Home
ಮೊಬೈಲ್

ಜಸ್ಟ್ 9,999 ರೂ.! 5160mAh ಬ್ಯಾಟರಿ.. 50MP ಕ್ಯಾಮೆರಾ.. ಬಂದೇ ಬಿಡ್ತು Redmi 14C 5G ಫೋನ್

ರೆಡ್ಮಿ ಅಭಿಮಾನಿಗಳ ಕಾಯುವಿಕೆ ಮುಗಿಯಿತು! ಅಗ್ಗದ ಬೆಲೆಯ ಹೊಸ ರೆಡ್ಮಿ ಮೊಬೈಲ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಹೌದು, ಬಹುನಿರೀಕ್ಷಿತ ರೆಡ್ಮಿ 14C 5G (Redmi 14C 5G) ಫೋನ್‌ ಭಾರತದಲ್ಲಿ ಬಿಡುಗಡೆಯಾಗಿದೆ. ಕಂಪನಿಯು ಈ ಫೋನನ್ನು 10,000 ರೂ.ಗಿಂತ ಕಡಿಮೆ ಬೆಲೆ ಪರಿಚಯಿಸಿದೆ. ಈ ಫೋನಿನ ಡಿಸೈನ್ ಮತ್ತು ಫೀಚರ್ಸ್‌ ರೆಡ್ಮಿ ಪ್ರಿಯರ ಗಮನ ಸೆಳೆದಿದೆ. ಬನ್ನಿ, ಹೊಸ ರೆಡ್ಮಿ 14C 5G ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ 14C 5G ಫೋನಿನ ಡಿಸ್ಪ್ಲೇ 6.88 ಇಂಚು ಹೊಂದಿದೆ. ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 128GB ಸ್ಟೋರೇಜ್‌, 5160mAh ಬ್ಯಾಟರಿ ಮತ್ತು 18W ಸ್ಪೀಡ್‌ ಚಾರ್ಜಿಂಗ್ ಒಳಗೊಂಡಿದೆ. ಇದು ಈ ವರ್ಷ ಬಿಡುಗಡೆಯಾದ ಮೊದಲ ಶಿಯೋಮಿ ಸ್ಮಾರ್ಟ್‌ಫೋನ್ ಆಗಿದೆ. ಕಂಪನಿಯು ಈ ಫೋನನ್ನು 'ನಂಬರ್ 1 5G' ಎಂಟರ್‌ಟೈನರ್ ಎಂದು ಹೇಳಿದೆ. ಈ ಫೋನಿನ ಬೆಲೆ ತಿಳಿಯಲು ಮುಂದೆ ಓದಿ.

ಜಸ್ಟ್ 9,999 ರೂ.! 5160mAh ಬ್ಯಾಟರಿ, 50MP ಕ್ಯಾಮೆರಾ; Redmi 14C 5G ಲಾಂಚ್

ರೆಡ್ಮಿ 13 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ 13 5G ಮೊಬೈಲ್ 6.88 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 1600 x 720 ಪಿಕ್ಸೆಲ್‌ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ರೆಡ್ಮಿ 13 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ ಆಕ್ಟಾಕೋರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 613 ಜಿಪಿಯು ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್

ರೆಡ್ಮಿ 13 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಸಹ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಜಸ್ಟ್ 9,999 ರೂ.! 5160mAh ಬ್ಯಾಟರಿ, 50MP ಕ್ಯಾಮೆರಾ; Redmi 14C 5G ಲಾಂಚ್

ಬ್ಯಾಟರಿ ಮತ್ತು ಚಾರ್ಜಿಂಗ್

ರೆಡ್ಮಿ 13 5G ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ 13 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಬ್ಲೂಟೂತ್ 5.4, ಎಫ್‌ಎಂ ರೇಡಿಯೋ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ 14C 5G ಬೆಲೆ

4GB RAM + 64GB ಸ್ಟೋರೇಜ್ = 9,999 ರೂ.
4GB RAM + 128GB ಸ್ಟೋರೇಜ್ = 10,999 ರೂ.
6GB RAM + 128GB ಸ್ಟೋರೇಜ್ = 11,999 ರೂ.

ರೆಡ್ಮಿ 14C 5G ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರದಲ್ಲಿ ಬಿಡುಗಡೆಯಾಗಿದೆ. ಈ ಫೋನಿನ ಆರಂಭಿಕ ಬೆಲೆ 9,999 ರೂ. ಆಗಿದೆ. 64GB ಸ್ಟೋರೇಜ್‌ ರೂಪಾಂತರವು 10,999 ರೂ. ಮತ್ತು 128GB ಸ್ಟೊರೇಜ್ ಆಯ್ಕೆಯನ್ನು 11,999 ರೂ.ಗೆ ಬಿಡುಗಡೆ ಮಾಡಲಾಗಿದೆ. ನೀವು ಸ್ಟಾರ್‌ಗೇಜ್ ಬ್ಲಾಕ್, ಸ್ಟಾರ್‌ಲೈಟ್ ಬ್ಲೂ ಮತ್ತು ಸ್ಟಾರ್‌ಡಸ್ಟ್ ಪರ್ಪಲ್‌ ಬಣ್ಣದಲ್ಲಿ ಈ ಫೋನನ್ನು ಖರೀದಿಸಬಹುದು. ಜನವರಿ 10 ರಿಂದ ಕಂಪನಿಯ ವೆಬ್‌ಸೈಟ್, ಫ್ಲಿಪ್‌ಕಾರ್ಟ್, ಅಮೆಜಾನ್‌ ಮೂಲಕ ತನ್ನ ಮೊದಲ ಮಾರಾಟ ಪ್ರಾರಂಭಿಸಲಿದೆ.

Best Mobiles in India

English summary
Redmi 14C 5G with Snapdragon 4 Gen 2 launched in India: know Price, Specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+