದೆ. ಇದು ಆಂಡ್ರಾಯ್ಡ್‌ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಫೋನ್ 4GB RAM ಮತ್ತು 6GB RAM ಹೊಂದಿದೆ.

ಎರಡು ಅದ್ಭುತ ಕ್ಯಾಮೆರಾ

ರೆಡ್ಮಿ 13 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಇಂದು Redmi 14C 5G ಸೇಲ್; 5160mAh ಬ್ಯಾಟರಿ, 50MP ಕ್ಯಾಮೆರಾ; ಅಗ್ಗದ ಬೆಲೆ!

ಅದ್ಭುತ ಬ್ಯಾಟರಿ ಬ್ಯಾಕಪ್

ರೆಡ್ಮಿ 13 5G ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ 13 5G ಮೊಬೈಲ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಂಗ್ ಪಡೆದಿದೆ. ಜೊತೆಗೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.4, ಎಫ್‌ಎಂ ರೇಡಿಯೋ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ 14C 5G ಬೆಲೆ ಮತ್ತು ಲಭ್ಯತೆ

4GB RAM + 64GB ಸ್ಟೋರೇಜ್ = 9,999 ರೂ.
4GB RAM + 128GB ಸ್ಟೋರೇಜ್ = 10,999 ರೂ.
6GB RAM + 128GB ಸ್ಟೋರೇಜ್ = 11,999 ರೂ.

ರೆಡ್ಮಿ 14C 5G ಫೋನಿನ ಮೂಲ ರೂಪಾಂತರವನ್ನು 9,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಮಾದರಿಯ ಬೆಲ ಕ್ರಮವಾಗಿ 10,999 ರೂ. ಮತ್ತು 11,999 ರೂ.ಗೆ ಮಾರಾಟವಾಗಲಿದೆ. ಈ ಫೋನ್ ಇಂದು (ಜನವರಿ 10) ಮಧ್ಯಾಹ್ನ 12 ಗಂಟೆಯಿಂದ ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.

Best Mobiles in India

English summary
Redmi 14C 5G Goes on First Sale in India Today via Amazon: Check Price and Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+